newsics.com/ನ್ಯೂಸಿಕ್ಸ್
ಬೆಂಗಳೂರು: ನೂತನ ಸಿಎಂ ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆಗಳ ಹಂಚಿಕೆಯಾದ ಬೆನ್ನಲ್ಲೇ ಸಚಿವರಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದ ಕಾರಣ, ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನನಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದ್ದಕ್ಕೆ ತಮಗೂ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಧನ್ಯವಾದಗಳು. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ಕೋರುತ್ತೇನೆ. ನಾನು ಶಾಸಕನಾಗಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ’ ಎಂದು ರಾಜೀನಾಮೆ ಪತ್ರದಲ್ಲಿ ರಾಮಲಿಂಗಾ ರೆಡ್ಡಿ ಉಲ್ಲೇಖಿಸಿದ್ದಾರೆ.
ಡಿ.ಕೆ.ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಸರ್ಕಾರ ರಚನೆಯಾದ ಕೇವಲ 48 ಗಂಟೆಗಳಲ್ಲಿಯೇ ಸಚಿವರೊಬ್ಬರು ಪದತ್ಯಾಗ ಮಾಡಿದ್ದು, ನಗರಾಭಿವೃದ್ಧಿ ಖಾತೆ ಸಗದಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ದಿ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನ ಕೋರಮಂಗಲದ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಮಾಡಿದ್ದಾರೆ. ಕಾಂಗ್ರೆಸ್ ನಾಯಕರು ಕೊನೇ ಕ್ಷಣದವರೆಗೂ ಮನವೊಲಿಸಲು ಯತ್ನಿಸಿದರೂ ಯಾರ ಮಾತನ್ನೂ ಕೇಳದ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ್ದಾರೆ.