newsics.com/ನ್ಯೂಸಿಕ್ಸ್
ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ನಡುವೆ ತೀವ್ರ ಮಿಲಿಟರಿ ಸಂಘರ್ಷ ಏರ್ಪಟ್ಟಿದೆ. ಅಮೆರಿಕ ಇರಾನ್ ಮಿಲಿಟರಿ ನೆಲೆಗಳ ಮೇಲೆ ವಾಯುದಾಳಿ ನಡೆಸಿದರೆ, ಇರಾನ್ ಬಹ್ರೇನ್‌ನಲ್ಲಿರುವ ಅಮೆರಿಕದ ನೌಕಾಪಡೆಯ ಮೇಲೆ ಡ್ರೋನ್ ದಾಳಿ ನಡೆಸಿದೆ.
ಓಮನ್ ಬಳಿ ಗಸ್ತು ತಿರುಗುತ್ತಿದ್ದ ಅಮೆರಿಕ ಸೇನೆಯ ಮೇಲೆ ಇರಾನ್ ದಾಳಿ ನಡೆಸಿದ ಬೆನ್ನಲ್ಲೇ ಯುಎಸ್ ಪಡೆಗಳು ದಕ್ಷಿಣ ಇರಾನ್‌ನ ಮಿಲಿಟರಿ ನೆಲೆಗಳ ಮೇಲೆ ಭಾರಿ ವಾಯುದಾಳಿ ನಡೆಸಿವೆ.
ಇದಕ್ಕೆ ಪ್ರತಿಯಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಬಹ್ರೇನ್‌ನಲ್ಲಿರುವ ಅಮೆರಿಕದ ಐದನೇ ಫ್ಲೀಟ್ ನೌಕಾಪಡೆಯ ಕೇಂದ್ರದ ಮೇಲೆ ಸರಣಿ ಡ್ರೋನ್ ದಾಳಿಗಳನ್ನು ನಡೆಸುವ ಮೂಲಕ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ತಲ್ಲಣ ಮೂಡಿಸಿದೆ.
ಎಲ್ಲರೂ ನನ್ನ ಬಿಟ್ಟು ಹೋದರು; ಆ ದಿನಗಳ ನೋವನ್ನು ಹಂಚಿಕೊಂಡ ನಟ ಅರ್ಜುನ್ ರಾಂಪಾಲ್