newsics.com /ನ್ಯೂಸಿಕ್ಸ್
ಬೆಂಗಳೂರು : ಯಾವುದೇ ವ್ಯಕ್ತಿಗೆ ವಯಸ್ಸಿನ ಅಧಿಕೃತ ಪುರಾವೆ (ಐಡಿ ಕಾರ್ಡ್) ಇಲ್ಲದೆ ಪಬ್, ಬ್ರೂವರೀಸ್, ಬಾರ್, ಕ್ಲಬ್ ಅಥವಾ ಮದ್ಯ ಸರಬರಾಜು ಮಾಡುವ ಸಂಸ್ಥೆಗಳ ಒಳಗೆ ಪ್ರವೇಶ ನೀಡಬಾರದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿರಿಯ ಪೊಲೀಸ್ ಆಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನಿಡಿದ್ದಾರೆ.
ಸೋಮವಾರ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಈ ಸೂಚನೆ ನೀಡಿದ ಅವರು, ಸಂಸ್ಥೆಗಳು ಗ್ರಾಹಕರಿಗೆ ಪ್ರವೇಶ ನೀಡುವ ಮೊದಲು ಅಥವಾ ಮದ್ಯವನ್ನು ಸರಬರಾಜು ಮಾಡುವ ಮುನ್ನ ಸರ್ಕಾರ ನೀಡಿದ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಪರಿಶೀಲಿಸಿ ವಯಸ್ಸನ್ನು ದೃಢೀಕರಿಸಿಕೊಳ್ಳಬೇಕು. ಒಂದು ವೇಳೆ, ಅಪ್ರಾಪ್ತ ವಯಸ್ಕರಿಗೆ ಮದ್ಯ ಸರಬರಾಜು ಮಾಡುವ ಅಥವಾ ಅಪ್ರಾಪ್ತರ ಮದ್ಯಪಾನಕ್ಕೆ ಪ್ರಚೋದನೆ ನೀಡುವ ಯಾವುದೇ ಸಂಸ್ಥೆಯ ವಿರುದ್ಧ ಅನ್ವಯವಾಗುವ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮದ್ಯ ಪೂರೈಸುವ ಸಂಸ್ಥೆಗೆ ನೊಟೀಸ್ ನೀಡಿ :
ಅಪ್ರಾಪ್ತ ವಯಸ್ಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ತಡೆಯಲು ಮತ್ತು ಮದ್ಯ ಸರಬರಾಜು ಮಾಡುವುದನ್ನು ನಿಷೇಧಿಸಲು ಬೆಂಗಳೂರಿನ ಎಲ್ಲಾ ಪಬ್ಗಳು, ಬ್ರೂವರೀಸ್, ಬಾರ್ಗಳು, ಕ್ಲಬ್ಗಳು, ಲಾಂಜ್ಗಳು, ರೆಸ್ಟೋರೆಂಟ್ಗಳು ಹಾಗೂ ಮದ್ಯ ಸರಬರಾಜು ಮಾಡುವ ಇತರ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಪ್ರವೇಶ ದ್ವಾರದಲ್ಲೇ ಐಡಿ ಕಾರ್ಡ್ ಪರಿಶೀಲಿಸಿ:
ಮದ್ಯ ಸರಬರಾಜು ಮಾಡುವ ಎಲ್ಲಾ ಸಂಸ್ಥೆಗಳು ಪ್ರವೇಶ ದ್ವಾರದಲ್ಲಿ ಮತ್ತು ಮದ್ಯವನ್ನು ನೀಡುವ ಮೊದಲು ಕಟ್ಟುನಿಟ್ಟಾದ ವಯಸ್ಸಿನ ಪರಿಶೀಲನಾ ನಿಯಮಗಳನ್ನು ಜಾರಿಗೆ ತರಬೇಕು ಎಂದು ಆದೇಶಿಸಿದ್ದಾರೆ.
ಅಲ್ಲದೆ, ಸಂಸ್ಥೆಯ ಆವರಣದೊಳಗೆ ನಡೆಯುವ ನಿಯಮ ಉಲ್ಲಂಘನೆಗಳಿಗೆ ಆಯಾ ಸಂಸ್ಥೆಯ ಮಾಲೀಕರು, ವ್ಯವಸ್ಥಾಪಕರು, ಪರವಾನಗಿದಾರರು ಮತ್ತು ಕಾರ್ಯಕ್ರಮದ ಆಯೋಜಕರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದ್ದಾರೆ
ಸಾಮಾನ್ಯಳಂತೆ ಪಬ್ಗೆ ತೆರಳಿ ಬೃಹತ್ ಸೆಕ್ಸ್ ದಂಧೆ ಜಾಲ ಬಯಲಿಗೆಳೆದ ಐಪಿಎಸ್ ಅಧಿಕಾರಿ