Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿದ್ದರಾಮಯ್ಯರಿಂದ ಅಧಿಕಾರ ಹಸ್ತಾಂತರದಲ್ಲಿ ಪ್ರಮುಖ ಪಾತ್ರವಹಿಸಿದ್ದು ಇದೇ ವ್ಯಕ್ತಿ
ಕರ್ನಾಟಕಪ್ರಮುಖ

ಸಿದ್ದರಾಮಯ್ಯರಿಂದ ಅಧಿಕಾರ ಹಸ್ತಾಂತರದಲ್ಲಿ ಪ್ರಮುಖ ಪಾತ್ರವಹಿಸಿದ್ದು ಇದೇ ವ್ಯಕ್ತಿ

Share
2 Min Read
SHARE

newsics.com/ನ್ಯೂಸಿಕ್ಸ್

ಸಿದ್ದರಾಮಯ್ಯ ಅವರಿಂದ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆಯಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್ ತೆರೆಮರೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜ್ಯ ನಾಯಕತ್ವ ಮತ್ತು ಕಾಂಗ್ರೆಸ್ ಹೈಕಮಾಂಡ್ ನಡುವಿನ ವಿಶ್ವಾಸಾರ್ಹ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ.

ಯಾವುದೇ ಗದ್ದಲವಿಲ್ಲದೇ ಸರಾಗವಾಗಿ ನಡೆದ ಅಧಿಕಾರ ಹಸ್ತಾಂತರವು ಅನೇಕರನ್ನು ಅಚ್ಚರಿಗೊಳಿಸಿತ್ತು. ಇದರ ಹಿಂದೆ, 6 ಬಾರಿಯ ಶಾಸಕ ಮತ್ತು ಸಿದ್ದರಾಮಯ್ಯ ಅವರ ಆಪ್ತ ಜಾರ್ಜ್, ಬಿಕ್ಕಟ್ಟು ನಿರ್ವಾಹಕರಾಗಿ ಕೆಲಸ ಮಾಡಿದ್ದಾರೆ.

ಮೇ 26ರಂದು ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಚರ್ಚೆಗಾಗಿ ದೆಹಲಿಗೆ ಕರೆದಾಗ, ಅವರ ಜೊತೆ ಜಾರ್ಜ್ ತೆರಳಿದ್ದರು. ದಿನವಿಡೀ ನಡೆದ ಸಭೆಯ ನಂತರ, ರಾಹುಲ್ ಗಾಂಧಿ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಈ ಸಂದರ್ಭ ಆಘಾತಕ್ಕೊಳಗಾದ ಸಿದ್ದರಾಮಯ್ಯ ನೇರ ದೆಹಲಿಯ ಸುಂದರ್ ನಗರ ಪ್ರದೇಶದಲ್ಲಿರುವ ಜಾರ್ಜ್ ನಿವಾಸಕ್ಕೆ ತೆರಳಿದ್ದರು. ಈ ಸಂದರ್ಭ ಜಾರ್ಜ್ ಅವರೇ ಸಿದ್ದರಾಮಯ್ಯನವರನ್ನು ಸಮಾಧಾನಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ, ಶಿವಕುಮಾರ್ ಅವರನ್ನು ದೆಹಲಿಯಲ್ಲಿಯೇ ಇರಲು ಸೂಚಿಸಿದ್ದ ಹೈಕಮಾಂಡ್, ಅವರ ಬೆಂಬಲಿಗರಿಗೆ ಸಾರ್ವಜನಿಕವಾಗಿ ಸಂಭ್ರಮಾಚರಣೆ ಮಾಡದಂತೆ ಸೂಚಿಸಿತ್ತು.

ಸಿದ್ದರಾಮಯ್ಯ ಅವರ ರಾಜೀನಾಮೆ ನಿರ್ಧಾರದ ಸುದ್ದಿ ಹರಡುತ್ತಿದ್ದಂತೆ, ಅವರ ನಿಷ್ಠಾವಂತ ಸಚಿವರು ಮತ್ತು ಶಾಸಕರು ಅವರ ಪರ ಸಹಿ ಸಂಗ್ರಹ ಅಭಿಯಾನ ಆರಂಭಿಸಲು ಅಥವಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಜಿ.ಪರಮೇಶ್ವರ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸುವಂತೆ ಒತ್ತಡ ಹೇರಿದ್ದರು ಎಂದು ತಿಳಿದುಬಂದಿದೆ. ಈ ಕುರಿತ ಸೂಚನೆ ಅರಿತ ಹೈಕಮಾಂಡ್, ಮುಖ್ಯಮಂತ್ರಿ ಮನವೊಲಿಸಿ ರಾಜೀನಾಮೆ ಕೊಡಿಸುವ ಮತ್ತು ಶಿವಕುಮಾರ್ ಅವರನ್ನು ಸಿಎಲ್‌ಪಿ ನಾಯಕರನ್ನಾಗಿ ಆಯ್ಕೆ ಮಾಡುವ ಸೂಕ್ಷ್ಮ ಕೆಲಸವನ್ನು ಜಾರ್ಜ್‌ಗೆ ವಹಿಸಿತ್ತು. ಜಾರ್ಜ್ ಇದನ್ನೆಲ್ಲ ಯಶಸ್ವಿಯಾಗಿ ನಿರ್ವಹಿಸಿದ್ದು, ಸಿದ್ದರಾಮಯ್ಯ ಮೇ 28ರಂದು ರಾಜೀನಾಮೆ ಸಲ್ಲಿಸಿದರು. ಮರುದಿನ, ಸಿದ್ದರಾಮಯ್ಯ ಮತ್ತು ಅವರ ಮಗ ಯತೀಂದ್ರ ಅವರನ್ನು ತಮ್ಮ ಖಾಸಗಿ ವಿಮಾನದಲ್ಲಿ ದೆಹಲಿಗೆ ಕರೆದೊಯ್ದ ಜಾರ್ಜ್ ರಾಹುಲ್ ಮತ್ತು ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಉನ್ನತ ನಾಯಕರೊಂದಿಗೆ ಸಭೆ ನಡೆಸಿದರು.

ಸಿದ್ದರಾಮಯ್ಯ-ರಾಹುಲ್ ಜೊತೆಗಿನ ಸಭೆಯಲ್ಲಿ ಜಾರ್ಜ್ ಸಹ ಹಾಜರಿದ್ದರು. ಪಕ್ಷದ ನಿರ್ದೇಶನವನ್ನು ಪಾಲಿಸಿದ್ದಕ್ಕಾಗಿ ಈ ವೇಳೆ ಸಿದ್ದರಾಮಯ್ಯ ಅವರನ್ನು ರಾಹುಲ್ ಪ್ರಶಂಸಿಸಿದರು. ಬಳಿಕ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಸಿದ್ದರಾಮಯ್ಯ ನಡುವೆ ಉಪಹಾರ ಸಭೆಯನ್ನೂ ಜಾರ್ಜ್ ಏರ್ಪಡಿಸಿದ್ದರು.

ವಿವಿಧ ರಾಜ್ಯಗಳಲ್ಲಿ ರಾಜಕೀಯ ಬಿಕ್ಕಟ್ಟನ್ನು ಪರಿಹರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಸೋನಿಯಾ ಗಾಂಧಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ನಿಧನದ ನಂತರ ಉಂಟಾಗಿದ್ದ ನಿರ್ವಾತವನ್ನು ಜಾರ್ಜ್ ಪರಿಣಾಮಕಾರಿಯಾಗಿ ತುಂಬುತ್ತಿದ್ದಾರೆ ಎಂಬುದು ಪಕ್ಷದ ಒಳಗಿನ ಮಾತಾಗಿದೆ.

ಎಐಸಿಸಿ ಚುನಾವಣಾ ಸಮಿತಿಯ ಸದಸ್ಯರಾಗಿರುವ ಜಾರ್ಜ್, ಗಾಂಧಿ ಕುಟುಂಬದೊಂದಿಗೆ ನಿಕಟ ಸಂಬಂಧ ಬೆಳೆಸಿಕೊಂಡಿದ್ದಾರೆ, ದೆಹಲಿಯಲ್ಲಿ ನಿವಾಸ ಹೊಂದಿರುವ ಅವರು, ಸಿದ್ದರಾಮಯ್ಯ ದೆಹಲಿ ಭೇಟಿ ನೀಡಿದ ಸಂದರ್ಭದಲ್ಲೆಲ್ಲ ಅವರ ಜೊತೆಗೆ ಭೇಟಿಕೊಟ್ಟಿದ್ದಾರೆ.

ಜಾರ್ಜ್ ಅವರ ಪ್ರಯತ್ನ ಸಿದ್ದರಾಮಯ್ಯ ಅವರಿಗೆ ಗೌರವಯುತ ನಿರ್ಗಮನ ಮತ್ತು ಶಿವಕುಮಾರ್ ಅವರಿಗೆ ಸುಗಮವಾಗಿ ಅಧಿಕಾರಕ್ಕೆ ಏರಲು ನೆರವಾಯಿತು. ರಾಜ್ಯ ಕಾಂಗ್ರೆಸ್‌ನಲ್ಲಿ ಏಕತೆಯನ್ನು ಕಾಪಾಡಿತು.

ವಿಶ್ವದ ಪ್ರಮುಖ ಬ್ರ್ಯಾಂಡ್ ಡ್ಯುರೆಕ್ಸ್ ಮಾರಾಟದಲ್ಲಿ ತೀವ್ರ ಕುಸಿತ

TAGGED:This is the person who played a key role in the handover of power from Siddaramaiah.
Share This Article
Facebook Twitter Copy Link Print
Previous Article ವಿಶ್ವದ ಪ್ರಮುಖ ಬ್ರ್ಯಾಂಡ್ ಡ್ಯುರೆಕ್ಸ್ ಮಾರಾಟದಲ್ಲಿ ತೀವ್ರ ಕುಸಿತ
Next Article ಬಕ್ರೀದ್ ಪ್ರಾಣಿ ಬಲಿಗೆ ಮುಸ್ಲಿಂ ಯುವಕ ಬೇಸರಗೊಂಡು ಹಿಂದೂ ಧರ್ಮಕ್ಕೆ ಮತಾಂತರ!

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?