Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ
ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

Share
2 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚಿನ ದಿನಗಳಲ್ಲಿ ಒತ್ತಡ ಮತ್ತು ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಅನೇಕ ಮಂದಿ ಬಿಪಿ ಹೆಚ್ಚಳ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಬಿಪಿ ಅನ್ನೋ ಪದ ಕೇಳಿದರೆ ಸಾಕು ಅನೇಕ ಮಂದಿ ಭಯಭೀತರಾಗುತ್ತಾರೆ ಮತ್ತು ಬೆವರಲು ಪ್ರಾರಂಭಿಸುತ್ತಾರೆ. ಇಂತಹ ಸಮಯದಲ್ಲಿ ಬಹುತೇಕ ಮಂದಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯುವುದಿಲ್ಲ. ಆದರೆ ಬಿಪಿ ಹೆಚ್ಚಾದಾಗ ಭಯಪಡದೇ ನಿಖರವಾಗಿ ಏನು ಮಾಡಬೇಕು ಮತ್ತು ತಕ್ಷಣ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಯುವುದು ಮುಖ್ಯ. ಇನ್ನೂ ಈ ಬಗ್ಗೆ ಕೆಲವೊಂದಷ್ಟು ಮಾಹಿತಿಯನ್ನು ಹೃದ್ರೋಗ ತಜ್ಞ ಡಾ. ವಿಶಾಲ್ ಪಾಟೀಲ್ ಹಂಚಿಕೊಂಡಿದ್ದಾರೆ.

ಬಿಪಿ ಹೆಚ್ಚಾದಾಗ ವೈದ್ಯರನ್ನು ಸಂಪರ್ಕಿಸಿ!

ರಕ್ತದೊತ್ತಡ ಹೆಚ್ಚಾದ ನಂತರ ನಿಮಗೆ ತಲೆತಿರುಗಿದರೆ, ಅದು ದುರ್ಬಲತೆ ಅನಿಸಬಹುದು. ಆದರೆ ಪ್ರಮುಖ ವಿಚಾರವೆಂದರೆ ನಿಮ್ಮ ರಕ್ತದೊತ್ತಡ ಹೆಚ್ಚಾದಾಗ ಭಯಭೀತರಾಗದೇ ಶಾಂತವಾಗಿರಬೇಕು. ರಕ್ತದೊತ್ತಡ ಹೆಚ್ಚಾದ ತಕ್ಷಣ ವೈದ್ಯರನ್ನು ಭೇಟಿ ಮಾಡಿ ಸರಿಯಾದ ಚಿಕಿತ್ಸೆ ಪಡೆಯುವುದು ಮುಖ್ಯ ಎಂದು ವೈದ್ಯರು ಸಲಹೆ ನೀಡುತ್ತಾರೆ.

ಈ ಹೊತ್ತಲ್ಲಿ ಮಾತ್ರ ಬಿಪಿ ಟೆಸ್ಟ್​ ಮಾಡಬೇಕು!

ನೀವು ನಿಮ್ಮ ರಕ್ತದೊತ್ತಡವನ್ನು ಯಂತ್ರದಲ್ಲಿ ಪರಿಶೀಲಿಸುತ್ತಿದ್ದರೆ ಎಚ್ಚರ. ಕೆಲವೊಮ್ಮೆ ಯಂತ್ರದಲ್ಲೇ ಸಮಸ್ಯೆ ಇರಬಹುದು. ಒಂದು ವೇಳೆ ನಿಮ್ಮ ರಕ್ತದೊತ್ತಡ ಹೆಚ್ಚಾಗಿದೆ ಎಂದು ತಿಳಿದು ಬಂದರೆ ಆತಂಕ ಪಡಬಾರದು. ರಕ್ತದೊತ್ತಡ ಹೆಚ್ಚಾದ ತಕ್ಷಣ ನೀವು ಯಾವುದಾದರೂ ರೀತಿಯ ಮಾತ್ರೆಗಳನ್ನು ತೆಗೆದುಕೊಳ್ಳದಿದ್ದರೆ, ಮೊದಲು ನೀವು ರಿಲಾಕ್ಸ್​ ಆಗಬೇಕು. ಎಂದಾದರೂ ನೀವು ಬಿಪಿ ಪರಿಶೀಲಿಸಬೇಕು ಅಂದುಕೊಂಡಿದ್ದರೆ, ಬೆಳಗ್ಗೆ ಹೊತ್ತು ಮಾತ್ರ ಬಿಪಿಯನ್ನು ಪರಿಶೀಲಿಸಿ. ನೀವು ಬಲ ಅಥವಾ ಎಡಭಾಗದಲ್ಲಿ ಬೇಕಾದರೂ ಮಲಗಿಕೊಂಡು ಬಿಪಿ ಟೆಸ್ಟ್​ ಮಾಡಬಹುದು. ಆದರೆ ನೀವು ಯಾವುದೇ ಒತ್ತಡವಿಲ್ಲದೇ ಸಂಪೂರ್ಣ ಶಾಂತವಾಗಿದ್ದಾಗಷ್ಟೇ ಬಿಪಿ ಪರಿಶೀಲಿಸಬೇಕು. ಎಂದಿಗೂ ಈ ಬಗ್ಗೆ ಭಯಪಡುವ ಅಗತ್ಯವಿಲ್ಲ.

ಬಿಪಿ ನಿಯಂತ್ರಣದಲ್ಲಿಡಲು ಮಾಡಬೇಕಾದ ಕೆಲಸಗಳು!

ನಿಮ್ಮ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು, ನೀವು ಆರೋಗ್ಯಕರ ಆಹಾರವನ್ನು ಸೇವಿಸಬೇಕು. ಜೊತೆಗೆ, ನಿಮ್ಮ ರಕ್ತದೊತ್ತಡ ಮಾತ್ರೆಗಳನ್ನು ನಿಯಮಿತವಾಗಿ ತೆಗೆದುಕೊಳ್ಳುವುದು ಮುಖ್ಯ. ಎಲ್ಲಕ್ಕಿಂತ ಮುಖ್ಯವಾಗಿ, ನೀವು ವ್ಯಾಯಾಮ ಮಾಡುವುದು ಸಹ ಬಹಳ ಮುಖ್ಯ. ಸರಿಯಾದ ರೀತಿಯ ವ್ಯಾಯಾಮ ಮಾಡಿ, ಧ್ಯಾನ ಮಾಡಿ. ಒತ್ತಡಕ್ಕೆ ಒಳಗಾಗಬೇಡಿ. ನೀವು ಎಲ್ಲವನ್ನೂ ಉತ್ತಮ ರೀತಿಯಲ್ಲಿ ನಿರ್ವಹಿಸಿದರೆ ನಿಮ್ಮ ರಕ್ತದೊತ್ತಡ ಹೆಚ್ಚಾಗುವುದಿಲ್ಲ.

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

TAGGED:Don't get tense if your BP suddenly increases; do this!
Share This Article
Facebook Twitter Copy Link Print
Previous Article ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ
Next Article ‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?