Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?
ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

Share
2 Min Read
SHARE

newsics.com/ನ್ಯೂಸಿಕ್ಸ್

ಭಾರತ ಮತ್ತು ಅಫ್ಘಾನಿಸ್ತಾನ ತಂಡಗಳು ಎರಡನೇ ಟೆಸ್ಟ್ ಪಂದ್ಯಕ್ಕಾಗಿ ನ್ಯೂ ಚಂಡೀಗಢದಲ್ಲಿ ಮುಖಾಮುಖಿಯಾಗುತ್ತಿವೆ. ಈ ಎರಡೂ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ 2018 ರಲ್ಲಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿತ್ತು.

ಈ ಪಂದ್ಯದಲ್ಲಿ ಭಾರತ ಅಫ್ಘಾನಿಸ್ತಾನವನ್ನು ಇನ್ನಿಂಗ್ಸ್ ಮತ್ತು 262 ರನ್‌ಗಳಿಂದ ಸೋಲಿಸಿತು. ಈಗ ಎರಡೂ ತಂಡಗಳು ಎರಡನೇ ಬಾರಿಗೆ ಮುಖಾಮುಖಿಯಾಗಲಿವೆ. ಈ ಪಂದ್ಯವು ನ್ಯೂ ಚಂಡೀಗಢದ ಮಹಾರಾಜ ಯಾದವೇಂದ್ರ ಸಿಂಗ್ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಯುವ ಟೀಮ್ ಇಂಡಿಯಾದಲ್ಲಿ ಈ ಬಾರಿ ಕರ್ನಾಟಕದ ಆಟಗಾರರದ್ದೇ ದರ್ಬಾರ್. ಉಪನಾಯಕರಾಗಿ ಕೆ.ಎಲ್. ರಾಹುಲ್, ಭರವಸೆಯ ಆಟಗಾರ ದೇವದತ್ ಪಡಿಕ್ಕಲ್, ವೇಗಿ ಪ್ರಸಿದ್ಧ್ ಕೃಷ್ಣ ಕನ್ನಡಿಗರು ಸ್ಥಾನ ಪಡೆದಿರುವುದು ವಿಶೇಷ. ಇನ್ನು ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ರಿಷಭ್ ಪಂತ್ ಮತ್ತು ಧ್ರುವ್ ಜುರೆಲ್ ಹೊರಲಿದ್ದಾರೆ.

 

ಮತ್ತೊಂದೆಡೆ ಹಶ್ಮತುಲ್ಲಾ ಶಾಹಿದಿ ನಾಯಕತ್ವದ ಅಫ್ಘಾನಿಸ್ತಾನ ತಂಡವು ಸ್ಟಾರ್ ಸ್ಪಿನ್ನರ್ ರಶೀದ್ ಖಾನ್ ಅಲಭ್ಯತೆಯ ನಡುವೆಯೂ ರಹಮಾನುಲ್ಲಾ ಗುರ್ಬಾಜ್ ಹಾಗೂ ಅಜ್ಮತುಲ್ಲಾ ಒಮರ್ಜಾಯ್ ಅವರಂತಹ ಬಲಿಷ್ಠ ಆಟಗಾರರೊಂದಿಗೆ ಭಾರತಕ್ಕೆ ಟಕ್ಕರ್ ನೀಡಲು ಸಜ್ಜಾಗಿದೆ.

ಭಾರತ ತಂಡದ ಪೂರ್ಣ ವಿವರ :

ಯುವ ಹಾಗೂ ಅನುಭವಿ ಆಟಗಾರರ ಸಮತೋಲನ ಹೊಂದಿರುವ ಟೀಮ್ ಇಂಡಿಯಾ ಬಲಿಷ್ಠವಾಗಿ ಕಾಣಿಸುತ್ತಿದೆ.

ಬ್ಯಾಟರ್‌ಗಳು: ಶುಭ್‌ಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್ (ಉಪನಾಯಕ), ಸಾಯಿ ಸುದರ್ಶನ್, ದೇವದತ್ ಪಡಿಕ್ಕಲ್.

ವಿಕೆಟ್ ಕೀಪರ್‌ಗಳು: ರಿಷಭ್ ಪಂತ್, ಧ್ರುವ್ ಜುರೆಲ್.

ಆಲ್‌ರೌಂಡರ್‌ಗಳು: ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

ಸ್ಪಿನ್ನರ್‌ಗಳು: ಕುಲದೀಪ್ ಯಾದವ್, ಮಾನವ್ ಸುತಾರ್, ಹರ್ಷ್ ದುಬೆ.

ವೇಗದ ಬೌಲರ್‌ಗಳು: ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್.

ಅಫ್ಘಾನಿಸ್ತಾನ ತಂಡದ ಪೂರ್ಣ ವಿವರ:

ರಶೀದ್ ಖಾನ್ ಗೈರಿನಲ್ಲಿ ಅಫ್ಘಾನಿಸ್ತಾನ ತಂಡವು ತನ್ನ ಸ್ಪಿನ್ ಹಾಗೂ ಬ್ಯಾಟಿಂಗ್ ವಿಭಾಗವನ್ನು ನೆಚ್ಚಿಕೊಂಡಿದೆ.

ಬ್ಯಾಟರ್‌ಗಳು: ಹಶ್ಮತುಲ್ಲಾ ಶಾಹಿದಿ (ನಾಯಕ), ಅಬ್ದುಲ್ ಮಲಿಕ್, ರಹಮತ್ ಶಾ, ಸಿದ್ದೀಕುಲ್ಲಾ ಅಟಲ್, ರಹಮಾನುಲ್ಲಾ.

ವಿಕೆಟ್ ಕೀಪರ್‌ಗಳು: ರಹಮಾನುಲ್ಲಾ ಗುರ್ಬಾಜ್, ಅಫ್ಸರ್ ಜಜಾಯ್, ಇಕ್ರಾಮ್ ಅಲಿಖೇಲ್.

ಆಲ್‌ರೌಂಡರ್‌ಗಳು: ಅಜ್ಮತುಲ್ಲಾ ಒಮರ್ಜಾಯ್, ಶರಾಫುದ್ದೀನ್ ಅಶ್ರಫ್.

ಬೌಲರ್‌ಗಳು: ಖೈಸ್ ಅಹ್ಮದ್, ನಂಗೇಯಾಲಿಯಾ ಖರೋಟೆ, ಜಿಯಾವುರ್ ರೆಹಮಾನ್ ಶರೀಫಿ, ಬಿಲಾಲ್ ಸಾಮಿ, ಮೊಹಮ್ಮದ್ ಸಲೀಮ್ ಸಫಿ.

ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಈ ರೋಚಕ ಟೆಸ್ಟ್ ಸಮರವು ಜೂನ್ 6 ರಿಂದ 10 ರವರೆಗೆ ಪ್ರತಿದಿನ ಬೆಳಗ್ಗೆ 9:30 ಕ್ಕೆ ನೇರಪ್ರಸಾರವಾಗಲಿದೆ.

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

TAGGED:India vs Afghanistan Test Match: Four Kannadigas in the IPL squad?
Share This Article
Facebook Twitter Copy Link Print
Previous Article Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ
Next Article Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?