Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

Share
2 Min Read
SHARE

newsics.com/ನ್ಯೂಸಿಕ್ಸ್

ನಾಲ್ಕು ತಿಂಗಳ ಹಿಂದಷ್ಟೇ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋ ಮುಕ್ತಾಯ ಆಗಿತ್ತು. ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ವಿನ್ನರ್ ಆಗಿ ಟ್ರೋಫಿ ಎತ್ತಿದ್ದರು.

ಈಗ ಸಡನ್ ಆಗಿ ‘ಕಲರ್ಸ್ ಕನ್ನಡ’ ವಾಹಿನಿ ಒಂದು ಸರ್ಪ್ರೈಸ್ ನೀಡಿದೆ. ಈ ಬಾರಿ ಬಿಗ್ ಬಾಸ್ ಹೊಸ ಸೀಸನ್ (Bigg Boss Kannada Season 13) ಬೇಗ ಶುರುವಾಗಲಿದೆ ಎಂಬುದನ್ನು ವಾಹಿನಿ ಖಚಿತಪಡಿಸಿದೆ.

ಸೋಶಿಯಲ್ ಮೀಡಿಯಾದಲ್ಲಿ ಹೊಸ ಪ್ರೋಮೋ ಹಂಚಿಕೊಳ್ಳುವ ಮೂಲಕ ಈ ವಿಷಯವನ್ನು ಅಧಿಕೃತವಾಗಿ ತಿಳಿಸಲಾಗಿದೆ. ‘ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಹಬ್ಬ… With something special’ ಎಂಬ ಕ್ಯಾಪ್ಷನ್​ನೊಂದಿಗೆ ಹೊಸ ಪ್ರೋಮೋವನ್ನು ಹಂಚಿಕೊಳ್ಳಲಾಗಿದೆ.

ಈವರೆಗೂ ಯಶಸ್ವಿಯಾಗಿ 12 ಸೀಸನ್​ಗಳಲ್ಲಿ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ನಡೆದುಕೊಂಡು ಬಂದಿದೆ. ಕಿಚ್ಚ ಸುದೀಪ್ ಅವರು ಎಲ್ಲ ಸೀಸನ್​ಗಳನ್ನು ನಡೆಸಿಕೊಟ್ಟಿದ್ದಾರೆ. ಶೋಗೆ ದೊಡ್ಡ ಪ್ರೇಕ್ಷಕರ ವರ್ಗ ಇದೆ.

ಬಿಗ್ ಬಾಸ್ ಕಾರ್ಯಕ್ರಮ ಶುರುವಾದಾಗ ಪ್ರತಿ ಬಾರಿಯೂ ಸೆನ್ಸೇಷನ್ ಸೃಷ್ಟಿ ಆಗುತ್ತದೆ. ಹಾಗಾಗಿ ವೀಕ್ಷಕರ ನಿರೀಕ್ಷೆ ವರ್ಷದಿಂದ ವರ್ಷಕ್ಕೆ ಜಾಸ್ತಿ ಆಗುತ್ತಿದೆ.
‘ಬಿಗ್ ಬಾಸ್ ಕನ್ನಡ’ ಶೋ ಆದಷ್ಟು ಬೇಗ ಶುರುವಾಗಲಿದೆ ಎಂಬ ವಿಷಯ ಹೊರಬಿದ್ದ ಕೂಡಲೇ ವೀಕ್ಷಕರು ಥ್ರಿಲ್ ಆಗಿದ್​ದಾರೆ. ಕಮೆಂಟ್ ಮಾಡಿರುವ ಅನೇಕರು ತಮ್ಮ ಕಾತರ ಎಷ್ಟಿದೆ ಎಂಬುದನ್ನು ವ್ಯಕ್ತಪಡಿಸಿದ್ದಾರೆ. ಈ ಬಾರಿ ಕೂಡ ಗಿಲ್ಲಿ ನಟ ರೀತಿಯ ಸ್ಪರ್ಧಿಗಳು ಬರಲಿ ಎಂದು ಜನರು ತಮ್ಮ ಅಭಿಲಾಷೆ ತಿಳಿಸಿದ್ದಾರೆ. ಮುಂದಿನ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ.
ಪ್ರತಿ ಬಾರಿಯೂ ಬಿಗ್ ಬಾಸ್ ಶೋನಲ್ಲಿ ಒಂದಲ್ಲಾ ಒಂದು ಹೊಸತನ ಇದ್ದೇ ಇರುತ್ತದೆ. ಆಟದ ಮೂಲ ನಿಯಮವನ್ನು ಹಾಗೆಯೇ ಉಳಿಸಿಕೊಂಡು, ಸಾಕಷ್ಟು ಹೊಸ ಅಂಶಗಳನ್ನು ಪರಿಚಯಿಸಲಾಗುತ್ತದೆ. ಆ ಕಾರಣದಿಂದ ಹೊಸ ಸೀಸನ್ ಘೋಷಣೆ ಆದಾಗ ವೀಕ್ಷಕರ ಕೌತುಕ ಹೆಚ್ಚುತ್ತದೆ. ಕಳೆದ ಸೀಸನ್​ಗಿಂದ ಈ ಸೀಸನ್ ಎಷ್ಟು ಡಿಫರೆಂಟ್ ಆಗಿರಲಿದೆ ಎಂಬುದನ್ನು ತಿಳಿಯುವ ಕುತೂಹಲ ನಿರ್ಮಾಣ ಆಗಿದೆ.
ಈವರೆಗೂ ವಿಜಯ್ ರಾಘವೇಂದ್ರ, ಅಕುಲ್ ಬಾಲಾಜಿ, ಶ್ರುತಿ, ಪ್ರಥಮ್, ಚಂದನ್ ಶೆಟ್ಟಿ, ಶಶಿಕುಮಾರ್, ಶೈನ್ ಶೆಟ್ಟಿ, ಮಂಜು ಪಾವಗಡ, ರೂಪೇಶ್ ಶೆಟ್ಟಿ, ಕಾರ್ತಿಕ್ ಮಹೇಶ್, ಹನುಮಂತ ಮತ್ತು ಗಿಲ್ಲಿ ನಟ ಅವರು ಬಿಗ್ ಬಾಸ್ ವಿನ್ನರ್ ಆಗಿದ್ದಾರೆ. ಮುಂದಿನ ಸೀಸನ್​ನಲ್ಲಿ ಸ್ಪರ್ಧಿಗಳು ಯಾರೆಲ್ಲ ಇರಲಿದ್ದಾರೆ? ಯಾರಿಗೆ ‘ಬಿಗ್ ಬಾಸ್ ಕನ್ನಡ ಸೀಸನ್ 13’ ಕಪ್ ಸಿಗಲಿದೆ ಎಂಬುದನ್ನು ಕಾದುನೋಡಬೇಕು.

https://www.instagram.com/reel/DZH-yycFHWt/?utm_source=ig_web_button_share_sheet

 

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

 

TAGGED:New Bigg Boss is coming soon!
Share This Article
Facebook Twitter Copy Link Print
Previous Article DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ
Next Article Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?