Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ
ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

Share
2 Min Read
SHARE

newsics.com/ನ್ಯೂಸಿಕ್ಸ್

ಖಾತೆ ಹಂಚಿಕೆಯ ಬೆನ್ನಲ್ಲೇ ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಹಾಗೂ ಕೆ.ಎಚ್. ಮುನಿಯಪ್ಪ ಅವರು ಬಂಡಾಯದ ಬಾವುಟ ಹಾರಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್, ನೂತನ ಸರ್ಕಾರಕ್ಕೆ ಎದುರಾಗಿರುವ ಈ ದೊಡ್ಡ ಕಂಟಕವನ್ನು ನಿವಾರಿಸಲು ಹಾಗೂ ‘ಡ್ಯಾಮೇಜ್ ಕಂಟ್ರೋಲ್’ ಮಾಡಲು ಮಹತ್ವದ ಮೀಟಿಂಗ್​ನ್ನು ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (KIA) ವಿಐಪಿ ಲಾಂಜ್ ಹಾಗೂ ಪಕ್ಕದಲ್ಲೇ ಇರುವ ಐಷಾರಾಮಿ ತಾಜ್ ಹೋಟೆಲ್‌ನಲ್ಲಿ ಈ ಹೈವೋಲ್ಟೇಜ್ ಸಭೆ ನಡೆಸುತ್ತಿದ್ದಾರೆ.

ರಾಜ್ಯ ನಾಯಕರ ಅಸಮಾಧಾನ ಶಮನಗೊಳಿಸಲು ಎಐಸಿಸಿ ಮುಖಂಡ ರಾಹುಲ್ ಗಾಂಧಿ, ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಂಟಿಯಾಗಿ ಸಭೆ ನಡೆಸುತ್ತಿದ್ದಾರೆ. ಈಗಾಗಲೇ ಉಂಟಾಗಿರುವ ಗೊಂದಲದ ತೀವ್ರತೆಯನ್ನು ಅರಿತು ಹೈಕಮಾಂಡ್ ನಾಯಕರು, ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ತುರ್ತಾಗಿ ವಿಮಾನ ನಿಲ್ದಾಣಕ್ಕೆ ಕರೆಸಿಕೊಂಡಿದ್ದಾರೆ.

ಕೆಂಪೇಗೌಡ ಏರ್‌ಪೋರ್ಟ್‌ನ ವಿಐಪಿ ಲಾಂಜ್‌ನಲ್ಲಿ ಸಚಿವ ಕೆ.ಎಚ್. ಮುನಿಯಪ್ಪ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರನ್ನು ಭೇಟಿಯಾಗಿ ತಮ್ಮ ಖಾತೆ ಬದಲಾವಣೆ ಕುರಿತು ಮಾತುಕತೆ ನಡೆಸಿದರು. ಇದರ ಬೆನ್ನಲ್ಲೇ, ತಾಜ್ ಹೋಟೆಲ್‌ನಲ್ಲಿ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಸುಮಾರು 40 ನಿಮಿಷಗಳ ಕಾಲ ಹಿರಿಯ ನಾಯಕರ ಮಹತ್ವದ ಸಭೆ ನಿಗದಿಯಾಗಿದೆ. 8 ಬಾರಿ ಗೆದ್ದಿದ್ದರೂ ಹಿರಿತನಕ್ಕೆ ಗೌರವ ಸಿಕ್ಕಿಲ್ಲ ಹಾಗೂ ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆ ಬೇಕು ಎಂಬ ತಮ್ಮ ಬೇಡಿಕೆಯನ್ನು ಮುನಿಯಪ್ಪ ಅವರು ವರಿಷ್ಠರ ಮುಂದೆ ಇಟ್ಟಿದ್ದಾರೆ ಎನ್ನಲಾಗಿದೆ. ರಾಮಲಿಂಗಾರೆಡ್ಡಿ ಅವರ ರಾಜೀನಾಮೆ ನಿರ್ಧಾರ ಹಾಗೂ ಮುನಿಯಪ್ಪ ಅವರ ಅಸಮಾಧಾನ ಎರಡನ್ನೂ ಒಟ್ಟಿಗೆ ಶಮನಗೊಳಿಸಲು ಹೈಕಮಾಂಡ್ ಸೂತ್ರವೊಂದನ್ನು ಸಿದ್ಧಪಡಿಸುತ್ತಿದ್ದು, ಈ ಹೈವೋಲ್ಟೇಜ್ ಸಭೆಯ ನಂತರ ರಾಜ್ಯ ರಾಜಕಾರಣದ ಮುಂದಿನ ಚಿತ್ರಣ ಸ್ಪಷ್ಟವಾಗಲಿದೆ.

‘ನಾನು ಚಾರ್ಜ್ ತೆಗೆದುಕೊಳ್ಳಲ್ಲ’ ಎಂದು ಹಠ ಹಿಡಿದ ಕೆ.ಎಚ್. ಮುನಿಯಪ್ಪ

ರಾಜ್ಯ ರಾಜಕಾರಣದಲ್ಲಿ ಖಾತೆ ಹಂಚಿಕೆಯ ಕಿಚ್ಚು ಈಗ ಮತ್ತಷ್ಟು ಜ್ವಾಲೆಯಾಗಿ ಮಾರ್ಪಟ್ಟಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಪ್ರಕಟಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಮತ್ತೊಬ್ಬ ಪ್ರಭಾವಿ ನಾಯಕ ಕೆ.ಎಚ್. ಮುನಿಯಪ್ಪ ಅವರು ಸರ್ಕಾರದ ವಿರುದ್ಧ ನೇರ ಬಂಡಾಯ ಸಾರಿದ್ದಾರೆ. ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಅವರು, “ನಾನು ಆಹಾರ ಇಲಾಖೆ ಸಚಿವನಾಗಿ ಚಾರ್ಜ್ ತೆಗೆದುಕೊಳ್ಳಲ್ಲ ಎಂದು ಜಿದ್ದಿಗೆ ಬಿದ್ದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್‌ಗೆ ಮುನಿಯಪ್ಪ ಕೊಟ್ಟ ‘2028’ರ ವಾರ್ನಿಂಗ್

ರಾಜ್ಯ ಕಾಂಗ್ರೆಸ್ ಸಂಪುಟದಲ್ಲಿ ಖಾತೆ ಹಂಚಿಕೆಯ ಕಿಚ್ಚು ಈಗ ಹೈಕಮಾಂಡ್ ನಾಯಕರ ವಿರುದ್ಧದ ಬಹಿರಂಗ ಆಕ್ರೋಶವಾಗಿ ಮಾರ್ಪಟ್ಟಿದೆ. ರಾಮಲಿಂಗಾ ರೆಡ್ಡಿ ಅವರ ರಾಜೀನಾಮೆ ಬೆನ್ನಲ್ಲೇ ತೀವ್ರ ಅಸಮಾಧಾನಗೊಂಡಿರುವ ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು, ಪಕ್ಷದ ರಾಷ್ಟ್ರೀಯ ನಾಯಕರ ವಿರುದ್ಧವೇ ನೇರ ವಾಗ್ದಾಳಿ ನಡೆಸಿದ್ದಾರೆ. ನಾನು ಈಗಾಗಲೇ 8 ಬಾರಿ ಗೆದ್ದಿರುವ ಹಿರಿಯ ರಾಜಕಾರಣಿ. ಆದರೆ ಖಾತೆ ಹಂಚಿಕೆ ಮಾಡುವಾಗ ನಮ್ಮ ಸೀನಿಯಾರಿಟಿಯನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಪಕ್ಷದಲ್ಲಿ ಎಲ್ಲ ನಾಯಕರನ್ನೂ ಸಮತೋಲನವಾಗಿ ನೋಡಬೇಕಿತ್ತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದಲ್ಲಿ ಎಲ್ಲರನ್ನೂ ಒಂದೇ ಕಣ್ಣಿನಿಂದ ನೋಡಬೇಕು” ಎಂದು ಮುನಿಯಪ್ಪ ಅವರು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ.

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

Share This Article
Facebook Twitter Copy Link Print
Previous Article ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?
Next Article ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

Popular Posts

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?