Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಳೆಗಾಲ ಮುಕ್ತಾಯದವರೆಗೆ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ
ಕರ್ನಾಟಕಪ್ರಮುಖ

ಮಳೆಗಾಲ ಮುಕ್ತಾಯದವರೆಗೆ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Share
1 Min Read
SHARE

newsics.com/ನ್ಯೂಸಿಕ್ಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಹೆಚ್ಚಾಗುವ ದಿನಗಳಲ್ಲಿ ರಸ್ತೆಯ ಪರಿಸ್ಥಿತಿ ಹದಗೆಡುತ್ತದೆಯಲ್ಲದೆ ಅಧಿಕ ಭಾರ ತುಂಬಿದ ಭಾರೀ ಸರಕು ಸಾಗಾಣೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆಯ ಬದಿಗಳ ಮಣ್ಣು ಭೂಕುಸಿತದಿಂದಾಗಿ ರಸ್ತೆಯ ಮೇಲೆ ಮಣ್ಣು ಬಿದ್ದು, ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿರುತ್ತದೆ.

ಆದ್ದರಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005 ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ (5) ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರಡಿ ಪ್ರದತ್ತವಾದ ಅಧಿಕಾರದಂತೆ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜೂನ್, 10 ರಿಂದ ಜುಲೈ, 09 ರವರೆಗೆ ವಾಹನ ಸಂಚಾರ ವ್ಯವಸ್ಥೆ ನಿರ್ವಹಿಸಲು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ.

ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು/ ಆರ್ಟಿಕ್ಯೂಲೇಟೆಡ್ ವಾಹನಗಳು.

ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದೆ ಎಂದು ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ಲೇಯರ್ ಜತೆ ಮದುವೆ, ಸ್ನೇಹಿತನೊಂದಿಗೆ ಸರಸ! ಮುಂದಾಗಿದ್ದೇನು?

TAGGED:Heavy vehicle movement banned in Kodagu district until the end of the monsoon season
Share This Article
Facebook Twitter Copy Link Print
Previous Article ಪ್ಲೇಯರ್ ಜತೆ ಮದುವೆ, ಸ್ನೇಹಿತನೊಂದಿಗೆ ಸರಸ! ಮುಂದಾಗಿದ್ದೇನು?
Next Article ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?