Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಳೆ ಡಿಕೆಶಿ- ಸಿದ್ದರಾಮಯ್ಯ ದಿಲ್ಲಿಗೆ ಬುಲಾವ್? ಬುಧವಾರ ಡಿಕೆಶಿ ಒಬ್ಬರೇ ಪ್ರಮಾಣವಚನ?
ಕರ್ನಾಟಕದೇಶಪ್ರಮುಖ

ನಾಳೆ ಡಿಕೆಶಿ- ಸಿದ್ದರಾಮಯ್ಯ ದಿಲ್ಲಿಗೆ ಬುಲಾವ್? ಬುಧವಾರ ಡಿಕೆಶಿ ಒಬ್ಬರೇ ಪ್ರಮಾಣವಚನ?

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ನೂತನ ಸಚಿವ ಸಂಪುಟಕ್ಕೆ ಮೊದಲ ಹಂತದಲ್ಲಿ ಸೇರ್ಪಡೆ ಆಗುವ ಸಚಿವರ ಹೆಸರು ಅಂತಿಮಗೊಳಿಸಲು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ದೆಹಲಿಗೆ ತೆರಳುವ ಸಾಧ್ಯತೆಯಿದೆ.

ಬುಧವಾರ ನಡೆಯುವ ಪ್ರಮಾಣ ವಚನ ಸಮಾರಂಭದಲ್ಲಿ ಎಷ್ಟು ಮಂದಿ ಸಂಪುಟ ಸೇರಬೇಕು ಎಂಬ ಬಗ್ಗೆ ಚರ್ಚಿಸಲು ಉಭಯ ನಾಯಕರಿಗೂ ದೆಹಲಿಗೆ ಬುಲಾವ್ ಬರಲಿದೆ ಎನ್ನಲಾಗಿದೆ. ವಾಸ್ತವವಾಗಿ ಶಾಸಕಾಂಗ ಪಕ್ಷದ ಸಭೆಗಾಗಿ ನಗರಕ್ಕೆ ಆಗಮಿಸಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ ಅ‍ವರೊಂದಿಗೆ ರಾಜ್ಯ ನಾಯಕರು ಈ ಬಗ್ಗೆ ಚರ್ಚೆ ನಡೆಸಬೇಕಿತ್ತು. ಆದರೆ, ತುರ್ತು ಕಾರ್ಯ ನಿಮಿತ್ತ ಈ ನಾಯಕರು ತೆರಳಿದ್ದರಿಂದ ಈ ಸಭೆ ಸೋಮವಾರ ದೆಹಲಿಯಲ್ಲಿ ನಡೆಯುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ ಹಾಗೂ ವೇಣುಗೋಪಾಲ್‌ ಚರ್ಚೆ ನಡೆಸಲಿದ್ದಾರೆ. ನಂತರ ಈ ಸಭೆಯ ತೀರ್ಮಾನವನ್ನು ರಾಹುಲ್‌ ಗಾಂಧಿ ಅವರಿಗೆ ತಿಳಿಸಿ, ಒಪ್ಪಿಗೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕ ಭವನದಲ್ಲಿ ಸ್ಥಳಾವಕಾಶದ ಕೊರತೆ ಇರುವುದರಿಂದ ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರು ಹಾಗೂ ಅಧಿಕಾರಿಗಳು ಸೇರಿ 500 ಜನಕ್ಕೆ ಮಾತ್ರ ಅ‍ವಕಾಶ ನೀಡಲಾಗಿದೆ. ಇಷ್ಟು ಕಡಿಮೆ ಸಂಖ್ಯೆಯಲ್ಲಿ ಆಮಂತ್ರಿತರಿಗೆ ಅವಕಾಶ ನೀಡಿರುವುದರಿಂದ 9 ಮಂದಿ ಸಚಿವರು ಪ್ರಮಾಣ ವಚನ ಮಾಡಿದರೆ ಅವರ ಬೆಂಬಲಿಗರು ಆಗಮಿಸಿ ಗೊಂದಲ ನಿರ್ಮಾಣವಾಗಬಹುದು ಎಂಬ ಶಂಕೆಯಿದೆ.

ಮೊದಲು ಡಿಕೆಶಿ ಮಾತ್ರ ಪ್ರಮಾಣ ವಚನ ಸ್ವೀಕರಿಸುತ್ತಾರೆಯೇ ಅಥವಾ ಹಲವು ಸಚಿವರು ಸೇರುತ್ತಾರೆಯೇ ಎಂಬ ಗೊಂದಲ ಮೂಡಿದ್ದು, ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ.

500 ಮೀಟರ್ ಆಳದ ಕಂದಕಕ್ಕೆ ಬಿದ್ದ ಕಾರು : 8 ಮಂದಿ ಸಾವು

TAGGED:Will DKSH-Siddaramaiah visit Delhi tomorrow? Will DKSH take oath alone on Wednesday?
Share This Article
Facebook Twitter Copy Link Print
Previous Article 500 ಮೀಟರ್ ಆಳದ ಕಂದಕಕ್ಕೆ ಬಿದ್ದ ಕಾರು : 8 ಮಂದಿ ಸಾವು
Next Article CM Vijay -Trisha ತ್ರಿಶಾ ಜೊತೆಯಲ್ಲೇ ಬಂದು ಅಜಿತ್ ತಾಯಿಯ ಅಂತಿಮ ದರ್ಶನ ಪಡೆದ ಸಿಎಂ ವಿಜಯ್ : ವಿಡಿಯೋ ನೋಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?