newsics.com/ನ್ಯೂಸಿಕ್ಸ್
ನವದೆಹಲಿ: ಸತತ ಮೂರು ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಗೆಲುವಿನ ದಡ ಸೇರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು 2014 ರಿಂದಲೂ ದೇಶದ ಪ್ರಧಾನಿಯಾಗಿದ್ದಾರೆ. ಈ ಮೂಲಕ ದೇಶದ ದೀರ್ಘಾವಧಿ ಚುನಾಯಿತ ಪ್ರಧಾನಿ ಎಂಬ ನೆಹರು ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಇನ್ನೂ ಈ ದಾಖಲೆಯ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ನಾನು ಮುಂದೊಂದು ದಿನ ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ. 12 ವರ್ಷ ಭಾರತಮಾತೆಯ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದ್ದು ದೇವರು ನನಗೆ ಕಲ್ಪಿಸಿಕೊಟ್ಟ ಅವಕಾಶ ಎಂದಿದ್ದಾರೆ.
ಎನ್‌ಡಿಎ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಜನತೆ ಈಗ ರಾಜಕೀಯ ಸ್ಥಿರತೆಯ ಪ್ರಾಮುಖ್ಯತೆಯನ್ನು ಮತ್ತು ಸ್ಥಿರ ಸರ್ಕಾರದ ನಿರ್ಣಾಯಕ ನಿರ್ಧಾರಗಳ ಮಹತ್ವವನ್ನು ಅರ್ಥಮಾಡಿಕೊಂಡಿದ್ದಾರೆ ಎಂದು ಹೇಳಿದರು. ‘ವಿಕಸಿತ ಭಾರತ’ದ ಕನಸು ಯಾವುದೇ ಒಬ್ಬ ವ್ಯಕ್ತಿ ಅಥವಾ ಪಕ್ಷಕ್ಕೆ ಸೇರಿದ್ದಲ್ಲ, ಬದಲಿಗೆ ಅದು ದೇಶದ ಪ್ರತಿಯೊಬ್ಬ ನಾಗರಿಕನ ಸಂಕಲ್ಪವಾಗಿದೆ. ನನಗೆ ಜನರೇ ಜನಾರ್ದನ” ಎಂದರು.
ರಾಷ್ಟ್ರ ಮಟ್ಟದಲ್ಲಿ ರಾಜಕೀಯ ಸ್ಥಿರತೆಯ ಪ್ರಾಮುಖ್ಯತೆಯನ್ನು ದೇಶದ ಜನತೆ ಚೆನ್ನಾಗಿ ಅರ್ಥಮಾಡಿಕೊಂಡಿದ್ದಾರೆ. ಅವರ ಪ್ರಬುದ್ಧತೆಯಿಂದಾಗಿಯೇ ನನಗೆ ಇಷ್ಟು ಸುದೀರ್ಘ ಕಾಲ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ