newsics.com/ನ್ಯೂಸಿಕ್ಸ್
ಬೆಂಗಳೂರು: ಕರ್ನಾಟಕದ ಆಡಳಿತ ಚುಕ್ಕಾಣಿ ಬದಲಾವಣೆಯ ಬೆನ್ನಲ್ಲೇ, ನಿರೀಕ್ಷೆಯಂತೆ ಹಿರಿಯ ಮುತ್ಸದ್ದಿ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಷ್ಟ್ರ ರಾಜಕಾರಣದಲ್ಲಿ ಅತ್ಯುನ್ನತ ಹಾಗೂ ಅತ್ಯಂತ ಗೌರವಾನ್ವಿತ ಸ್ಥಾನಮಾನವನ್ನು ನೀಡಿದೆ.
ಇದೀಗ ಕಾಂಗ್ರೆಸ್ ವರ್ಕಿಂಗ್ ಕಮಿಟಿ (CWC) ಸದಸ್ಯರನ್ನಾಗಿ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಿ, ಹೈಕಮಾಂಡ್ ಆದೇಶಿಸಿದೆ.
ಇದು ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ (AICC) ನಿಂದ ಇಂದು ಸಿದ್ದರಾಮಯ್ಯ ನೇಮಕಾತಿ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈ ಆದೇಶಕ್ಕೆ ಸಹಿ ಮಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರ್ಕಿಂಗ್ ಕಮಿಟಿ (CWC) ಯ ಸದಸ್ಯರಾಗಿ ತಕ್ಷಣದ ಪರಿಣಾಮಕ್ಕೆ ನೇಮಕ ಮಾಡಿದ್ದಾರೆ ಎಂದು ಘೋಷಿಸಲಾಗಿದೆ.
ಈಗಾಗಲೇ ರಾಜ್ಯಸಭೆ ಅಥವಾ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಗಿತ್ತು. ಆದರೆ ಅವರು ಅದನ್ನು ನಯವಾಗಿಯೇ ನಿರಾಕರಿಸಿದ್ದರು. ಇದೀಗ ಈ ಆದೇಶ ಹೊರಬಿದ್ದಿದೆ. ಇದು ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಅವಧಿ ಮುಗಿದ ನಂತರ ಸಿದ್ದರಾಮಯ್ಯರನ್ನು ರಾಷ್ಟ್ರೀಯ ಮಟ್ಟದಲ್ಲಿ ಪ್ರಮುಖ ಹುದ್ದೆಗೆ ಏರಿಸುವ ನಡೆಯಾಗಿದೆ. ಇದು ಪಕ್ಷದ ಉನ್ನತ ನಾಯಕತ್ವದ ನಿರ್ಧಾರವಾಗಿದೆ.