Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಕೆಶಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದ್ಯಾಕೆ?
ಕರ್ನಾಟಕಪ್ರಮುಖ

ಡಿಕೆಶಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದ್ಯಾಕೆ?

Share
1 Min Read
SHARE

newsics.com/ನ್ಯೂಸಿಕ್ಸ್

ಹಲವು ಗೊಂದಲಗಳ ನಡುವೆ ಕೊನೆಗೂ ಕರ್ನಾಟಕದ ನೂತನ ಸಿಎಂ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ಅಂದರೆ ಜೂನ್ 3ರಂದು ಸಂಜೆ  ಡಿಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿದ್ದರೂ ಸಹ ಯಾವುದೇ ಆಡಂಬರವಿಲ್ಲದೇ ಲೋಕಭವನದಲ್ಲಿ (ರಾಜಭವನ) ಸರಳವಾದ ಕಾರ್ಯಕ್ರಮದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಲೋಕಸಭವನದಲ್ಲಿ ಸರಳ ಕಾರ್ಯಕ್ರಮ

ಇನ್ನು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪ್ರಮಾಣವಚನ ಸ್ವೀಕರಿಸಲು ಡಿಕೆ ಶಿವಕುಮಾರ್ ನಿರ್ಧರಿಸಿದ್ದರು. ಆದ್ರೆ, ಹೈಕಮಾಂಡ್ ಸೂಚನೆ ಮೇರೆಗೆ ಜೂನ್ 3ರಂದು ಸರಳವಾಗಿ ಲೋಕಭವನದ ಗ್ಲಾಸ್ ಹೌಸ್ ನಲ್ಲಿ ಪ್ರಮಾಣವಚನ ಸ್ವೀಕರಿಸಲು ನಿರ್ಧಾರವಾಗಿದೆ. ಸಾರ್ವಜನಿಕವಾಗಿ ತೊಂದರೆ ಆಗಬಾರದು ಎನ್ನುವ ದೃಷ್ಠಿಯಿಂದ ಆಡಂಬರದ ಕಾರ್ಯಕ್ರಮ ಬೇಡ ಎಂದು ತೀರ್ಮಾನಿಸಲಾಗಿದೆ.

ಡಿಕೆ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಸಿಎಂ ಆಗುತ್ತಿರುವುದರಿಂದ ಅದ್ಧೂರಿಯಾಗಿ ಕಾರ್ಯಕ್ರಮ ಮಾಡಲು ಆಪ್ತರು ನಿರ್ಧರಿಸಿದ್ದರು. ಹೀಗಾಗಿ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಾವಿರಾರು ಜನರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಲು ತೀರ್ಮಾನಿಸಲಾಗಿದ್ದು, ಇದಕ್ಕೆ ಸಕಲ ಸಿದ್ಧತೆಗಳು ಸಹ ನಡೆದಿದ್ದವು. ಆದ್ರೆ, ಕೊನೆ ಕ್ಷಣದಲ್ಲಿ ಹೈಕಮಾಂಡ್ ಆಡಂಬರಕ್ಕೆ ಬ್ರೇಕ್ ಹಾಕಿದ್ದು, ಸರಳವಾಗಿ ಪ್ರಮಾಣವಚನ ಸ್ವೀಕರಿಸಲು ಸೂಚಿಸಿದೆ. ತೈಲ ಬೆಲ ಏರಿಕೆ ಹಾಗೂ ವೀಕೆಂಡ್ ಆಗಿರುವುದರಿಂದ ಸಹಸ್ರಾರು ಜನ ಸೇರುವುದರಿಂದ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯೆತೆಗಳಿವೆ. ಇದರಿಂದ ಜನರಿಗೆ ತೊಂದರೆಯಾಗುವುದು ಬೇಡ. ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ಬೇಡ ಎಂದು ಸೂಚಿಸಲಾಗಿದೆ. ಅದರಂತೆ ಸರಳವಾಗಿ ಲೋಕಭವನದ ಗ್ಲಾಸ್ ಹೌಸ್​​ನಲ್ಲಿ ಅಧಿಕಾರ ಸ್ವೀಕಾರ ಸಮಾರಂಭ ನಡೆಯಲಿದೆ.

Siddaramaiah ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹಿನ್ನಡೆ ಆಯ್ತಾ?

TAGGED:Why are you simply taking the oath?
Share This Article
Facebook Twitter Copy Link Print
Previous Article Siddaramaiah ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹಿನ್ನಡೆ ಆಯ್ತಾ?
Next Article ಡಿಕೆಶಿ ಕ್ಯಾಬಿನೆಟ್‌ನ 14 ಸಂಭಾವ್ಯ ಸಚಿವರು ಇವರೇ ನೋಡಿ!

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?