newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 4:05ಕ್ಕೆ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ಐತಿಹಾಸಿಕ ಕ್ಷಣವನ್ನು ಸಾರ್ವಜನಿಕರು ವೀಕ್ಷಿಸಲು 230 ಬಸ್ ನಿಲ್ದಾಣಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಕಾರ್ಯಕ್ರಮವನ್ನು ರಾಜ್ಯದ ಜನತೆ, ಸಾರ್ವಜನಿಕರು ವೀಕ್ಷಲು ವಾರ್ತಾ ಇಲಾಖೆಯು ‘ವೃತ್ತಿ ಸೊಲ್ಯೂಷನ್ಸ್’ ಸಹಯೋಗದಲ್ಲಿ ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳ ಡಿಜಿಟಲ್ ಪರದೆಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಿದೆ.
ಇದರಿಂದಾಗಿ ಪ್ರಯಾಣಿಕರು ಹಾಗೂ ಸಾಮಾನ್ಯ ಜನರು ಬಸ್ ನಿಲ್ದಾಣಗಳಲ್ಲೇ ಉಚಿತವಾಗಿ ಕಾರ್ಯಕ್ರಮ ಕಣ್ತುಂಬಿಕೊಳ್ಳಬಹುದು.ಡಿ.ಕೆ.ಶಿವಕುಮಾರ್ -ಸಿಎಂ, ಡಾ.ಜಿ.ಪರಮೇಶ್ವರ್-ಡಿಸಿಎಂ, ಸತೀಶ್ ಜಾರಕಿಹೊಳಿ, ಕೆ.ಹೆಚ್.ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ, ಯು.ಟಿ.ಖಾದರ್, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಈಶ್ವರ್ ಖಂಡ್ರೆ, ಭೈರತಿ ಸುರೇಶ್, ಶರಣಪ್ರಕಾಶ್ ಪಾಟೀಲ್ ಹೆಸರು ಮೊದಲ ಪಟ್ಟಿಯಲ್ಲಿದೆ
ಪ್ರಮಾಣ ವಚನ ಮುನ್ನ HD ದೇವೇಗೌಡ ಮತ್ತು BS ಯಡಿಯೂರಪ್ಪ ಭೇಟಿಯಾದ ಡಿಕೆ ಶಿವಕುಮಾರ್!