Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಜ್ಜಯ್ಯನ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ: ಶುಭ ಮುಹೂರ್ತದ ಲೆಕ್ಕಾಚಾರ
ಕರ್ನಾಟಕಪ್ರಮುಖ

ಅಜ್ಜಯ್ಯನ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ: ಶುಭ ಮುಹೂರ್ತದ ಲೆಕ್ಕಾಚಾರ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಸದ್ಯದಲ್ಲೇ ತೆರೆಬೀಳಲಿದ್ದು, ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇಂದು ಸಂಜೆ ನಡೆಯಲಿರುವ ಮಹತ್ವದ ಶಾಸಕಾಂಗ ಪಕ್ಷದ (CLP) ಸಭೆಗೂ ಮುನ್ನವೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಠಾತ್ತನೆ ರಾಜಭವನಕ್ಕೆ ಧಾವಿಸಿ, ರಾಜ್ಯಪಾಲರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.

ರಾಜ್ಯಪಾಲರೊಂದಿಗಿನ ಈ ಭೇಟಿಯ ವೇಳೆ ಡಿ.ಕೆ. ಶಿವಕುಮಾರ್ ಅವರು ಹೊಸ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಜೂನ್ 1 ಅಥವಾ ಜೂನ್ 5 ರ ದಿನಾಂಕಗಳನ್ನು ತಾತ್ಕಾಲಿಕವಾಗಿ ಪ್ರಸ್ತಾಪಿಸಿದ್ದಾರೆ ಎನ್ನಲಾಗಿದೆ. ಆದರೆ, ಇವೆಲ್ಲದರ ಮಧ್ಯೆ ರಾಜಕೀಯ ಲೆಕ್ಕಾಚಾರ ಹಾಗೂ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಜೂನ್ 3 ರಂದೇ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಅಜ್ಜಯ್ಯನ ಪರಮ ಭಕ್ತರಾಗಿರುವ ಶಿವಕುಮಾರ್ ಅವರು ಮಠದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಮಠದ ಪ್ರಮುಖರೊಂದಿಗೆ ಪ್ರಮಾಣವಚನ ಸ್ವೀಕಾರದ ದಿನಾಂಕದ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು.

ಮಠದ ಮೂಲಗಳ ಪ್ರಕಾರ, ಜೂನ್ 3 ರಂದು ಅತ್ಯಂತ ಶುಭ ದಿನ ಹಾಗೂ ಮುಹೂರ್ತ ಚೆನ್ನಾಗಿದೆ ಎಂದು ಅಜ್ಜಯ್ಯನ ಪೀಠವು ತಿಳಿಸಿದೆ. ಅದರಲ್ಲೂ ವಿಶೇಷವಾಗಿ ಡಿ.ಕೆ. ಶಿವಕುಮಾರ್ ಅವರ ಜಾತಕ ಮತ್ತು ಗ್ರಹಗತಿಗಳ ಲೆಕ್ಕಾಚಾರದ ಪ್ರಕಾರ ಜೂನ್ 3 ರಂದು ಅಧಿಕಾರ ಸ್ವೀಕರಿಸುವುದು ಅವರ ರಾಜಕೀಯ ಭವಿಷ್ಯಕ್ಕೆ ಅತ್ಯಂತ ಯೋಗದಾಯಕ ಮತ್ತು ಯಶಸ್ವಿ ಮುಹೂರ್ತವಾಗಿದೆ ಎಂದು ಪೀಠವು ಗ್ರೀನ್ ಸಿಗ್ನಲ್ ನೀಡಿದೆ.

ಮಠದ ಮಾರ್ಗದರ್ಶನ ಮತ್ತು ಜಾತಕದ ಬಲವನ್ನು ಗಂಭೀರವಾಗಿ ಪರಿಗಣಿಸಿರುವ ಡಿ.ಕೆ. ಶಿವಕುಮಾರ್ ಅವರು ಜೂನ್ 3 ರಂದೇ ಪ್ರಮಾಣವಚನ ಸ್ವೀಕರಿಸಲು ತೀವ್ರ ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಇಂದು ಸಂಜೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಹೊರಬೀಳುವ ನಿರೀಕ್ಷೆಯಿದೆ.

Bank Holiday List ಜೂನ್ ತಿಂಗಳಲ್ಲಿ 12 ದಿನಗಳವರೆಗೆ ಬ್ಯಾಂಕ್ ರಜೆ

TAGGED:DK Shivakumar's visit to Ajjaiah's Mutt: Calculation of the auspicious moment
Share This Article
Facebook Twitter Copy Link Print
Previous Article Bank Holiday List ಜೂನ್ ತಿಂಗಳಲ್ಲಿ 12 ದಿನಗಳವರೆಗೆ ಬ್ಯಾಂಕ್ ರಜೆ
Next Article Siddaramaiah ನಾನು ಮಾತ್ರವಲ್ಲ ನನ್ನ ಕುಟುಂಬ ಕೂಡಾ ರಾಜಕೀಯ ದ್ವೇಷಕ್ಕೆ ಬಲಿಯಾಗಿದೆ : ರಾಜೀನಾಮೆ ಬಳಿಕ ಸಿದ್ದರಾಮಯ್ಯ ಕಣ್ಣೀರಿನ ಮಾತು!

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?