newsics.com/ನ್ಯೂಸಿಕ್ಸ್
ಬೆಂಗಳೂರು: ಇಷ್ಟು ದಿನ ಸಿದ್ದರಾಮಯ್ಯ ಹಿಂದೆ ಹತ್ತಾರು ಸಚಿವರು, ಶಾಸಕರು ಇರುತ್ತಿದ್ದರು. ಆದರೆ ಈಗ ಪರಿಸ್ಥಿತಿ ಬದಲಾಗಿದೆ. ಅಧಿಕಾರ ಹೋಗುತ್ತಿದ್ದಂತೆ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ.
ವಿಧಾನಸೌಧದ ಕಾರಿಡಾರ್‌ನಲ್ಲಿ ಗತ್ತಿನಿಂದ ಹೆಜ್ಜೆ ಹಾಕುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಒಂಟಿಯಾಗಿ ಓಡಾಡಿದ್ದಾರೆ.
ಇನ್ನು ಕುತೂಹಲಕಾರಿ ವಿಷಯವೆಂದರೆ ಸಿಎಂ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮುಖಾಮುಖಿಯಾದರೂ ಒಬ್ಬರಿಗೊಬ್ಬರು ಮಾತನಾಡಿಸದೇ ಮುಂದೆ ಹೋಗಿದ್ದಾರೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರ ಹಿಂದೆ ಮುಂಚಿನಂತೆ ಯಾವುದೇ ಶಾಸಕರಾಗಲಿ, ಸಚಿವರಾಗಲಿ ಅಥವಾ ಬೆಂಬಲಿಗರ ದಂಡಾಗಲಿ ಇರಲಿಲ್ಲ. ಅಧಿಕಾರ ಹೋಗುತ್ತಿದ್ದಂತೆ ರಾಜಕೀಯದ ಚಿತ್ರಣ ಸಂಪೂರ್ಣ ಬದಲಾಗಿದ್ದು, ಸಿದ್ದರಾಮಯ್ಯ ಅವರು ವಿಧಾನಸೌಧದ ಆವರಣದಲ್ಲಿ ಏಕಾಂಗಿಯಾಗಿ ನಡೆದುಕೊಂಡು ಹೋಗುತ್ತಿದ್ದರು.
ವಿಧಾನಸೌಧದ ಆವರಣದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅನಿರೀಕ್ಷಿತವಾಗಿ ಮುಖಾಮುಖಿಯಾಗಿದ್ದಾರೆ. ಆದರೆ, ಇಬ್ಬರೂ ನಾಯಕರು ಪರಸ್ಪರ ಎದುರಾದರೂ ಒಬ್ಬರಿಗೊಬ್ಬರು ಮಾತನಾಡಿಸಿಲ್ಲ. ಕನಿಷ್ಠ ಸೌಜನ್ಯದ ನಗು ಕೂಡ ಬೀರದೆ, ಯಾರೋ ಅಪರಿಚಿತರಂತೆ ಇಬ್ಬರೂ ತಮ್ಮ ಪಾಡಿಗೆ ತಾವು ಮುಂದೆ ಸಾಗಿ ಹೋಗಿದ್ದಾರೆ. ಸದ್ಯ ಈ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ.
ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?