newsics.com/ನ್ಯೂಸಿಕ್ಸ್
ದಾವಣಗೆರೆ: ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 41 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಪತಿ ಜೊತೆ ಜಗಳವಾಡಿದ್ದ ಮಹಿಳೆ ತವರಿಗೆ ಹೋಗಲು ರಸ್ತೆ ಬದಿಯಲ್ಲಿ ನಿಂತಿದ್ದರು. ಈ ವೇಳೆ ಹಂದಿ ಬೇಟೆಗೆಂದು ತೆರಳಿದ್ದ ಯುವಕರ ಗುಂಪೊಂದು ಒಂಟಿಯಾಗಿದ್ದ ಮಹಿಳೆಯನ್ನು ಗಮನಿಸಿದೆ. ಮಹಿಳೆ ಸುಸ್ತಾಗಿರುವುದನ್ನು ಕಂಡು, “ಅಕ್ಕಾ, ತುಂಬಾ ಸುಸ್ತಾಗಿದ್ದೀಯಾ ಕೂಲ್ ಡ್ರಿಂಕ್ಸ್ ಕುಡಿ” ಎಂದು ನಂಬಿಸಿ, ಅದರಲ್ಲಿ ಮದ್ಯ ಬೆರೆಸಿ ಕುಡಿಸಿದ್ದಾರೆ. ಮಹಿಳೆ ಪ್ರಜ್ಞೆ ತಪ್ಪುತ್ತಿದ್ದಂತೆ ಆಕೆಯನ್ನು ಸಮೀಪದ ತೋಟಕ್ಕೆ ಎಳೆದೊಯ್ದು, ರಾತ್ರಿಯಿಂದ ಮುಂಜಾನೆಯವರೆಗೆ ಯುವಕರ ಗುಂಪು ವಿಕೃತಿ ಮೆರೆದಿದೆ. ಅಷ್ಟಕ್ಕೇ ನಿಲ್ಲದ ಕಾಮುಕರು, ಮಹಿಳೆಯ ಬೆತ್ತಲೆ ಫೋಟೋ ಹಾಗೂ ವೀಡಿಯೋಗಳನ್ನು ಚಿತ್ರೀಕರಿಸಿ ವಿಕೃತ ಸಂತೋಷ ಪಟ್ಟಿದ್ದಾರೆ.
ಆರೋಪಿಗಳು ತಾವು ಮಾಡಿದ ವೀಡಿಯೋ ಹಾಗೂ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಇತ್ತ ಗ್ರಾಮದಲ್ಲಿ ಘಟನೆಗೆ ಸಂಬಂಧಿಸಿದಂತೆ ಗುಸುಗುಸು ಚರ್ಚೆ ಆರಂಭವಾಗಿ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಹೆದರಿದ ಆರೋಪಿಗಳು ವೀಡಿಯೋಗಳನ್ನು ಡಿಲೀಟ್ ಮಾಡಿದ್ದಾರೆ. ತದನಂತರ ಧೈರ್ಯ ಮಾಡಿದ ಸಂತ್ರಸ್ತೆ ಬಸವಪಟ್ಟಣ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಸದ್ಯ ಬಸವಪಟ್ಟಣ ಪೊಲೀಸ್ ಠಾಣೆಯಿಂದ ಆರೋಪಿಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗುತ್ತದೆ.
ಬೆಳ್ಳಿ ಲೋಟದಲ್ಲಿ ನೀರು ಕುಡಿದ್ರೆ ಸಿಗುತ್ತಂತೆ ಹತ್ತಾರು ಪ್ರಯೋಜನ; ಟಾಪ್ ಸೀಕ್ರೆಟ್ ರಿವೀಲ್ ಮಾಡಿದ ಕಂಗನಾ!