newsics.com/ನ್ಯೂಸಿಕ್ಸ್
ಬೆಂಗಳೂರು: ಕಾವೇರಿ 2ನೇ ಹಂತದ 600 ಮಿ.ಮೀ. ವ್ಯಾಸದ ಮುಖ್ಯ ಕುಡಿಯುವ ನೀರಿನ ಕೊಳವೆಯಲ್ಲಿ ಉಂಟಾಗಿರುವ ಭಾರೀ ಸೋರಿಕೆಯನ್ನು ತಡೆಗಟ್ಟಲು ಬೆಂಗಳೂರು ಜಲಮಂಡಳಿಯು (ಬಿಡಬ್ಲ್ಯುಎಸ್‌ಎಸ್‌ಬಿ ) ತುರ್ತು ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಮೈಸೂರು ರಸ್ತೆ ಸೇವಾ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಶನಿವಾರ (ಮೇ 30) ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ . ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಸೌತ್‌ಎಂಡ್ ವೃತ್ತದ ಮುಖಾಂತರ ಮೈಸೂರು ರಸ್ತೆ ಸೇವಾ ಪ್ರದೇಶಗಳಿಗೆ ಪ್ರತಿನಿತ್ಯ 14 ಎಂಎಲ್‌ಡಿ ನೀರು ಸರಬರಾಜು ಮಾಡುವ ಕೊಳವೆಯಲ್ಲಿ ರಂಧ್ರ ಉಂಟಾಗಿ, ನೀರು ಪೋಲಾಗುತ್ತಿದೆ. ಆದ್ದರಿಂದ ಸೌತ್ ಎಂಡ್ ರಸ್ತೆಯ ಸುರಾನ ಕಾಲೇಜು ಬಳಿ ಇರುವ 24 ಅಂಗುಲದ ಕವಾಟವನ್ನು 8 ಗಂಟೆ ಕಾಲ ಬಂದ್ ಮಾಡಿ ದುರಸ್ತಿ ಕಾಮಗಾರಿಯನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ವ್ಯತ್ಯಯವಾಗುವ ಪ್ರಮುಖ ಪ್ರದೇಶಗಳು
* ಕಸ್ತೂರಬಾ ನಗರ
* ಬಾಪೂಜಿನಗರ* ಶಾಮಣ್ಣ ಗಾರ್ಡನ್
* ಮಂಜುನಾಥನಗರ
* ಹೊಸಗುಡ್ಡದಹಳ್ಳಿ
* ಹಳೇಗುಡ್ಡದಹಳ್ಳಿ
* ಅರಾಫತ್ ನಗರ
Coffee day shares ಕಾಫಿ ಡೇ ಷೇರು ದಿಢೀರ್ ಏರಿಕೆ ಹಿಂದೆ ಡಿಕೆ ಪ್ರಭಾವ!