newsics.com/ನ್ಯೂಸಿಕ್ಸ್
ದಕ್ಷಿಣ ಕನ್ನಡ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 600ಕ್ಕೆ 596 ಅಂಕಗಳನ್ನು ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದು ಸಾಧನೆ ಮಾಡಿದ್ದ ಸುಳ್ಯದ ಪ್ರತಿಭಾವಂತ ವಿದ್ಯಾರ್ಥಿನಿ ಅಭಿಜ್ಞಾ ಭಟ್ (19) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮೃತ ಅಭಿಜ್ಞಾ ಭಟ್ ಅವರು ಸುಳ್ಯದ ಹೆಸರಾಂತ ಕಿವಿ, ಮೂಗು ಮತ್ತು ಗಂಟಲು (ENT) ತಜ್ಞ ವೈದ್ಯರಾದ ಡಾ. ರವಿಶಂಕರ್ ಅವರ ಹಿರಿಯ ಪುತ್ರಿಯಾಗಿದ್ದಾರೆ.
ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಜ್ಞಾ ಭಟ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ಖಚಿತಪಡಿಸಿವೆ.
ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿಜ್ಞಾನ ವಿಭಾಗದ (PCMB) ವಿದ್ಯಾರ್ಥಿನಿಯಾಗಿದ್ದ ಅಭಿಜ್ಞಾ ಭಟ್ ಅವರು ಓದಿನಲ್ಲಿ ಸದಾ ಮುಂಚೂಣಿಯಲ್ಲಿದ್ದರು. ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದಾಗ ಅವರು 595 ಅಂಕ ಗಳಿಸಿದ್ದರು. ಆದರೆ ಹಿಂದಿ ವಿಷಯದ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ಅವರಿಗೆ ಹೆಚ್ಚುವರಿಯಾಗಿ ಒಂದು ಅಂಕ ಲಭಿಸಿತ್ತು.
ಶ್ರೀ ಕಲ್ಯಾಣ್ ಕುಮಾರ್ ಪವನ್ ಆಗಿದ್ದು ಹೇಗೆ? ಪವರ್ ಸ್ಟಾರ್ ಹೆಸರಿನ ಹಿಂದಿನ ಅಸಲಿ ಮ್ಯಾಜಿಕ್!