newsics.com/ನ್ಯೂಸಿಕ್ಸ್
ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇತ್ತ ಉತ್ತರ ಒಳನಾಡಿನಲ್ಲೂ ವರುಣನ ಅಬ್ಬರ ಮುಂದುವರೆಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉತ್ತರ ಒಳನಾಡಿನ ಒಟ್ಟು 5 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ತೀರ ಪ್ರದೇಶಗಳಲ್ಲಿ ಸಮುದ್ರದ ಗಾಳಿಯ ವೇಗ ತೀವ್ರವಾಗಿರಲಿದೆ. ಈ ಹಿನ್ನೆಲೆಯಲ್ಲಿ ಜೂನ್ 2ರವರೆಗೆ ಕರಾವಳಿ ಭಾಗಕ್ಕೂ ಮುನ್ನೆಚ್ಚರಿಕೆ ನೀಡಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಮತ್ತು ತೀರ ಪ್ರದೇಶದ ನಿವಾಸಿಗಳು ಸುರಕ್ಷಿತವಾಗಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಅಭಿವೃದ್ಧಿಯ ಬಂಡಿ ಎಳೆದೊಯ್ಯುವ ಜವಾಬ್ದಾರಿ ನಿಮ್ಮದೇ… ಡಿಕೆಗೆ ಸಿದ್ದರಾಮಯ್ಯ ಭಾವುಕ ಪತ್ರ