newsics.com/ನ್ಯೂಸಿಕ್ಸ್
ಬೆಂಗಳೂರು: ನಗರದ ಹೊರವಲಯದ ಆವಲಹಳ್ಳಿ ಪ್ರದೇಶದ ಕಾಡು ಅಗ್ರಹಾರದ ಸಮೀಪ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಮತ್ತು ಡಿಟೋನೇಟರ್‌ಗಳು ಪತ್ತೆಯಾಗಿದೆ.
ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ ಸುಮಾರು 50 ಡಿಟೋನೇಟರ್‌ಗಳು ಹಾಗೂ 225 ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಿಕೊಂಡಿದ್ದಾರೆ. ಸ್ಫೋಟಕ ಸಾಮಗ್ರಿಗಳನ್ನು ಅಕ್ರಮವಾಗಿ ಸಂಗ್ರಹಿಸಲಾಗಿತ್ತೇ ಅಥವಾ ಬೇರೆ ಯಾವುದೇ ಉದ್ದೇಶಕ್ಕಾಗಿ ಇಡಲಾಗಿತ್ತೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.ವೆಂಕಟರಾಮರೆಡ್ಡಿ ಎಂಬುವವರು ಭಾರಿ ಪ್ರಮಾಣದ ಸ್ಪೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದರು.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸ್ಫೋಟಕ ಸಾಮಗ್ರಿಗಳ ಮೂಲ ಮತ್ತು ಇದರಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಭದ್ರತಾ ದೃಷ್ಟಿಯಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.