Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

Share
3 Min Read
SHARE

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸಂಸ್ಥಾಪಕ ಮತ್ತು ಮೊದಲ ಅಧ್ಯಕ್ಷ ಲಲಿತ್ ಮೋದಿ ಅವರು 2010ರ ಕೊಚ್ಚಿ ಟಸ್ಕರ್ಸ್ ಕೇರಳ ಫ್ರಾಂಚೈಸಿ ವಿವಾದಕ್ಕೆ ಸಂಬಂಧಿಸಿದಂತೆ ದಶಕದ ಬಳಿಕ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ. ಅಂದಿನ ಯುಪಿಎ ಸರ್ಕಾರದ ಪ್ರಮುಖ ನಾಯಕರು ಮತ್ತು ಬಿಸಿಸಿಐ ಉನ್ನತ ಅಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರಿದ್ದರು ಎಂದು ಲಲಿತ್ ಮೋದಿ ಬಹಿರಂಗಪಡಿಸಿದ್ದಾರೆ.

ಸೋನಿಯಾ ಗಾಂಧಿ ಬೆಂಬಲ, ನಾಯಕರಿಂದ ಕರೆಗಳು

ಸಂದರ್ಶನವೊಂದರಲ್ಲಿ ಅಂದಿನ ಘಟನಾವಳಿಗಳನ್ನು ನೆನಪಿಸಿಕೊಂಡಿರುವ ಲಲಿತ್ ಮೋದಿ, ‘ಅಂದು ಶಶಿ ತರೂರ್ ಅವರಿಗೆ ಸೋನಿಯಾ ಗಾಂಧಿ ಅವರ ಸಂಪೂರ್ಣ ಬೆಂಬಲವಿತ್ತು. ಆ ದಿನಗಳಲ್ಲಿ ನನಗೆ ಅಹ್ಮದ್ ಪಟೇಲ್ ಮತ್ತು ಪ್ರಣಬ್ ಮುಖರ್ಜಿ ಅವರಿಂದ ಕರೆಗಳು ಬಂದಿದ್ದವು. ಅಹ್ಮದ್ ಪಟೇಲ್ ಬರುತ್ತಿದ್ದಾರೆ ಎಂದು ರಾಜೀವ್ ಶುಕ್ಲಾ ನನ್ನ ಬಳಿ ಬಂದು ಹೇಳುತ್ತಿದ್ದರು’ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಷೇರು ಹಂಚಿಕೆ ಬಗ್ಗೆ ಅನುಮಾನ

ಕೊಚ್ಚಿ ಫ್ರಾಂಚೈಸಿಯ ಆರ್ಥಿಕ ಒಪ್ಪಂದದ ಬಗ್ಗೆ ಪ್ರಶ್ನೆ ಎತ್ತಿರುವ ಅವರು, ‘ಕೊಚ್ಚಿ ಕನ್ಸೋರ್ಟಿಯಂ ತಂಡಕ್ಕಾಗಿ 350 ಮಿಲಿಯನ್ ಡಾಲರ್ ನೀಡಲು ಷೇರುದಾರರು ಮುಂದಾಗಿದ್ದರು. ಅದು ಕೊಚ್ಚಿಯಂತಹ ತಂಡಕ್ಕೆ ಇಷ್ಟು ಹಣ ಕೊಡಲು ಯಾರಿಂದಾದರೂ ಸಾಧ್ಯವೇ? ತಂಡಕ್ಕೆ ಬರುವ ಒಟ್ಟು ಆದಾಯದ ಪ್ರತಿ ಡಾಲರ್‌ನಲ್ಲಿ ಶೇ. 15ರಷ್ಟು ಹಣ ಸುನಂದಾ ಪುಷ್ಕರ್ ಅವರಿಗೆ ಹೋಗುತ್ತಿತ್ತು. ಈ ಒಪ್ಪಂದ ಮುಂದೆ ಒಂದು ದಿನ ಕುಸಿಯುತ್ತದೆ ಎಂಬುದು ನನಗೆ ಮೊದಲೇ ಗೊತ್ತಿತ್ತು, ಎರಡು ವರ್ಷಗಳ ನಂತರ ಅದೇ ಆಯಿತು’ ಎಂದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಕನ್ಸೋರ್ಟಿಯಂ ಸದಸ್ಯರ ಸಭೆಯ ವಿವರ ಹಂಚಿಕೊಂಡ ಲಲಿತ್ ಮೋದಿ, ‘ನಾನು ಒಪ್ಪಂದಕ್ಕೆ ಸಹಿ ಹಾಕುವ ಮುನ್ನ ಪ್ರತಿಯೊಬ್ಬ ಸದಸ್ಯರನ್ನು ಭೇಟಿಯಾಗಲು ಬಯಸಿದ್ದೆ. ಬೆಂಗಳೂರಿನಲ್ಲಿ ಸಭೆ ನಡೆದಾಗ ಸುನಂದಾ ಪುಷ್ಕರ್ ಅವರನ್ನು ಹೊರತುಪಡಿಸಿ ಉಳಿದೆಲ್ಲಾ ಷೇರುದಾರರು ಉಪಸ್ಥಿತರಿದ್ದರು. ಸುನಂದಾ ಪುಷ್ಕರ್ ಅವರಿಗೆ ಶೇ. 25ರಷ್ಟು ಉಚಿತ ಷೇರುಗಳನ್ನು ನೀಡಲಾಗುತ್ತಿತ್ತು. ಅಂದರೆ ಇಲ್ಲಿ ಶೇ. 75ರಷ್ಟು ಶೇರುದಾರರು ಶೇ. 100ರಷ್ಟು ವೆಚ್ಚವನ್ನು ಭರಿಸುತ್ತಿದ್ದರು. ಸುನಂದಾ ಯಾರೆಂದು ನಾನು ಪ್ರಶ್ನಿಸಿದೆ ಮತ್ತು ಯಾರೆಂದು ತಿಳಿಯುವವರೆಗೂ ಸಹಿ ಮಾಡುವುದಿಲ್ಲ ಎಂದೆ. ತಕ್ಷಣವೇ ನನಗೆ ಅಂದಿನ ವಿದೇಶಾಂಗ ಖಾತೆಯ ಸಹಾಯಕ ಸಚಿವ ಶಶಿ ತರೂರ್ ಅವರಿಂದ ಕರೆ ಬಂತು’ ಎಂದು ಹೇಳಿದ್ದಾರೆ.

‘ಲಲಿತ್, ಸುನಂದಾ ಪುಷ್ಕರ್ ಬಗ್ಗೆ ಪ್ರಶ್ನಿಸಬೇಡ. ಹಾಗೆ ಮಾಡಿದರೆ ನಾಳೆ ಬೆಳಗ್ಗೆ ನಿನ್ನ ಮೇಲೆ ಐಟಿ ದಾಳಿ ಮಾಡಿಸುತ್ತೇನೆ ಎಂದು ಶಶಿ ತರೂರ್ ಬೆದರಿಕೆ ಹಾಕಿದರು. ನೀನು ದೇಶದ ವಿದೇಶಾಂಗ ಸಚಿವನಾಗಿರಬಹುದು, ಆದರೆ ನನಗೆ ಹೀಗೆ ಹೇಳುವ ಧೈರ್ಯ ಮಾಡಬೇಡ ಎಂದು ಹೇಳಿ ನಾನು ಫೋನ್ ಕಟ್ ಮಾಡಿದೆ’ ಎಂದು ಲಲಿತ್ ಮೋದಿ ಅಂದಿನ ಸಂಭಾಷಣೆಯನ್ನು ಬಿಚ್ಚಿಟ್ಟಿದ್ದಾರೆ.

ಬಿಸಿಸಿಐ ಅಧ್ಯಕ್ಷರಿಂದ ಒತ್ತಡ

ಮಧ್ಯರಾತ್ರಿ ನಡೆದ ಹೈಡ್ರಾಮಾ ಬಗ್ಗೆ ಮಾತನಾಡುತ್ತಾ, ‘ಅದು ಮಧ್ಯರಾತ್ರಿ 2 ಗಂಟೆಯ ಸಮಯ. ಸಾಮಾನ್ಯವಾಗಿ ಯಾವುದೇ ವಿಷಯದಲ್ಲೂ ತಲೆಹಾಕದ ಅಂದಿನ ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ಅವರಿಂದ ನನಗೆ ಕರೆ ಬಂತು. ಲಲಿತ್, ನೀನು ಇಂದೇ ಈ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ಅವರು ಹೇಳಿದರು. ನಾನು ಸದಾ ಅಧಿಕಾರದಲ್ಲಿದ್ದವರ ಮಾತಿಗೆ ಗೌರವ ನೀಡುತ್ತಿದ್ದೆ. ಹೀಗಾಗಿ, ನಾನು ಒತ್ತಡದ ಮಣಿದು ಈ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದೇನೆ ಮತ್ತು ಅಧ್ಯಕ್ಷರೇ ನನ್ನ ಮೇಲೆ ಒತ್ತಡ ಹೇರಿದ್ದಾರೆ ಎಂಬುದನ್ನು ಉಲ್ಲೇಖಿಸಿಯೇ ಸಹಿ ಮಾಡುವುದಾಗಿ ಅವರಿಗೆ ತಿಳಿಸಿದೆ’ ಎಂದಿದ್ದಾರೆ.

ಮರುದಿನ ಬೆಳಗ್ಗೆ ಎದ್ದು ಪತ್ರಿಕೆಗಳನ್ನು ನೋಡಿದಾಗ, ಮುಖಪುಟದಲ್ಲಿ ‘ಸುನಂದಾ ಪುಷ್ಕರ್ ಮತ್ತು ಶಶಿ ತರೂರ್ ವಿವಾಹವಾಗಲಿದ್ದಾರೆ’ ಎಂಬ ಸುದ್ದಿ ಇತ್ತು. ನಾನು ಅಂದು ರಾತ್ರಿ ಯಾಕೆ ಸಹಿ ಹಾಕಬೇಕಾಗಿ ಬಂತು ಎಂಬುದು ನನಗೆ ಆಗ ಅರ್ಥವಾಯಿತು’ ಎಂದು ಲಲಿತ್ ಮೋದಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

IPL scam: Lalit Modi names senior political leaders

TAGGED:IPL scam: Lalit Modi names senior political leaders
Share This Article
Facebook Twitter Copy Link Print
Previous Article Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?
Next Article ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಪ್ರಮುಖಮನರಂಜನೆ

ಸಿಎಂ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಖ್ಯಾತ ಯೂಟ್ಯೂಬರ್ ಮರಿದಾಸ್ ಅರೆಸ್ಟ್‌

1 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಜೈಲಿಂದ ಹೊರಬರಲು ದರ್ಶನ್​​ಗೆ ಸಿಗುತ್ತಾ ಬಿಗ್ ಚಾನ್ಸ್​?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?