newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರು ಈ ಬಾರಿ ಬೆಂಗಳೂರು ಅಭಿವೃದ್ದಿ ಖಾತೆಯ ನಿರೀಕ್ಷೆಯಲ್ಲಿದ್ದರು. ಅವರಿಗೆ ಈ ಹಿಂದೆ ಈ ಖಾತೆ ನೀಡುವ ಭರವಸೆಯನ್ನು ನೀಡಲಾಗಿತ್ತು. ಆದರೆ, ಇದೀಗ ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ. ಆದರೆ ಈ ಖಾತೆಯ ಬಗ್ಗೆ ಅವರಿಗೆ ಆಸಕ್ತಿ ಇಲ್ಲ. ಹೀಗಾಗಿ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ. ಬದಲಾವಣೆ ಮಾಡದೆ ಇದ್ದರೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.
ಸಿಎಂ ಮನವಿಗೆ ಓಗೊಡದ ರಾಮಲಿಂಗಾ ರೆಡ್ಡಿ ತಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ತಿಳಿಸಿದ್ದಾರೆ. ಈ ವೇಳೆ ಸದ್ಯಕ್ಕೆ ಅಂತಹ ಯಾವುದೇ ನಿರ್ಧಾರಕ್ಕೆ ಬರಬೇಡಿ. ಮಾತುಕತೆ ಮಾಡೋಣ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಶುಕ್ರವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಕೂಡಾ ಆಗಮಿಸಲಿದ್ದಾರೆ.