Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪಂಚಾಂಗ > ಈ ದಿನ > GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ

Share
4 Min Read
SHARE

newsics.com/ನ್ಯೂಸಿಕ್ಸ್

ಶುಭೋದಯ

ಇಂದಿನ ಪಂಚಾಂಗ/ ರಾಶಿ ಭವಿಷ್ಯ

06-06-2026, ಶನಿವಾರ

ಪರಾಭವ ನಾಮ ಸಂವತ್ಸರ ಉತ್ತರಾಯಣ ಗ್ರೀಷ್ಮ ಋತು ಅಧಿಕ ಜ್ಯೇಷ್ಠ ಮಾಸ ಕೃಷ್ಣ ಪಕ್ಷ ಷಷ್ಠಿ.

ಇಂದಿನ ಶುಭಾಶುಭ ಕಾಲ 

ರಾಹು ಕಾಲ 09:10 – 10:46

ಯಮಗಂಡ ಕಾಲ 13:59 – 15:37

ಗುಳಿಕ ಕಾಲ 06:56 – 07:33.

—-

ಶಾಲಿವಾಹನ ಶಕೆ 1949ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ರೋಹಿಣೀ, ವಾರ : ಶನಿ, ಪಕ್ಷ : ಕೃಷ್ಣ, ತಿಥಿ : ಷಷ್ಠೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಬ್ರಹ್ಮ, ಕರಣ : ವಣಿಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 50 pm.

========

ರಾಶಿ ಭವಿಷ್ಯ

ಮೇಷ

ಮನೆಯವರ ಜವಾಬ್ದಾರಿಯು ಹೆಚ್ಚಿನ ಒತ್ತಡ ತರುವ ಸಾಧ್ಯತೆ ಇದೆ. ಪ್ರೀತಿಯ ಅಭಿವ್ಯಕ್ತಿಯು ಸಂಬಂಧಗಳಲ್ಲಿ ಸ್ಪಷ್ಟತೆಯನ್ನು ತಂದೀತು. ಮನಸ್ಸಿನಲ್ಲಿ ದೈವಭಕ್ತಿ ಮೂಡಬಹುದು. ವಿಶೇಷ ಭೋಜನವು ನಿಮ್ಮ ಆರೋಗ್ಯಕ್ಕೆ ತೊಂದರೆಕೊಡುವುದು. ಮನೆಗೆ ಬರುವ ಎಲ್ಲರನ್ನೂ ಪ್ರೀತಿಯಿಂದ ಸ್ವಾಗತಿಸಿ. ನಿಮ್ಮ ನಿರ್ಧಾರಗಳೇ ಅಂತಿಮವಾಗಬೇಕು ಎನ್ನುವ ಮನಃಸ್ಥಿತಿ ಇರುವುದು. ಮಾನಸಿಕವಾಗಿ ಉತ್ಸಾಹವು ಕಡಿಮೆ ಇರುವುದು.

ವೃಷಭ

ಕಚೇರಿಯಲ್ಲಿ ನಿಮ್ಮ ಕೆಲಸಗಳನ್ನು ಕಂಡು ನಿಮ್ಮನ್ನು ಪ್ರಶಂಸಿಸುವರು‌. ಮನಸ್ಸಿನಿಂದ ಬಂದ ಮಾತುಗಳು ಸಂಬಂಧವನ್ನು ಬಲಪಡಿಸುತ್ತವೆ. ಹೊಸದಾಗಿ ಉಂಟಾದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ವೈಯಕ್ತಿಕ ಚಿಂತನೆಗಳಿಗೆ ಅವಕಾಶ ಕೊಡಿ. ಮನಸ್ಸಿನಲ್ಲಿ ನೆಲೆಸಿರುವ ಗೊಂದಲಗಳು ಸಮಾಧಾನವಾಗಬಹುದು. ಕಾನೂನಿನ ಹೋರಾಟದಲ್ಲಿ ಜಯ ಗಳಿಸುವಿರಿ. ನಿಮ್ಮ ಪ್ರತಿಭೆಗೆ ಯೋಗ್ಯವಾದ ಕಾರ್ಯವು ಸಿಗುವುದು. ಭೂಮಿಯ ವ್ಯವಹಾರವನ್ನು ಒಬ್ಬೊಂಟಿಯಾಗಿ ನಿರ್ವಹಿಸುವಿರಿ.

ಮಿಥುನ

ಶೈಕ್ಷಣಿಕವಾದ ಪ್ರಗತಿಯನ್ನು ಸಾಧಿಸಬೇಕಾಗಬಹಿದು. ಪ್ರೀತಿಯಲ್ಲಿ ನಂಬಿಕೆ ಕಡಿಮೆಯಾಗಲಿದೆ. ಕೆಲಸದಲ್ಲಿ ನಿರ್ಧಾರ ತೆಗೆದುಕೊಳ್ಳುವ ವೇಳೆ ದಿಟ್ಟತನ ಇರಲಿ. ನಿಮ್ಮ ಆದರ್ಶಗಳು ಇತರರಿಗೆ ಪ್ರೇರಣೆಯಾಗಲಿದೆ. ಧೈರ್ಯವು ಯಶಸ್ಸಿಗೆ ದಾರಿ ತೋರುತ್ತದೆ. ಕೆಲವರು ನಿಮ್ಮ ಸಹಾಯವನ್ನು ಅಪೇಕ್ಷಿಸುತ್ತಿದ್ದಾರೆ. ಉದ್ಯೋಗಕ್ಕೆ ಸಂಬಂಧಿಸಿದ ಸಮಸ್ಯೆಗಳು ಶಾಶ್ವತ ಪರಿಹಾರದಿಂದ ಮರೆಯರಾಗುತ್ತದೆ. ಸಕಾರಾತ್ಮಕ ವಿಷಯಗಳು ವೇಗವನ್ನು ಪಡೆಯುತ್ತವೆ.‌

ಕರ್ಕಾಟಕ

ಮಕ್ಕಳಿಂದ ಮಾನಸಿಕ ಹಿಂಸೆ ಆರಂಭವಾಗಲಿದೆ. ನಿಮ್ಮ ಹಳೆಯ ಹಣವು ಕೈಸೇರಬಹುದು. ಖರ್ಚು ಹೆಚ್ಚಾಯಿತು ಎನ್ನುವ ಭಯವಿರುವುದು. ಗೊಂದಲದಿಂದ ದೂರವಿರುವ ಪ್ರಯತ್ನ ಮಾಡಿ. ಮನಸ್ಸಿಗೆ ಶಾಂತಿ ತರಲು ಸಂಗೀತ ಅಥವಾ ಸಾಹಿತ್ಯ ಸಹಕಾರಿ. ನಿಮ್ಮ ಭಾವನೆಗಳನ್ನು ಸ್ಪಷ್ಟವಾಗಿ ಹಂಚಿಕೊಳ್ಳಿ. ವಿವಾಹದ ಮಾತುಕತೆಗಳನ್ನು ನಡೆಸಲು ದೂರದ ಊರಿಗೆ ಪ್ರಯಾಣ ಮಾಡುವಿರಿ.

ಸಿಂಹ

ಸಣ್ಣ ಪುಟ್ಟ ವಿಷಯಗಳಿಗೂ ಕೋಪಗೊಳ್ಳುವಿರಿ. ಪರರ ಬಿಕ್ಕಟ್ಟಿಗೆ ನೀವು ಪರಿಹಾರವಾಗಬಹುದು. ನಿಮಗೆ ಕಷ್ಟವಾದರೆ ಯಾರಿಲ್ಲ. ನಿಮ್ಮ ಪರಿಶ್ರಮ ಇಂದು ಗಮನ ಸೆಳೆಯಲಿದೆ. ಆತ್ಮಪರಿಶೀಲನೆಗೆ ಈ ದಿನ ಅನುಕೂಲ. ಸಂಬಂಧಗಳನ್ನು ಹೂಡಿಕೆ ಎಂದು ಪರಿಗಣಿಸಿ, ನೆನೆಪಾದ ಹಳೆಯ ಸ್ನೇಹಿತರಿಂದ ಸಹಾಯ ಬರಬಹುದು. ಯಾರಾದರೂ ಮುಖಸ್ತುತಿಯನ್ನು ಮಾಡಬಹುದು. ಮುಜುಗರವೂ ನಿಮಗೆ ಆದೀತು. ಅತಿಯಾದ ನಂಬಿಕೆಯು ನಿಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಳ್ಳುವಂತೆ ಮಾಡುವುದು.

ಕನ್ಯಾ

ನಿಮ್ಮ ಜೀವನವನ್ನು ನೀವೇ ಲಘುವಾಗಿ ಕಾಣುವುದು ಬೇಡ. ಬಲಾಢ್ಯರ ಜೊತೆ ವೈರ ಕಾಣಿಸಿಕೊಳ್ಳುವುದು. ನಿಮ್ಮ ಮಾನಸಿಕ ಸ್ಥಿತಿ ಬಲಾಢ್ಯವಾಗಿರಲಿ. ಸ್ನೇಹಿತರ ಸಲಹೆಗಳಿಂದ ಹೊಸ ಆಯ್ಕೆಗಳನ್ನು ಪರಿಶೀಲಿಸಬಹುದು. ಪ್ರೀತಿಯ ಸಂಬಂಧದಲ್ಲಿ ನಂಬಿಕೆ ತುಂಬಬೇಕು. ನಿರ್ಧಾರಗಳ ಕುರಿತು ಧೈರ್ಯವಿಟ್ಟು ನಿಲ್ಲಿ. ನಿಮ್ಮ ಆಂತರಿಕ ಶಕ್ತಿಯ ಮೇಲೆ ನಂಬಿಕೆ ಇಡಿ. ವ್ಯವಹಾರದಲ್ಲಿ ಲಾಭದ ಸೂಚನೆಗಳಿವೆ. ನಿಮ್ಮ ಆದಾಯವು ಮೊದಲಿಗಿಂತ ಉತ್ತಮವಾಗಿದ್ದು ಅದನ್ನು ಒಂದು ಕಡೆ ಸ್ಥಿರವಾಗಿಸಿಕೊಳ್ಳಿ.

ತುಲಾ

ಒತ್ತಡದಲ್ಲಿದ್ದಾಗ ಸ್ವಲ್ಪ ಕಾಲ ಏನನ್ನೂ ಯೋಚಿಸದೇ ಇರಲು ಪ್ರಯತ್ನಿಸಿ. ಮನಸ್ಸಿನ ಶಕ್ತಿ ದ್ವಿಗಣವಾಗುವುದು. ನಕಾರಾತ್ಮಕತೆ ಆಲೋಚನೆಗಳೂ ದೂರವಾಗುವವು. ನಿಮ್ಮ ಉಪದೇಶವನ್ನು ಎಲ್ಲರೂ ಮೆಚ್ಚಬಹುದು. ಕುಟುಂಬದ ಸಹಕಾರದಿಂದ ಸಾಧನೆ ಸುಲಭವಾಗುತ್ತದೆ. ಹೊಸ ತಂತ್ರಗಳನ್ನು ಬಳಸಿಕೊಂಡು ಸಮಸ್ಯೆಗಳನ್ನು ಪರಿಹರಿಸಿ. ಪ್ರಯಾಣದಲ್ಲಿ ಯಾವುದೇ ತೊಂದರೆಗಳು ಬಾರದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು.

VASTU ಈ ಗಿಡಗಳನ್ನು ಯಾವತ್ತೂ ಗಿಫ್ಟ್ ಕೊಡಬೇಡಿ, ಇದರಿಂದ ಅಪಾಯವೇ ಹೆಚ್ಚು!

ವೃಶ್ಚಿಕ

ದೂರಪ್ರಯಾಣ ಸುಖಕರವಾಗಿ ಇರುವಿದಾದರೂ ಅನಂತರ ಕಷ್ಟಪಡಬೇಕಾದೀತು. ಯಾರನ್ನೋ ಅವಮಾನಿಸಲು ಹೋಗಿ ಹಳ್ಳಕ್ಕೆ ಬೀಳಬೇಡಿ. ಪ್ರೀತಿಯಿಂದ ಮಾಡಿದ ಕೆಲಸ ಫಲ ನೀಡುತ್ತದೆ. ನಿನ್ನೆ ವಿಫಲವಾದದ್ದನ್ನು ಪುನಃ ಪ್ರಯತ್ನಿಸಿ ಯಶಸ್ಸು ಇಂದು ನಿಮ್ಮದಾಗಬಹುದು. ಮನಸ್ಸು ಉದ್ವಿಗ್ನವಾಗಿದ್ದರೂ ಧೈರ್ಯದಿಂದ ನಿರ್ಧಾರ ತೆಗೆದುಕೊಳ್ಳಿ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಕಾದಾಟದಿಂದ ಸಮಯವು ವ್ಯರ್ಥವಾಗಲಿದೆ.

ಧನುಸ್ಸು

ದಿನಚರಿಯ ವ್ಯತ್ಯಾಸದಿಂದ ಆರೋಗ್ಯ ಕೆಡಬಹುದು. ನಿಜವಾದ ಸ್ನೇಹಿತರು ನಿಮ್ಮೊಂದಿಗೆ ತಾಳ್ಮೆಯಿಂದ ಇರುತ್ತಾರೆ. ಮನೆಯ ವಿಷಯಗಳಲ್ಲಿ ಜಾಗರೂಕತೆಯ ಅಗತ್ಯವಿದೆ. ನಿಮ್ಮ ಉತ್ಕೃಷ್ಟತೆ ಮಿಂಚಲು ಅವಕಾಶ ದೊರೆಯುತ್ತದೆ. ಸಂಗಾತಿಯ ಜೊತೆ ಸಾಂತ್ವನದ ಮಾತುಗಳು ಸಂಬಂಧ ಬಲಪಡಿಸುತ್ತವೆ. ಸ್ಪರ್ಧೆಯ ವಿಷಯದಲ್ಲಿ ಮುನ್ನುಗ್ಗುವ ಸ್ವಭಾವವು ಇರಲಿದೆ. ದೂರ ಪ್ರಯಾಣವನ್ನು ನೋವು ಹೆಚ್ಚು ಇಷ್ಟಪಡುವಿರಿ.

ಮಕರ

ನಿಮ್ಮನ್ನು ಗಮನಿಸುವವರು ಹತ್ತಾರು ಮಂದಿಯಿರುತ್ತಾರೆ. ಅವರೇನೇ ಹೇಳಿದರೂ ನಿಮ್ಮ ಸನ್ಮಾರ್ಗವನ್ನು ಬಿಡಬೇಡಿ. ಮೌನದಿಂದ ನೀವು ಕೆಲಸವನ್ನು ಸಾಧಿಸಿಕೊಳ್ಳುವಿರಿ ಧೈರ್ಯದಿಂದ ನಿಂತು, ನಿಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿ. ಬುದ್ಧಿವಂತಿಕೆಯೊಂದಿಗೆ ಸಮಸ್ಯೆಗಳಿಗೆ ಪರಿಹಾರ ಹುಡುಕಿ. ಕೆಲವು ಸಮಸ್ಯೆಗಳು ಮರುಕಳಿಸುತ್ತವೆ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ.

ಕುಂಭ 

ಕುಟುಂಬದ ಅಪರೂಪದ ವ್ಯಕ್ತಿಗಳನ್ನು ಭೇಟಿಯಾಗುವ ಸಂದರ್ಭ ಬರಬಹುದು. ಸ್ನೇಹಿತರ ಮಾತುಗಳ ಹಿಂದಿನ ವ್ಯಂಗ್ಯಾರ್ಥವನ್ನು ಹುಡುಕಲು ಯತ್ನಿಸುವಿರಿ. ಮನೆಯ ತೊಡಕುಗಳನ್ನು ಧೈರ್ಯದಿಂದ ಎದುರಿಸಬೇಕು. ವೈಯಕ್ತಿಕ ಬದ್ಧತೆಗಳು ಬಲವಾದ ನಂಬಿಕೆಯನ್ನು ಹುಟ್ಟುಹಾಕುತ್ತವೆ. ಕೆಲಸದಲ್ಲಿ ಜವಾಬ್ದಾರಿ ಬದಲಾಗಬಹುದು. ಆತ್ಮೀಯ ಸ್ನೇಹಿತರ ಒಡನಾಟ ಮನದ ಸಂತೋಷವನ್ನು ಹೆಚ್ಚಿಸುತ್ತದೆ. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ.

ಮೀನ

ಪಾಲುಗಾರಿಕೆಯ ವ್ಯವಹಾರದಲ್ಲಿ ತೊಡಗಿಸಿದ್ದ ಹಣವನ್ನು ಮರಳಿ ಪಡೆಯುವಿರಿ. ಹೊಸ ಪ್ರಸ್ತಾವನೆಗಳನ್ನು ಪಾಲುದಾರರ ಮುಂದೆ ಇಡಬೇಡಿ. ನಿಮ್ಮೊಳಗಿನ ಶಾಂತಿಯೇ ನಿಮ್ಮ ಉತ್ತಮ ಸ್ನೇಹಿತನಾಗಲಿದೆ. ತಾತ್ವಿಕ ಚಿಂತನೆಗಳು ಇಂದು ನಿಮಗೆ ದಾರಿದೀಪವಾಗುತ್ತದೆ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ. ವ್ಯರ್ಥ ಸುತ್ತಾಟದಿಂದ ನೀವು ಸಿಟ್ಟಾಗುವಿರಿ.

 

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

TAGGED:#almanac #zodiac #prediction #06-06-2026 #saturday #horoscope #planetary #positions #news #newsics
Share This Article
Facebook Twitter Copy Link Print
Previous Article ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!
Next Article ಅಣ್ಣಾಮಲೈ ಬೆನ್ನಲ್ಲೇ ಮತ್ತೊಬ್ಬ ಪ್ರಭಾವಿ ನಾಯಕ ರಾಜೀನಾಮೆ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?