Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > Today’s Horoscope ಇಂದಿನ ರಾಶಿ ಭವಿಷ್ಯ 01-06-2026, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

Today’s Horoscope ಇಂದಿನ ರಾಶಿ ಭವಿಷ್ಯ 01-06-2026, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Share
4 Min Read
SHARE

newsics.com/ನ್ಯೂಸಿಕ್ಸ್

ಶುಭ ದಿನ

ಇಂದಿನ ಪಂಚಾಂಗ/ರಾಶಿ ಭವಿಷ್ಯ

01-06-2026, ಸೋಮವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಅಧಿಕ ಜ್ಯೇಷ್ಠ ಮಾಸ ಕೃಷ್ಣ ಪಕ್ಷ ಪ್ರತಿಪದಾ.

* ಪೋಷಕರ ಜಾಗತಿಕ ದಿನ

* ವಿಶ್ವ ಹಾಲಿನ ದಿನ

———-

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಸೋಮ, ಪಕ್ಷ : ಕೃಷ್ಣ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಶಿವ, ಕರಣ : ಕೌಲವ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 07:33 – 09:09, ಯಮಗಂಡ ಕಾಲ 10:46 – 12:22, ಗುಳಿಕ ಕಾಲ 13:59 – 15:35

========

ಇಂದಿನ ರಾಶಿ ಭವಿಷ್ಯ

ಮೇಷ

ಅವಮಾನವಾಗುವ ಸಂದರ್ಭವಿದ್ದರೆ ಅಲ್ಲಿಂದ ದೂರನಡೆಯಿರಿ.‌ ನಿಮ್ಮ ವ್ಯಕ್ತಿತ್ವವನ್ನು ಹುಡುಕಿಕೊಂಡು ಬರುವವರಿದ್ದಾರೆ. ನಿಮ್ಮ ತುರ್ತನ್ನು ಇನ್ನೊಬ್ಬರಿಗೆ ಹೇರಿ ಶಾಂತವಾಗುವಿರಿ. ಯೋಚಿಸದೆ ಇತರರ ಮಾತುಗಳನ್ನು ನಂಬುವುದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ಕೆಲಸ ಮುಗಿಸಲು ಸಾಕಷ್ಟು ಶ್ರಮ ಬೇಕಾಗುತ್ತದೆ. ನಿಮ್ಮ ನೆಚ್ಚಿನ ಜನರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಯಾರ ಮೇಲೂ ನಿಮ್ಮದೇ ಆದ ನಿಲವು ಬೇಡ. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌

ವೃಷಭ 

ಇಂದು ಯಾವುದನ್ನೂ ಪರಿಶೀಲಿಸದೇ ಸ್ವೀಕರಿಸಬೇಡಿ. ಅನಿರೀಕ್ಷಿತ ಹಣವೂ ಸಿಗಬಹುದು. ಶಾಂತತೆ ಮತ್ತು ಬುದ್ಧಿವಂತಿಕೆಯಿಂದ ಮುಂದುವರಿಯಿರಿ. ಇತರರ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬೇಡಿ ಅಥವಾ ಮಧ್ಯಪ್ರವೇಶಿಸಬೇಡಿ. ನಿಮ್ಮ ಖರ್ಚುಗಳ ಬಗ್ಗೆ ಗಮನ ಕೊಡಿ ಮತ್ತು ಯೋಚಿಸದೆ ಅಪಾಯಗಳನ್ನು ತಂದುಕೊಳ್ಳುವಿರಿ. ಪ್ರಭಾವಿ ವ್ಯಕ್ತಿಗಳ ಒತ್ತಡಕ್ಕೆ ಸಿಲುಕುವಿರಿ. ಶ್ರಮಕ್ಕೆ ಫಲವನ್ನು ನಿರೀಕ್ಷಿಸುತ್ತ‌ ಸಮಯವನ್ನು ವ್ಯರ್ಥ ಮಾಡುವಿರಿ.

ಮಿಥುನ 

ನಿಮ್ಮವರೇ ನಕಾರಾತ್ಮಕ ಮಾತುಗಳನ್ನು ಹೇಳಿ ದಾರಿಬತಪ್ಪಿಸುವರು ಅಥವಾ ಅವಮಾನ ಮಾಡುವರು. ಸದ್ಭಾವವಿದ್ದರೆ ಎಲ್ಲವೂ ತಾನಾಗಿಯೇ ಒಲಿಯುವುದು. ಹೊಸ ಯೋಜನೆಗೆ ಸಂಬಂಧಿಸಿದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಇದು ಒಳ್ಳೆಯ ಸಮಯ. ಆದ್ದರಿಂದ, ಈ ಕೆಲಸದಲ್ಲಿ ನಿಮ್ಮ ಸಮಯವನ್ನು ಹೂಡಿಕೆ ಮಾಡಿ. ನಿಮ್ಮ ಕೊರತೆಯೇ ನಿಮಗೆ ಶಾಪವಾಗಬಹುದು. ಕೇಳಿದಷ್ಟು ಹಣವನ್ನು ಕೊಟ್ಟು ಹೊಸ ವಸ್ತುವನ್ನು ಖರೀದಿಸುವಿರಿ.

ಕರ್ಕಾಟಕ 

ನೀವು ಇಂದು ಇರುವ‌ ಕೆಲಸಕ್ಕೆ ಮತ್ತೇನಾದರೂ ಸೇರಿಸಿಕೊಳ್ಳುವಿರಿ. ಹೊಸದಾಗಿ ಏನಾದರೂ ಕಲಿಯುವ ಅವಕಾಶ ಸಿಗಬಹುದು. ಕೆಲಸದ ಸ್ಥಳದಲ್ಲಿ ಹಳೆ ತಪ್ಪುಗಳಿಗಾಗಿ ಜನ ತಿರಸ್ಕರಿಸಬಹುದು – ತಾಳ್ಮೆಯಿಂದ ಉತ್ತರ ಕೊಡಿ. ಹಣದ ವ್ಯವಹಾರಗಳಲ್ಲಿ ನಿಮಗೆ ಆತ್ಮವಿಶ್ವಾಸ ಬೇಕಾಗಿರುತ್ತದೆ. ಉದ್ವೇಗದಲ್ಲಿ ನಿಮ್ಮ ವರ್ತನೆಗಳು ಸಾಮಾನ್ಯರಿಗೆ ಬೇರೆ ಅರ್ಥವನ್ನೇ ಕೊಡುವುದು. ವೈವಾಹಿಕ ಜೀವನವು ನಿಮಗೆ ಬೇಸರವೆನಿಸಬಹುದು. ಪ್ರಭಾವೀ ವ್ಯಕ್ತಿಗಳಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ.

ಸಿಂಹ 

ಮಕ್ಕಳಿಗೆ ನಿಮ್ಮ ಪ್ರೀತಿ ಹೆಚ್ಚಾಗುವುದು. ಸವಾಲುಗಳ ಬಗ್ಗೆ ಮನದಟ್ಟಾಗಿ ಯೋಚಿಸಿ. ಹಣಕಾಸಿನಲ್ಲಿ ಚಿಕ್ಕದಾದ ಲಾಭಕಂಡುಬರುತ್ತದೆ. ಮನೆಯವರು ನಿಮ್ಮ ಬದಲಾವಣೆಗಳನ್ನು ಗುರುತಿಸಿ ಮೆಚ್ಚಬಹುದು. ಸ್ನೇಹಿತರಿಂದ ಪ್ರೋತ್ಸಾಹ ಸಿಗುತ್ತದೆ. ಆರೋಗ್ಯದಲ್ಲಿ ಸುಧಾರಣೆ. ಮಾತುಗಳನ್ನು ಕಡೆ ಆಡುವುವಿರಿ. ಇಂದು ಪಾಲುದಾರಿಕೆಯಲ್ಲಿ ಯಾವುದೇ ಕೆಲಸವನ್ನು ಮಾಡಿದರೆ, ಅದು ನಿಮಗೆ ಒಳ್ಳೆಯದು. ನೆರೆ ಮನೆಯವರ ಜೊತೆ ಕಲಹವಾಗಬಹುದು.

ಕನ್ಯಾ 

ಒಳ್ಳೆಯ ಕಾರಣಕ್ಕೆ ಯಥಾಯೋಗ್ಯ ದಾನವನ್ನೂ ನೀವು ಮಾಡಲಿದ್ದೀರಿ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಾಧಿಸಲಾಗದು. ಯಾರು ಏನೇ ಹೇಳಿದರೂ ನಿಮಗೆ ಬೇಕಾದುದನ್ನು‌ ಮಾತ್ರ ಪಡೆಯುವಿರಿ. ಇತರರಿಂದ ಏನನ್ನೂ ನಿರೀಕ್ಷಿಸಬೇಡಿ, ಇಲ್ಲದಿದ್ದರೆ ಫಲಿತಾಂಶಗಳು ನಕಾರಾತ್ಮಕವಾಗಿರಬಹುದು. ಸ್ತ್ರೀಯರು ಅವರಿಗೆ ಬೇಕಾದ ಕಾರ್ಯವನ್ನು ಬಹಳ ನಾಜೂಕಿನಿಂದ ಮಾಡಿಸಿಕೊಳ್ಳುವರು. ಬಹಿಶ್ಶತ್ರುಗಳಿಗಿಂತ ಅಂತಶ್ಶತ್ರುಗಳ ಬಗ್ಗೆ ಎಚ್ಚರ ಅವಶ್ಯಕ.

ತುಲಾ 

ನಿಮ್ಮ ಕೆಲಸದಲ್ಲಿ ನಿಮಗೆ ಬೆಂಬಲ ಸಿಗುತ್ತದೆ. ಹಳೆಯ ವಿವಾದಗಳು ಬಗೆಹರಿಯುತ್ತವೆ. ನೀವು ವೃತ್ತಿಜೀವನದಲ್ಲಿ ಯಶಸ್ಸನ್ನು ಪಡೆಯುತ್ತೀರಿ ಮತ್ತು ನಿಮ್ಮ ಆದಾಯವು ಸುಧಾರಿಸುತ್ತದೆ. ತಾಯಿಯ ಆರೋಗ್ಯವು ಕೆಡಲಿದ್ದು ಚಿಕಿತ್ಸೆಯನ್ನು ಕೊಡಿಸುವಿರಿ. ನಿಮ್ಮ ಪೂರ್ವ ನಿಶ್ಚಯವು ತಲೆಕೆಳಗಾಗಬಹುದು. ನಿಮ್ಮ ಬಗ್ಗೆ ಸುಳ್ಳು ವದಂತಿಗಳು ಹರಡಬಹುದು. ನಿರ್ಮಾಣ ವ್ಯವಸ್ಥೆಯಲ್ಲಿ ಇರುವವರಿಗೆ ಸ್ವಲ್ಪ ಹಿನ್ನಡೆಯಾಗಲಿದೆ.

ವೃಶ್ಚಿಕ 

ಇಂದು ಕೆಲಸದ ನಿಮಿತ್ತ ನೀವು ಪ್ರಯಾಣಿಸಬೇಕಾಗಬಹುದು. ಚಿಂತೆಗಳು ಕೊನೆಗೊಳ್ಳುತ್ತವೆ ಮತ್ತು ಹಣ ಸಿಗುತ್ತದೆ. ಯೋಜನೆಗಳು ಯಶಸ್ವಿಯಾಗುತ್ತವೆ ಮತ್ತು ಹೊಸ ಕೆಲಸಗಳು ಲಭ್ಯವಾಗುತ್ತವೆ. ನಿಮ್ಮ ಗುರಿಯನ್ನು ಸಾಧಿಸುವಲ್ಲಿ ನೀವು ಯಶಸ್ವಿಯಾಗುತ್ತೀರಿ. ನಿಮ್ಮ ದೀರ್ಘಾವಧಿಯ ಯೋಜನೆಗಳು ವೇಗವನ್ನು ಪಡೆಯಲಿ. ವಿದ್ಯಾರ್ಥಿಗಳು ತಮ್ಮ ಪರೀಕ್ಷೆಯ ತಯಾರಿಯಲ್ಲಿ ಶ್ರಮಿಸಬೇಕಾಗುತ್ತದೆ. ವಾಹನದ ದಾಖಲೆಗಳನ್ನು ಪರಿಶೀಲಿಸಿಕೊಂಡು ಚಲಾಯಿಸಿ.

ಧನುಸ್ಸು

ನಿಮ್ಮ ಆರೋಗ್ಯದ ವಿಚಾರದಲ್ಲಿ ಚಿಂತೆ ಬೇಡ. ಸರಿಮಾಡಿಕೊಳ್ಳುವ ಬಗ್ಗೆ ಚಿಂತಿಸಿ. ಬಹಳಷ್ಟು ಕೆಲಸ ಇರುತ್ತದೆ ಮತ್ತು ಯಶಸ್ಸು ಸ್ವಲ್ಪ ಸಮಯ ತೆಗೆದುಕೊಳ್ಳಬಹುದು. ಮಧ್ಯದಲ್ಲಿ ನ್ಯಾಯಾಂಗ ವಿಷಯಗಳಲ್ಲಿ ಯಶಸ್ಸು ಮತ್ತು ಭೂಮಿಗೆ ಸಂಬಂಧಿಸಿದ ಪ್ರಯೋಜನಗಳು ದೊರೆಯುತ್ತವೆ. ನಿಮ್ಮ ಪ್ರಗತಿಯ ಹಾದಿಯಲ್ಲಿ ಬರುವ ಅಡೆತಡೆಗಳು ನಿವಾರಣೆಯಾಗುತ್ತವೆ. ಕಳೆದುಕೊಂಡಿದ್ದನ್ನು ಮತ್ತೆ ಪಡೆಯುವ ಆಸೆ ಇರಲಿದೆ.

ಮಕರ 

ದೂರದ ಊರಿಗೆ ಪ್ರಯಾಣ ಹೋಗುವ ಯೋಜನೆಗಳನ್ನು ಹಾಕಿಕೊಳ್ಳುವಿರಿ. ನೀವು ವಿವಾದಗಳಲ್ಲಿ ಜಯ ಸಾಧಿಸುವಿರಿ. ದಿನದ ಅಂತ್ಯದಲ್ಲಿ, ಕುಟುಂಬದ ವಾತಾವರಣ ಅನುಕೂಲಕರವಾಗಿರುತ್ತದೆ ಮತ್ತು ಸಂತೋಷವು ಮೇಲುಗೈ ಸಾಧಿಸುತ್ತದೆ. ವ್ಯವಹಾರವು ಉತ್ತಮವಾಗಿರುತ್ತದೆ, ಉದ್ಯೋಗದಲ್ಲಿ ಜವಾಬ್ದಾರಿಗಳು ಹೆಚ್ಚಾಗುತ್ತವೆ. ಸಂತೋಷಕ್ಕಾಗಿ ನಿಮ್ಮ ಸ್ಥಾನ ಇರುವುದಿಲ್ಲ. ಮಕ್ಕಳ ಪಕ್ಷದಿಂದ ನೀವು ಕೆಲವು ಒಳ್ಳೆಯ ಸುದ್ದಿಗಳನ್ನು ಕೇಳಬಹುದು.

ಕುಂಭ 

ನಿಮ್ಮ ಗೆಳೆತನವು ಖುಷಿ ಕೊಡುವುದು‌. ಅತಿಯಾದ ಆಲೋಚನೆಗಳು ಮಾನಸಿಕ ನೆಮ್ಮದಿಯನ್ನು ದೂರಮಾಡಲಿವೆ. ದಿನದ ಆರಂಭದಲ್ಲಿ ಕಷ್ಟಗಳು ಎದುರಾಗುತ್ತವೆ. ಆದರೆ ನಂತರ ಸಂತೋಷ ಮತ್ತು ಹಣದ ಹರಿವು ಉತ್ತಮವಾಗಿರುತ್ತದೆ. ನಿಮ್ಮ ಸೌಲಭ್ಯಗಳನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮ್ಮ ಸುಳ್ಳನ್ನು ಯಾರಾದರೂ ನಂಬಬಹುದು. ಆಕಸ್ಮಿಕ ಧನಲಾಭದಿಂದ ಸಂತಸವು ಇರಲಿದೆ. ಮನಸ್ಸು ಬಹಳ ಉತ್ಸಾಹದಿಂದ ಇರಲಿದೆ. ಮನೆಯ ಹಿರಿಯರ ಸೇವೆಯನ್ನು ಮಾಡಬೇಕೆನಿಸುವುದು.

ಮೀನ 

ಮನೆಗೆ ಅವಶ್ಯವಿರುವ ವಸ್ತುಗಳನ್ನು ಖರೀದಿಸುವಿರಿ. ಸಮಸ್ಯೆ ಇದ್ದರೆ, ಅದನ್ನು ಪರಿಹರಿಸಲು ಕೋಪಗೊಳ್ಳುವ ಬದಲು ಬುದ್ಧಿವಂತಿಕೆಯನ್ನು ಬಳಸಿ. ಮಕ್ಕಳ ಮೇಲೆ ಹೆಚ್ಚು ಒತ್ತಡ ಹೇರಬೇಡಿ ಮತ್ತು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ. ಮುಖ್ಯವಾಗಿ ಈ ಸಮಯದಲ್ಲಿ ಹಳೆಯ ಸಮಸ್ಯೆಯನ್ನು ಪರಿಹರಿಸಲು ನಿಮಗೆ ಅವಕಾಶ ಸಿಗುತ್ತದೆ. ಸಹೋದರನಿಂದ ಆರ್ಥಿಕ ಸಹಕಾರವನ್ನು ನಿರೀಕ್ಷಿಸುವಿರಿ. ಆರೋಗ್ಯವು ಉತ್ತಮವಾಗಲಿದ್ದು, ಮೊದಲಿನ‌ ಸ್ಥಿತಿಗೆ ಮರಳುವಿರಿ.

 

ASTRO ಯಾರೆಲ್ಲ ವಜ್ರ ಧರಿಸಿದರೆ ಅದೃಷ್ಟ? ಯಾರಿಗೆಲ್ಲ ಸಂಕಷ್ಟ?

Astro Tips ಬಾಗಿಲಿನ ಹಿಂದೆ ಒದ್ದೆ ಬಟ್ಟೆ ನೇತುಹಾಕಬಾರದೇಕೆ?

TAGGED:#almanac #zodiac #prediction #01-06-2026 #monday #horoscope #planetary #positions #news #newsics
Share This Article
Facebook Twitter Copy Link Print
Previous Article Karnataka Weather Forecast ರಾಜ್ಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article RCB ಗೆದ್ದ ಖುಷಿಯಲ್ಲಿ ವಿಜಯ್ ಮಲ್ಯ ಎಕ್ಸ್ ಪೋಸ್ಟ್: ಕಾಲೆಳೆದ ನೆಟ್ಟಿಗರು!

Popular Posts

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?