newsics.com/ನ್ಯೂಸಿಕ್ಸ್
ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಖಾತೆ ಹಂಚಿಕೆ ವಿಚಾರವಾಗಿ ರಾಮಲಿಂಗಾರೆಡ್ಡಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ಅಸಮಾಧಾನ ತಣಿಸುವ ಯತ್ನದಲ್ಲಿರುವಾಗಲೇ ಮತ್ತೋರ್ವ ಸಚಿವ ಮುನಿಯಪ್ಪ ಕೂಡ ಖಾತೆ ಹಂಚಿಕೆ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಬಗ್ಗೆ ತೀವ್ರ ಅಸಮಾಧಾನ ಹೊಂದಿರುವ ಅವರು, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಗಂಭೀರ ಚಿಂತನೆ ನಡೆಸಿದ್ದಾರೆ ಎಂದು ಪಕ್ಷದ ಆಪ್ತ ಮೂಲಗಳಿಂದ ವರದಿಯಾಗಿದೆ.
ಖಾತೆ ಹಂಚಿಕೆ ಪ್ರಕ್ರಿಯೆ ಆರಂಭವಾದಾಗಿನಿಂದಲೂ ಕೆ.ಎಚ್. ಮುನಿಯಪ್ಪ ಅವರು ತಮಗೆ ಸಮಾಜ ಕಲ್ಯಾಣ ಅಥವಾ ಕೃಷಿ ಇಲಾಖೆಯಂತಹ ಪ್ರಮುಖ ಖಾತೆಗಳನ್ನು ನೀಡಬೇಕು ಎಂದು ಹೈಕಮಾಂಡ್ ಹಾಗೂ ರಾಜ್ಯ ನಾಯಕರ ಮುಂದೆ ಪಟ್ಟು ಹಿಡಿದಿದ್ದರು. ತಮ್ಮ ಸುದೀರ್ಘ ರಾಜಕೀಯ ಅನುಭವಕ್ಕೆ ತಕ್ಕುದಾದ ದೊಡ್ಡ ಜವಾಬ್ದಾರಿಯನ್ನು ಅವರು ನಿರೀಕ್ಷಿಸಿದ್ದರು. ಆದರೆ, ಅಂತಿಮವಾಗಿ ಅವರಿಗೆ ಆಹಾರ ಖಾತೆಯನ್ನು ಹಂಚಿಕೆ ಮಾಡಿರುವುದು ಅವರ ಅಸಮಾಧಾನಕ್ಕೆ ಮುಖ್ಯ ಕಾರಣವಾಗಿದೆ.
Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್ಫ್ರೆಂಡ್ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್