newsics.com/ನ್ಯೂಸಿಕ್ಸ್
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಆಗಿ ಡಿ.ಕೆ.ಶಿವಕುಮಾರ್ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆದ ಸಿಎಲ್ಪಿ ಸಭೆಯಲ್ಲಿ, ಅಧಿಕೃತವಾಗಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಆಗಿದ್ದಾರೆ.
ಜೂನ್ 3 ರಂದು ಅಂದ್ರೆ ಬುಧವಾರ ಸಂಜೆ ಡಿಕೆ ಪದಗ್ರಹಣ ನಡೆಯಲಿದೆ. ಇನ್ನು ಡಿ.ಕೆ. ಶಿವಕುಮಾರ್ಗೆ ರಾಜ್ಯಪಾಲರು ಸರ್ಕಾರ ರಚಿಸಲು ಅಧಿಕೃತ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಭಾರೀ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಅವರ ನಿವಾಸದ ಮುಖ್ಯದ್ವಾರದಲ್ಲಿ ಪ್ರವೇಶಿಸುವವರಿಗಾಗಿ ಮೆಟಲ್ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದ್ದು, ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿಯೇ ಒಳಗೆ ಬಿಡಲಾಗುತ್ತಿದೆ.
ಅಮೆರಿಕಗೆ ಅಗತ್ಯವೆನಿಸಿದರೆ ಯುದ್ಧವನ್ನು ಪುನರಾಂಭಿಸುತ್ತವೆ : ಮುಂದುವರಿದ ಅನಿಶ್ಚಿತತೆ