newsics.com/ನ್ಯೂಸಿಕ್ಸ್
ಕಾರವಾರ: ಮದುವೆ ಸಮಾರಂಭಗಳಲ್ಲಿ ಮದುಮಗನ ಮನೆಗೆ ಸಾಗುವ ದಿಬ್ಬಣ ಕಾರ್ಯಕ್ರಮಗಳ ಫೋಟೊ ಹಾಗೂ ವಿಡಿಯೊ ಚಿತ್ರೀಕರಣವನ್ನು ಇನ್ನು ಮುಂದೆ ಮಾಡದಿರಲು ಕಾರವಾರ ತಾಲೂಕು ಫೋಟೋಗ್ರಾಫರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಸದಸ್ಯರು ಮಾತನಾಡಿ, ಛಾಯಾಗ್ರಾಹಕರು ಎದುರಿಸುತ್ತಿರುವ ಭದ್ರತಾ ಸಮಸ್ಯೆಗಳು ಹಾಗೂ ಸಮಯದ ಅಭಾವದ ಕುರಿತು ತಮ್ಮ ಅಳಲು ತೋಡಿಕೊಂಡರು.
ಕಾರವಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಸಂತಾನ್ ಫರ್ನಾಂಡೀಸ್, ಈಚಿನ ದಿನಗಳಲ್ಲಿ ಮದುವೆ ದಿಬ್ಬಣ ಕಾರ್ಯಕ್ರಮಗಳು ತಡರಾತ್ರಿ ವರೆಗೂ ಮುಂದುವರಿಯುತ್ತಿವೆ. ಇದರಿಂದಾಗಿ ಫೋಟೋಗ್ರಾಫರ್‌ಗಳು ಯಾವುದೇ ಸಮಯದ ಮಿತಿಯಿಲ್ಲದೆ, ವಿಶ್ರಾಂತಿ ಇಲ್ಲದೆ ಕೆಲಸ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಅಲ್ಲದೆ, ತಡರಾತ್ರಿಯ ದಿಬ್ಬಣಗಳಲ್ಲಿ ಕೆಲವೆಡೆ ಫೋಟೋಗ್ರಾಫರ್‌ಗಳು ಹಾಗೂ ವಿಡಿಯೋಗ್ರಾಫರ್‌ಗಳೊಂದಿಗೆ ಕೆಲವರು ಅತ್ಯಂತ ಅನುಚಿತವಾಗಿ ವರ್ತಿಸಿದ ಘಟನೆಗಳು ನಡೆದಿವೆ. ಕೆಲವು ಸಂದರ್ಭಗಳಲ್ಲಿ ಲಕ್ಷಾಂತರ ರು. ಬೆಲೆಬಾಳುವ ಕ್ಯಾಮೆರಾಗಳನ್ನು ಕಸಿದುಕೊಳ್ಳುವ ಹಾಗೂ ಹಾನಿ ಮಾಡುವ ಯತ್ನಗಳು ನಡೆದಿವೆ ಎಂದು ಅಸೋಸಿಯೇಷನ್ ಸದಸ್ಯರು ತೀವ್ರ ಆತಂಕ ವ್ಯಕ್ತಪಡಿಸಿದರು.
ಇದೇ ವೇಳೆ ಫೋಟೋಗ್ರಫಿ ಕ್ಷೇತ್ರದಲ್ಲಿ ಬಳಸುವ ಕ್ಯಾಮೆರಾ, ಲೈಟಿಂಗ್ ಸೇರಿದಂತೆ ವಿವಿಧ ಉಪಕರಣಗಳ ಬೆಲೆ ಹಾಗೂ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಕಾರಣ ಪಾಸ್‌ಪೋರ್ಟ್ ಸೈಜ್ ಫೋಟೊ ಸೇರಿದಂತೆ ವಿವಿಧ ಫೋಟೋಗ್ರಫಿ ಸೇವೆಗಳ ದರ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಗೌರವಾಧ್ಯಕ್ಷ ಸೂರಜ್ ಜೋಗಳೇಕರ್, ಮಾಹಿತಿ ನೀಡಿದರು.
ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ : ಡಿ.ಕೆ. ಶಿವಕುಮಾರ್