newsics.com/ನ್ಯೂಸಿಕ್ಸ್
ಬೆಂಗಳೂರು: ಚೆಕ್ ಬೌನ್ಸ್ ಆದಾಗ ವಿಧಿಸಲಾಗುವ ದಂಡವನ್ನು ಪಾವತಿಸದ ಆರೋಪಿಯನ್ನು ಯಾವುದೇ ಕಾರಣಕ್ಕೂ ಗರಿಷ್ಠ 2 ವರ್ಷಕ್ಕಿಂತ ಹೆಚ್ಚು ಅವಧಿಗೆ ಜೈಲಿನಲ್ಲಿ ಇಡುವಂತಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ಸ್ ಕಾಯ್ದೆ (NI Act) ಸೆಕ್ಷನ್ 138ರ ಅಡಿಯಲ್ಲಿ ದಾಖಲಾಗಿದ್ದ ಮೂರು ಪ್ರತ್ಯೇಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ತಲಾ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತ ವ್ಯಕ್ತಿ ನ್ಯಾಯಾಲಯದ ಮೊರೆ ಹೋಗಿದ್ದನು.
ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಮಾನ್ಯ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಎಂ. ನಾಗಪ್ರಸನ್ನ ಅವರು ಕಾನೂನಿನ ಮಿತಿಯನ್ನು ನೆನಪಿಸಿದ್ದಾರೆ. ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಾನೂನುಬದ್ಧವಾಗಿ ವಿಧಿಸಬಹುದಾದ ಗರಿಷ್ಠ ಶಿಕ್ಷೆಯ ಅವಧಿ ಎರಡು ವರ್ಷಗಳು ಮಾತ್ರ. ಹೀಗಾಗಿ, ದಂಡ ಕಟ್ಟದಿದ್ದರೂ ಸಹ ಆರೋಪಿಯನ್ನು ಎರಡು ವರ್ಷ ಮೀರಿ ಜೈಲಿನಲ್ಲಿ ಇರಿಸಲು ಅವಕಾಶವಿಲ್ಲ ಎಂದು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್!