Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಯರ್ ಇಳಿಕೆ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ತೀವ್ರ ಕೊರತೆ!
ಕರ್ನಾಟಕಪ್ರಮುಖ

ಬಿಯರ್ ಇಳಿಕೆ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ತೀವ್ರ ಕೊರತೆ!

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು:ಮದ್ಯದಲ್ಲಿನ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ ಹೊಸ ಎಐಬಿ  ತೆರಿಗೆ ಪದ್ಧತಿಯನ್ನು ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದೆ. ಅದರಂತೆ ಹೆಚ್ಚು ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಹೆಚ್ಚಿನ ತೆರಿಗೆ ಹಾಗೂ ಕಡಿಮೆ ಆಲ್ಕೋಹಾಲ್ ಹೊಂದಿರುವ ಮದ್ಯಕ್ಕೆ ಕಡಿಮೆ ತೆರಿಗೆಯನ್ನು ವಿಧಿಸಲಾಗುತ್ತಿದೆ.

ಈ ಹೊಸ ನೀತಿಯಿಂದಾಗಿ ಶ್ರೀಮಂತರು ಖರೀದಿಸುವ ಪ್ರೀಮಿಯಂ ವಿಸ್ಕಿ, ಜಿನ್, ಟಕೀಲಾ ಹಾಗೂ ಬಿಯರ್ ಸೇರಿದಂತೆ ಪ್ರೀಮಿಯಂ ಬ್ರ್ಯಾಂಡ್‌ಗಳ ಬೆಲೆ ಗಣನೀಯವಾಗಿ ಇಳಿಕೆಯಾಗಿದೆ.

ಆದರೆ ಆ ಸಂತಸದ ಬೆನ್ನಲ್ಲೇ ಈಗ ಮತ್ತೊಂದು ಶಾಕ್ ಎದುರಾಗಿದೆ. ಬೆಲೆ ಕಡಿಮೆಯಾದ ಕಾರಣ ಬೀಯರ್‌ಗೆ ಎಲ್ಲಿಲ್ಲದ ಬೇಡಿಕೆ ಸೃಷ್ಟಿಯಾಗಿದ್ದು, ಮಾರುಕಟ್ಟೆಯಲ್ಲಿ ಸದ್ಯ ಸ್ಟಾಕ್ ಕೊರತೆ (ಬರ) ಎದುರಾಗಿದೆ.

ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ‘ಆಲ್ಕೋಹಾಲ್ ಇನ್ ಬೇವರೆಜ್’ (AIB) ಎಂಬ ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತಂದಿದೆ. ಮೇ 11 ರಿಂದ ಜಾರಿಗೆ ಬಂದಿರುವ ಈ ವಿನೂತನ ನಿಯಮದ ಪ್ರಕಾರ, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆಯನ್ನು ನಿಗದಿಪಡಿಸಲಾಗುತ್ತಿದೆ. ಈ ಹೊಸ ವ್ಯವಸ್ಥೆಯಿಂದಾಗಿ ಬೀಯರ್ ಮೇಲಿನ ತೆರಿಗೆ ಹೊರೆ ಕಡಿಮೆಯಾಗಿ, ಅದರ ಮಾರಾಟದ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿದಿದೆ.

ವಿಶೇಷವಾಗಿ ಕಿಂಗ್‌ಫಿಷರ್ ಬೀಯರ್ ಬೆಲೆಯಲ್ಲಿ ದೊಡ್ಡ ಮಟ್ಟದ ಕುಸಿತ ಕಂಡಿರುವುದರಿಂದ ಇದಕ್ಕೆ ಭಾರಿ ಬೇಡಿಕೆ ಬಂದಿದೆ.

650 ಎಂಎಲ್ ಪ್ರೀಮಿಯಂ ಬೀಯರ್: ₹185 ಇದ್ದದ್ದು ಈಗ ₹110 ಕ್ಕೆ ಇಳಿದಿದೆ.

ಪಿಂಟ್ ಬೀಯರ್: ₹125 ರಿಂದ ಕೇವಲ ₹60 ಕ್ಕೆ ಕುಸಿದಿದೆ.

ಅರ್ಧ ಲೀಟರ್ ಟಿನ್: ₹145 ರ ಬದಲಿಗೆ ₹80 ಆಗಿದೆ.

350 ಎಂಎಲ್ ಟಿನ್: ₹100 ರಿಂದ ₹60 ಕ್ಕೆ ಇಳಿಕೆಯಾಗಿದೆ.

 

ಈ ಭಾರಿ ದರ ಕಡಿತದಿಂದಾಗಿ ಎಂದಿಗಿಂತ ಎರಡು ಪಟ್ಟು ಹೆಚ್ಚು ಬೇಡಿಕೆ ಸೃಷ್ಟಿಯಾಗಿದೆ. ಆದರೆ ಕರ್ನಾಟಕ ರಾಜ್ಯ ಪಾನೀಯ ನಿಗಮದಿಂದ (KSBCL) ಮದ್ಯದಂಗಡಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಹೊಸ ಸ್ಟಾಕ್ ಪೂರೈಕೆಯಾಗುತ್ತಿಲ್ಲ.

ಹೊಸ ಎಐಬಿ ಪದ್ಧತಿ ಜಾರಿಗೆ ಬಂದು ಸುಮಾರು 20 ದಿನಗಳು ಕಳೆದಿದ್ದರೂ, ಮಾರುಕಟ್ಟೆಯಲ್ಲಿ ಇನ್ನೂ ಹಳೆಯ ದುಬಾರಿ ಬೆಲೆಯ ಸ್ಟಾಕ್‌ಗಳೇ ಹೆಚ್ಚಾಗಿ ಮಾರಾಟವಾಗುತ್ತಿವೆ ಎಂಬ ಆರೋಪ ಕೇಳಿಬರುತ್ತಿದೆ. ಕೆಲವು ಬಾರ್, ರೆಸ್ಟೋರೆಂಟ್‌ಗಳು ಹಾಗೂ ವೈನ್ ಶಾಪ್‌ಗಳ ಮಾಲೀಕರು ಹಳೆಯ ಲೇಬಲ್ ತೋರಿಸಿ ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎನ್ನಲಾಗಿದೆ.

ನನ್ನ ಗರ್ಭಪಾತಕ್ಕೆ ಸಿಎಂ ವಿಜಯ್ ಅವರೇ ಕಾರಣ: ಬಿಗ್ ಬಾಸ್ ಖ್ಯಾತಿಯ ನಟಿ ಜೂಲಿ ಗಂಭೀರ ಆರೋಪ!

TAGGED:Severe shortage in the market following the decline in beer prices!
Share This Article
Facebook Twitter Copy Link Print
Previous Article ನನ್ನ ಗರ್ಭಪಾತಕ್ಕೆ ಸಿಎಂ ವಿಜಯ್ ಅವರೇ ಕಾರಣ: ಬಿಗ್ ಬಾಸ್ ಖ್ಯಾತಿಯ ನಟಿ ಜೂಲಿ ಗಂಭೀರ ಆರೋಪ!
Next Article ಮನೆ ಹರಾಜು ಮಾಡಲು ಹೋಗಿ ಬಡತನವನ್ನು ಕಂಡು ಸ್ವಂತ ಹಣದಲ್ಲೇ 4 ವರ್ಷ ಸಾಲ ಕಟ್ಟಿದ ಅಧಿಕಾರಿ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?