newsics.com/ನ್ಯೂಸಿಕ್ಸ್
ಬಿಸಿಲಿನ ಬೇಗೆಯಿಂದ ಬಸವಳಿದು ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಮುಳುಗಿ ದುರ್ಮರಣ ಹೊಂದಿರುವಂತಹ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ನಡೆದಿದೆ.
ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ. ಗದಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೇಸಿಗೆಯ ಕಡು ಬಿಸಿಲಿನ ತಾಪ ತಾಳಲಾರದೆ ಮೂವರು ಅಪ್ರಾಪ್ತ ಬಾಲಕರು ಧಾರವಾಡ ತಾಲೂಕಿನ ಸಿಂಗನಹಳ್ಳಿ ಬಳಿಯ ಕೆರೆಯಲ್ಲಿ ಈಜಲು ಹೋಗಿದ್ದಾರೆ. ಆದರೆ ಈ ವೇಳೆ ಕೆರೆಯಲ್ಲಿ ಮುಳುಗಿ ಜಲಸಮಾಧಿಯಾಗಿದ್ದಾರೆ. ಮೃತರಲ್ಲಿ ಅಬ್ಬಾಸ್ ಮತ್ತು ಅಸ್ಲಂ ಸಹೋದರರು. ಸದ್ಯ ಮೂವರು ಬಾಲಕರ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಹೊರತೆಗೆದಿದ್ದಾರೆ.
ಒಂದೇ ಕಾರಿನಲ್ಲಿ ರಾಜಭವನಕ್ಕೆ ತೆರಳಿ ಒಗ್ಗಟ್ಟಿನ ಮಂತ್ರ ಜಪಿಸಿದ ಸಿದ್ದು-ಡಿಕೆಶಿ