Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಭರ್ಜರಿ ಶಾಕ್ ನೀಡಿದ್ದಾರೆ.

ಇನ್ಮುಂದೆ ಪ್ರತಿಯೊಬ್ಬ ಸರ್ಕಾರಿ ನೌಕರನೂ ಪ್ರತಿದಿನ ಬೆಳಗ್ಗೆ ಸರಿಯಾಗಿ 10:00 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯವಾಗಿದ್ದು, ತಪ್ಪಿದಲ್ಲಿ ಕೃತಕ ಬುದ್ಧಿಮತ್ತೆ  ತಂತ್ರಜ್ಞಾನದ ಮೂಲಕ ಸ್ವಯಂಚಾಲಿತವಾಗಿ ಆಯಾ ಇಲಾಖೆಯ ಮುಖ್ಯಸ್ಥರಿಗೆ ವರದಿ ರವಾನೆಯಾಗಲಿದೆ.

ಇ-ಆಡಳಿತ ಇಲಾಖೆಯು ಸಿದ್ಧಪಡಿಸಿರುವ ‘ಕರ್ತವ್ಯ App’ ನಲ್ಲಿ ಈಗಾಗಲೇ HRMS ನಲ್ಲಿ ಲಭ್ಯವಿರುವ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳ ಮಾಹಿತಿಯನ್ನು ನೊಂದಾಯಿಸಲಾಗಿದೆ. ಆದರೆ ಬಹಳಷ್ಟು ಸಿಬ್ಬಂದಿಗಳು ಈ ಆ್ಯಪ್ ಅನ್ನು ನಿರಂತರವಾಗಿ ಬಳಸುತ್ತಿಲ್ಲದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಈ ಕೆಳಗಿನ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಗಿದೆ:

ಚೆಕ್-ಇನ್ ಮತ್ತು ಚೆಕ್-ಔಟ್ ಕಡ್ಡಾಯ: ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಮತ್ತು ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಬೆಳಗ್ಗೆ 10:00 ಗಂಟೆಗೆ ‘ಕರ್ತವ್ಯ App’ ನಲ್ಲಿ ‘Check In’ ಹಾಗೂ ಕಚೇರಿಯಿಂದ ನಿರ್ಗಮಿಸುವಾಗ ‘Check Out’ ದಾಖಲಿಸುವುದು ಕಡ್ಡಾಯವಾಗಿದೆ.

 

AI ಮೂಲಕ ನಿಗಾ: ಪ್ರತಿದಿನ ಬೆಳಗ್ಗೆ 10:00 ಗಂಟೆಗೆ ಹಾಜರಾತಿ ದಾಖಲಿಸದ ಅಧಿಕಾರಿ ಮತ್ತು ಸಿಬ್ಬಂದಿಗಳ ಜಿಲ್ಲಾವಾರು ಹಾಗೂ ಕಚೇರಿವಾರು ಮಾಹಿತಿಯನ್ನು AI (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನದ ಮೂಲಕ ಆಯಾ ಇಲಾಖಾ ಮುಖ್ಯಸ್ಥರಿಗೆ ಸ್ವಯಂಚಾಲಿತವಾಗಿ ವರದಿ ಕಳುಹಿಸಲಾಗುತ್ತದೆ.

 

ಮೇಲಧಿಕಾರಿಗಳ ಪರಿಶೀಲನೆ: ಇಲಾಖೆಯ ಮುಖ್ಯಸ್ಥರು ತಮ್ಮ ವೈಯಕ್ತಿಕ ಲಾಗಿನ್ (Login) ಮೂಲಕ ಕರ್ತವ್ಯ ಡ್ಯಾಶ್‌ಬೋರ್ಡ್‌ನಲ್ಲಿ ಪ್ರತಿದಿನ ಹಾಜರಾತಿ ವರದಿಯನ್ನು ಪರಿಶೀಲಿಸಿ, ಗೈರಾದವರಿಗೆ ಅಥವಾ ತಡವಾಗಿ ಬಂದವರಿಗೆ ಸೂಕ್ತ ಸೂಚನೆ ನೀಡಬೇಕಾಗುತ್ತದೆ.

 

ಪ್ರವಾಸದಲ್ಲಿದ್ದರೆ OOD ಕಡ್ಡಾಯ: ಒಂದು ವೇಳೆ ಅಧಿಕಾರಿಗಳು ಅಥವಾ ಸಿಬ್ಬಂದಿ ಕಚೇರಿ ಕೆಲಸದ ನಿಮಿತ್ತ ಪ್ರವಾಸದಲ್ಲಿದ್ದರೆ, ಆ್ಯಪ್‌ನಲ್ಲಿರುವ ‘OOD option’ ನಲ್ಲಿ ಪ್ರವಾಸದ ಉದ್ದೇಶವನ್ನು ನಮೂದಿಸಿ ಹಾಜರಾತಿ ದಾಖಲಿಸಬೇಕು. ಇದನ್ನು ಸಂಬಂಧಪಟ್ಟ ಮೇಲಾಧಿಕಾರಿಗಳು ದೃಢೀಕರಿಸಬೇಕಾಗುತ್ತದೆ.

ಈ ಆದೇಶವನ್ನು ಅತ್ಯಂತ ತುರ್ತು ಮತ್ತು ಕಡ್ಡಾಯವೆಂದು ಪರಿಗಣಿಸಿ, ತಕ್ಷಣದಿಂದಲೇ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ರಾಜ್ಯದ ಎಲ್ಲಾ ಇಲಾಖಾ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ (CEO) ಸೂಚನೆ ನೀಡಿದ್ದಾರೆ.

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

TAGGED:State government employees must report to office by 10 am: Important order from government
Share This Article
Facebook Twitter Copy Link Print
Previous Article Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು
Next Article Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?