Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

Share
1 Min Read
SHARE

newsics.com/ನ್ಯೂಸಿಕ್ಸ್

ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರ ಸಚಿವ ಸ್ಥಾನದ ರಾಜೀನಾಮೆ ಹೈಡ್ರಾಮಾಗೆ ಕೊನೆಗೂ ತೆರೆ ಬಿದ್ದಿದೆ. ಸಾಲು ಸಾಲು ಸಭೆಗಳ ಬಳಿಕ ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಹಿರಿಯ ನಾಯಕನ ಮನವೊಲಿಸುವಲ್ಲಿ ಕೊನೆಗೂ ಯಶಸ್ವಿಯಾಗಿದ್ದು, ಈ ಕುರಿತು ಸುರ್ಜೇವಾಲ ಅವರೇ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ.

ತಾಜ್ ವೆಸ್ಟೆಂಡ್‌ನಲ್ಲಿ ನಡೆದ ಹೈವೋಲ್ಟೇಜ್ ಸಭೆ

ಬೆಂಗಳೂರಿನ ತಾಜ್ ವೆಸ್ಟೆಂಡ್ ಹೋಟೆಲ್‌ನಲ್ಲಿ ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ರಾಮಲಿಂಗಾರೆಡ್ಡಿ ಹಾಗೂ ಸಚಿವ ಕೃಷ್ಣ ಭೈರೇಗೌಡ ಅವರ ನಡುವೆ ಮಹತ್ವದ ಸಭೆ ನಡೆಯಿತು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಈ ಸಮಾಲೋಚನೆಯಲ್ಲಿ ಸಚಿವರ ಅಸಮಾಧಾನಕ್ಕೆ ಕಾರಣವಾದ ಅಂಶಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಸಭೆಯ ಬಳಿಕ ಜಂಟಿಯಾಗಿ ಮಾಧ್ಯಮದವರ ಮುಂದೆ ಬಂದ ನಾಯಕರು ಗೊಂದಲಗಳಿಗೆ ತೆರೆ ಎಳೆದರು.

ರಾಮಲಿಂಗಾರೆಡ್ಡಿ ಕಾಂಗ್ರೆಸ್ ಆಸ್ತಿ: ಸುರ್ಜೇವಾಲ ಶ್ಲಾಘನೆ

ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, “ರಾಮಲಿಂಗಾರೆಡ್ಡಿ ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಅವರು ಸಚಿವ ಸಂಪುಟದಲ್ಲಿ ಮುಂದುವರಿಯಲಿದ್ದಾರೆ” ಎಂದು ಪ್ರಕಟಿಸಿದರು.

“ರಾಮಲಿಂಗಾರೆಡ್ಡಿ ಅವರು ಪಕ್ಷದ ಅತ್ಯಂತ ಹಿರಿಯ ನಾಯಕರು. ಹಲವು ಬಾರಿ ಸಚಿವರಾಗಿ ಯಶಸ್ವಿಯಾಗಿ ಕೆಲಸ ಮಾಡಿದ ಅನುಭವ ಅವರಿಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರೊಂದಿಗೆ ಅವರು ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ದೊಡ್ಡ ಆಸ್ತಿ. ರಾಜೀನಾಮೆ ನೀಡಿದ ಬಳಿಕ ಉಂಟಾಗಿದ್ದ ಸಣ್ಣಪುಟ್ಟ ತಪ್ಪು ತಿಳುವಳಿಕೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲಾಗಿದೆ. ಈಗ ಎಲ್ಲವೂ ಸುಸೂತ್ರವಾಗಿದೆ,” ಎಂದು ಸುರ್ಜೇವಾಲ ತಿಳಿಸಿದರು.

ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸುತ್ತಿದ್ದಂತೆ, ಕಾಂಗ್ರೆಸ್ ಪಾಳಯದಲ್ಲಿ ಮನೆಮಾಡಿದ್ದ ಆತಂಕ ದೂರಾಗಿದ್ದು, ಕೈ ನಾಯಕರು ನಿಟ್ಟುಸಿರು ಬಿಡುವಂತಾಗಿದೆ.

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

TAGGED:he returnsRamalinga Reddy's resignation from the ministerial post has a happy ending: High Command succeeds in convincing him
Share This Article
Facebook Twitter Copy Link Print
Previous Article ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.
Next Article 2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

Popular Posts

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read

ಗಂಡ ಆಫೀಸ್‌ಗೆ ಹೋದ ತಕ್ಷಣ ಸ್ನಾನ, ಕಸ ಗುಡಿಸುವ ಅಭ್ಯಾಸ ನಿಮಗಿದ್ಯಾ?; ಹಾಗಾದ್ರೆ ಎಚ್ಚರವಹಿಸಿ

2 Min Read

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read

You Might Also Like

ಕರ್ನಾಟಕಪ್ರಮುಖ

ಪ್ರೇಯಸಿಯ ಮರ್ಯಾದಾ ಹತ್ಯೆ ನೋವು ತಾಳಲಾರದೆ ಪ್ರಿಯಕನ ಆತ್ಮಹತ್ಯೆ; ಪ್ರೇಯಸಿಯ ಜನ್ಮ ದಿನದಂದೇ ಜೀವ ಅಂತ್ಯ.

1 Min Read
ಪ್ರಮುಖಕರ್ನಾಟಕ

ವಿದ್ಯಾರ್ಥಿನಿ ಜೊತೆ ಪ್ರೊಫೆಸರ್ ಲವ್ವಿಡವ್ವಿ , 3 ಬಾರಿ ಗರ್ಭಪಾತ.!

1 Min Read
ದೇಶಪ್ರಮುಖವಿದೇಶ

CJI in London ಲಂಡನ್‌ನಲ್ಲಿ ಸಿಜೆಐ ಸೂರ್ಯಕಾಂತ್‌ ಭಾಷಣಕ್ಕೆ ಅಡ್ಡಿ: ಹೈಕಮಿಷನ್ ತೀವ್ರ ಆಕ್ರೋಶ

2 Min Read
ಕರ್ನಾಟಕಜ್ಯೋತಿಷ್ಯಪ್ರಮುಖ

ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?