ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ

newsics.com/ನ್ಯೂಸಿಕ್ಸ್ ಬೇಲೂರು : ತಾಲೂಕಿನ ಅರೇಹಳ್ಳಿ ಹೋಬಳಿಯ ಲಿಂಗಾಪುರ, ಉದೇವಾರ, ಹುಲ್ಲೇಮಕ್ಕಿ, ಕಡೆಗರ್ಜೆ, ಗುಡ್‌ಪೇಟೆ ಎಸ್ಟೇಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಐದಾರು ತಿಂಗಳಿಂದ ಕಾಣೆಯಾಗಿದ್ದ ಕಾಡಾನೆಗಳ ಹಿಂಡು ಮತ್ತೆ ಪ್ರತ್ಯಕ್ಷವಾಗಿದ್ದು, ರೈತರು ಹಾಗೂ ಕೂಲಿಕಾರ್ಮಿಕರಲ್ಲಿ ಆತಂಕ ಮೂಡಿಸಿದೆ. ಹಿಂದೆ ಕಾಡಾನೆಗಳ ಹಾವಳಿಯಿಂದ ಬೇಸತ್ತ ರೈತರು ತಮ್ಮ ತೋಟಗಳಿಗೆ ಸೋಲಾರ್ ವಿದ್ಯುತ್ ಬೇಲಿಗಳನ್ನು ಅಳವಡಿಸಿಕೊಂಡ ಬಳಿಕ ಆನೆಗಳು ಬಿಕ್ಕೋಡು, ಚೀಕನಹಳ್ಳಿ ಹಾಗೂ ಮೂಡಿಗೆರೆ ಭಾಗಗಳತ್ತ ತೆರಳಿದ್ದವು. ಆದರೆ ಕಳೆದ ಒಂದು ವಾರದಿಂದ ಸುಮಾರು 20ಕ್ಕೂ ಹೆಚ್ಚು ಕಾಡಾನೆಗಳ ಗುಂಪು … Continue reading ಸೋಲಾರ್ ಬೇಲಿಗೂ ಕ್ಯಾರೆ ಎನ್ನದ ಕಾಡಾನೆಗಳು: ಅರೇಹಳ್ಳಿ ಭಾಗದಲ್ಲಿ ಮತ್ತೆ ಆನೆಗಳ ಹಾವಳಿ