Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಸಚಿವ ಯುಟಿ ಖಾದರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡುತ್ತಿದ್ದಾರೆ. ರಾಜ್ಯದಲ್ಲಿ ದಶಕಗಳಿಂದ ಕಾಡುತ್ತಿರುವ ವೈದ್ಯರ ಕೊರತೆ ನೀಗಿಸಲು ಸಚಿವರು ಮೊದಲ ಪ್ರಗತಿ ಪರಿಶೀಲನಾ ಸಭೆಯಲ್ಲೇ ಆ್ಯಕ್ಷನ್ ಪ್ಲಾನ್ ಸಿದ್ಧಪಡಿಸಿದ್ದಾರೆ.

ರಾಜ್ಯದ ವಿವಿಧ ಕಡೆಗಳಲ್ಲಿ ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವ ಮೊದಲ ಹಂತವಾಗಿ 200 ವೈದ್ಯರನ್ನು ಖಾಯಂ ಹಾಗೂ ನೇರ ನೇಮಕಾತಿ ಮಾಡಿಕೊಳ್ಳಲು ಇಲಾಖೆ ನಿರ್ಧರಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದ್ದು, ಪರೀಕ್ಷೆ ಮುಗಿದ ಕೇವಲ ಒಂದು ವಾರದ ಒಳಗಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲು ನಿರ್ಧಾರ ಮಾಡಲಾಗಿದೆ. ಈ 200 ವೈದ್ಯರ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಈಗಾಗಲೇ ಅಧಿಕೃತ ಅನುಮೋದನೆ ಕೂಡ ದೊರೆತಿದೆ.

 

ಸದ್ಯ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಟ್ಟು 1,280 ವೈದ್ಯರ ಕೊರತೆಯಿದೆ ಎಂದು ಅಂದಾಜಿಸಲಾಗಿದೆ. ವೈದ್ಯರ ಜೊತೆಗೆ ಆಸ್ಪತ್ರೆಗಳ ಸುಗಮ ನಿರ್ವಹಣೆಗೆ ಅಗತ್ಯವಿರುವ ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಇಲಾಖೆ ಮುಂದಾಗಿದೆ. ಇದರ ಭಾಗವಾಗಿ 400 ನರ್ಸ್‌ಗಳು, 400 ಫಾರ್ಮಸಿಸ್ಟ್‌ಗಳು ಹಾಗೂ 400 ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕವೇ ಖಾಯಂ ಆಗಿ ಭರ್ತಿ ಮಾಡಿಕೊಳ್ಳಲು ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ.

ತುರ್ತು ಅಗತ್ಯತೆಗಳನ್ನು ಪೂರೈಸಲು ತಕ್ಷಣವೇ ಜಾರಿಗೆ ಬರುವಂತೆ ಗುತ್ತಿಗೆ ಆಧಾರದ ಮೇಲೆ 1,000 ವೈದ್ಯರನ್ನು ನೇಮಕ ಮಾಡಿಕೊಳ್ಳಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ಈ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ, ಬದಲಾಗಿ ನೇರ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಆಸಕ್ತ ವೈದ್ಯರು ಆಯಾ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ನೇರವಾಗಿ ಅರ್ಜಿ ಸಲ್ಲಿಸಿ, ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

TAGGED:UT Khader orders permanent appointment of 200 doctors within a week
Share This Article
Facebook Twitter Copy Link Print
Previous Article ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ
Next Article ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

Popular Posts

CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

1 Min Read

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

You Might Also Like

ದೇಶಪ್ರಮುಖ

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read
ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?