newsics.com/ನ್ಯೂಸಿಕ್ಸ್
ಬೆಂಗಳೂರು : ಟಿ ಬೇಗೂರು ಸಮೀಪ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಮೂವರು ದುಷ್ಕರ್ಮಿಗಳು, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪ ನಡೆದಿದೆ.
ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.ಆರೋಪಿಗಳು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಪ್ರವೇಶಿಸಿದ್ದಾರೆ. ಒಳಗೆ ಹೋದ ನಂತರ ಮಾರಕಾಸ್ತ್ರಗಳನ್ನು ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ.
ಅಂಗಡಿಯಲ್ಲಿದ್ದ ಸುಮಾರು 30-35 ಗ್ರಾಂ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ದರೋಡೆಕೋರರು ಉಂಗುರಗಳಿದ್ದ ಟ್ರೇ ಅನ್ನು ದೋಚಿರುವುದಾಗಿ ತಿಳಿದುಬಂದಿದೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಡಿಕೆಶಿ ಪಟ್ಟಾಭಿಷೇಕ : ಕುತ್ತಿಗೆಯ ಸ್ಕಾರ್ಫ್ ಮತ್ತು ಬ್ರಾಂಡೆಡ್ ವ್ಯಾಲ್ಯೂ ಎಷ್ಟು?