newsics.com/ನ್ಯೂಸಿಕ್ಸ್
ರಾಮನಗರ: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಸಕಾಲದಲ್ಲಿ ಮಳೆ-ಬೆಳೆ ಉತ್ತಮವಾಗಿ ಬರಲಿ ಎಂಬ ಸಂಕಲ್ಪದೊಂದಿಗೆ ಗದಗ (gadag) ತಾಲೂಕಿನ ಅಂತೂರು ಬೆಂತೂರು ಗ್ರಾಮದ ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ‘ಶಿವಯೋಗ ಸಮಾಧಿ’ (Shiva Yoga Samadhi) ತಪಸ್ಸನ್ನು ಆರಂಭಿಸಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲೂ ಅಧ್ಯಾತ್ಮದ ಶಕ್ತಿ ಎಷ್ಟರಮಟ್ಟಿಗೆ ಪ್ರಭಾವ ಬೀರಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ. ಶ್ರೀ ಮಠದ ಗರ್ಭಗುಡಿಯನ್ನು ಬಂದ್ ಮಾಡಿಕೊಂಡು ಸಮಾಧಿ ಯೋಗದಲ್ಲಿ ಮಗ್ನರಾಗಿದ್ದಾರೆ. ಸದ್ಯ ಮಠದಲ್ಲಿ ಭಕ್ತರಿಂದ 24 ಗಂಟೆ ಶಿವನಾಮಸ್ಮರಣೆ ನಡೆದಿದೆ.
ಸ್ವಾಮೀಜಿ ಲೋಕ ಕಲ್ಯಾಣಕ್ಕಾಗಿ ಕಠಿಣ ಶಿವಯೋಗ ಸಮಾಧಿ ಅನುಷ್ಠಾನ ಕೈಗೊಂಡಿದ್ದು, 775 ಗಂಟೆ ಅಂದರೆ 33 ದಿನಗಳ ಕಾಲ ಶಿವಯೋಗ ಸಮಾಧಿ ತಪಸ್ಸು ಮಾಡಲಿದ್ದಾರೆ.
ಗದಗ ತಾಲೂಕಿನ ಅಂತೂರು ಬೆಂತೂರು ಗ್ರಾಮದಲ್ಲಿ ಈಗ ಸಂಭ್ರಮದ ವಾತಾವರಣಮನೆ ಮಾಡಿದೆ.
ಶ್ರೀ ಬೂದೀಶ್ವರ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಕಠಿಣವಾದ ಶಿವಯೋಗ ಸಮಾಧಿ ಯೋಗವನ್ನು ಮಾಡುತ್ತಿದ್ದಾರೆ.
ಒಂದು ತಿಂಗಳು ಮೌನಾನುಷ್ಠಾನ ಮಾಡಿದ್ದು, ಜೂನ್ 3ರಂದು ಮಧ್ಯರಾತ್ರಿ 3 ಗಂಟೆಗೆ, ಗರ್ಭಗುಡಿ ಪ್ರವೇಶ ಮಾಡಿದ್ದಾರೆ. ಶ್ರೀಗಳು ಗರ್ಭಗುಡಿ ಪ್ರವೇಶ ಮಾಡಿದ ನಂತರ ಬಾಗಿಲು ಬಂದ್ ಮಾಡಿ ಇಟ್ಟಿಗೆ, ಸಿಮೆಂಟ್ನಿಂದ ಕ್ಲೋಸ್ ಮಾಡಲಾಗಿದೆ.
ಗರ್ಭಗುಡಿಯಲ್ಲಿ ಯಾವುದೇ ಬೆಳಕು, ಗಾಳಿ, ನೀರು ಇಲ್ಲದೆ 33 ದಿನಗಳು ಇರಲಿದ್ದಾರೆ. ರಾಚೋಟೇಶ್ವರ ಸ್ವಾಮೀಜಿಗಳು ಲೋಕ ಕಲ್ಯಾಣಕ್ಕಾಗಿ ಈ ಹಿಂದೆ ಕೂಡ ಹಲವು ಶಿವಯೋಗ ಸಮಾಧಿ ವ್ರತ ಮಾಡಿದ್ದಾರೆ. ಈ ಬಾರಿ ಕೂಡ ಮಾಡುತ್ತಿದ್ದಾರೆ. ಸದ್ಯ ಶ್ರೀಗಳು ಗರ್ಭಗುಡಿಯಲ್ಲಿನ ಶಿವಲಿಂಗದ ಮುಂದೆ ಕಠಿಣ ತಪಸ್ಸು ಮಾಡುತ್ತಿದ್ದಾರೆ.
ಅಂತೂರು ಬೆಂತೂರು ಗ್ರಾಮ ಸೇರಿದಂತೆ ಹಲವು ಗ್ರಾಮದ ಭಕ್ತರು ಶ್ರೀ ಮಠಕ್ಕೆ ಬಂದು ದರ್ಶನ ಪಡೆಯುತ್ತಿದ್ದಾರೆ. 775 ಗಂಟೆಗಳ ಕಾಲ, ಅಂದರೆ 33 ದಿನಗಳವರೆಗೆ ನಿರಂತರವಾಗಿ ಶಿವಯೋಗ ಸಮಾಧಿಯಲ್ಲಿ ತೊಡಗಿರುವ ಸ್ವಾಮೀಜಿಗಳು, ಮಠದ ಗರ್ಭಗುಡಿಯಲ್ಲಿ ಶಿವಲಿಂಗದ ಸನ್ನಿಧಿಯಲ್ಲಿ ತಪಸ್ಸು ಮಾಡುತ್ತಿದ್ದಾರೆ.
ವಿಶ್ವಶಾಂತಿ, ಮಧ್ಯ ಪ್ರಾಚ್ಯ ಯುದ್ಧದ ವಾತಾವರಣ, ಮಳೆ-ಬೆಳೆ ಚೆನ್ನಾಗಿ ಬಂದು ಸಮೃದ್ಧಿ ಫಲಿಸಲಿ ಎಂದು ಶಿವಯೋಗ ಸಮಾಧಿ ಯೋಗ ಮಾಡುತ್ತಿದ್ದಾರೆ. ಸ್ವಾಮೀಜಿಗಳು ಕಠಿಣ ವ್ರತ ಕೈಗೊಂಡ ನಂತರ ಗ್ರಾಮದಲ್ಲಿ ಮಳೆ ಆಗಿದ್ದು, ಭಕ್ತರು ಸಂತಸಗೊಂಡಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಇಂತಹ ಅಪರೂಪದ ಯೋಗ ಸಾಧನೆ ಕುತೂಹಲಕ್ಕೆ ಕಾರಣವಾಗಿದೆ. ವಿಶ್ವಶಾಂತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಕೈಗೊಂಡಿರುವ ಈ 33 ದಿನಗಳ ಶಿವಯೋಗ ಸಮಾಧಿ ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯ ಮೂಡಿಸಿದೆ. 33 ದಿನಗಳ ನಂತರ ಸ್ವಾಮೀಜಿ ಹೊರಗಡೆ ಬಂದು, ದರ್ಶನ ನೀಡಲಿದ್ದಾರೆ. ಸ್ವಾಮೀಜಿಗಳ ಈ ನಡೆ ಭಕ್ತರಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್
Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು