Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!
ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ ಯೋಜನೆ ಮಹತ್ವದ ಬದಲಾವಣೆ: ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ದೊಡ್ಡ ಮಟ್ಟದ ಸುಧಾರಣೆಗೆ ಮುಂದಾಗಿದೆ.

ಯೋಜನೆಯಲ್ಲಿ ಕಂಡುಬಂದಿರುವ ಗಂಭೀರ ಲೋಪದೋಷಗಳು ಹಾಗೂ ನಕಲಿ ಅರ್ಹತೆಗಳ ಹಾವಳಿಗೆ ಶಾಶ್ವತವಾಗಿ ಬ್ರೇಕ್ ಹಾಕಲು ಮುಂದಾಗಿರುವ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ.

ಯೋಜನೆಯ ದುರುಪಯೋಗವನ್ನು ಸಂಪೂರ್ಣವಾಗಿ ತಡೆಗಟ್ಟಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಹೊಸ ಮಾರ್ಗಸೂಚಿಯನ್ನು ಸಿದ್ಧಪಡಿಸಿದೆ. ಈ ಹೊಸ ನಿಯಮದ ಪ್ರಕಾರ, ಗೃಹಲಕ್ಷ್ಮಿ ಯೋಜನೆಯ ಮಾಸಿಕ ಹಣವನ್ನು ನಿರಂತರವಾಗಿ ಪಡೆಯಲು ಪ್ರತಿಯೊಬ್ಬ ಫಲಾನುಭವಿಯು ತಮ್ಮ ಹೆಬ್ಬೆಟ್ಟಿನ ಗುರುತು , ಕಣ್ಣುಗಳ ಸ್ಕ್ಯಾನಿಂಗ್  ಅಥವಾ ಮುಖದ ಗುರುತನ್ನು  ನೀಡಿ ತಮ್ಮ ಜೀವಂತಿಕೆ ಹಾಗೂ ಅರ್ಹತೆಯನ್ನು ಸಾಬೀತುಪಡಿಸಬೇಕಾಗುತ್ತದೆ.

ಈ ಸೇವೆ ಎಲ್ಲಿ ಲಭ್ಯ? ಬೇಕಾದ ದಾಖಲೆಗಳೇನು? : ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರ, ಗ್ರಾಮ ಒನ್ ಕೇಂದ್ರ, ಬಾಪೂಜಿ ಸೇವಾ ಕೇಂದ್ರ, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಈ ಸೇವೆ ಲಭ್ಯವಿದೆ. ಈ ಯೋಜನೆ ಲಾಭ ಪಡೆಯಲು ಪ್ರತಿಯೊಬ್ಬ ಮಹಿಳೆಯೂ ತಮ್ಮ ಆಧಾರ್ ಕಾರ್ಡ್ ಜೊತೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಈ ಹಿಂದೆ ನೀಡಿರುವ ಗೃಹಲಕ್ಷ್ಮಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಸಲ್ಲಿಸಬೇಕಾಗುತ್ತದೆ.

ಇದಲ್ಲದೆ ಫಲಾನುಭವಿಗಳು ಪರಿಶಿಷ್ಟ ಜಾತಿ (SC) ಅಥವಾ ಪರಿಶಿಷ್ಟ ಪಂಗಡದ (ST) ಸಮುದಾಯಕ್ಕೆ ಸೇರಿದವರಾಗಿದ್ದರೆ, ತಮ್ಮ ಅಧಿಕೃತ ಜಾತಿ ಪ್ರಮಾಣಪತ್ರದಲ್ಲಿ ನಮೂದಾಗಿರುವ ಆರ್ ಡಿ (RD) ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ. ಈ ಸಂಪೂರ್ಣ ಫಾರ್ಮ್ ಅನ್ನು ಯಶಸ್ವಿಯಾಗಿ ಭರ್ತಿ ಮಾಡಿ ಬಯೋಮೆಟ್ರಿಕ್ ಪ್ರಕ್ರಿಯೆ ಮುಗಿದ ನಂತರವೇ ಮುಂದಿನ ತಿಂಗಳ ಹಣ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗಲಿದೆ.

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

TAGGED:Important change in Grihalakshmi Yojana: Biometrics mandatorymoney cut if not renewed!
Share This Article
Facebook Twitter Copy Link Print
Previous Article Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ
Next Article ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

Popular Posts

ಗರ್ಲ್‌ಫ್ರೆಂಡ್‌ಗೆ 3 ಲಕ್ಷದ ಗಿಫ್ಟ್ ಕೊಟ್ಟ ಯುವಕ : ದುಬಾರಿ ಗಿಫ್ಟ್ ಕೈಗೆ ಸಿಗುತ್ತಿದ್ದಂತೆ ಬ್ರೇಕಪ್, ಅಷ್ಟಕ್ಕೂ ಅಲ್ಲಿ ಆಗಿದ್ದೇನು?

2 Min Read

ಎಐ ಎಡವಟ್ಟು: ಜೀವಂತವಾಗಿರುವ ನಟ ವಿಜಯ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ಗ್ರಾಕ್ ಎಐ!

1 Min Read

PM Modi ಈ ದಾಖಲೆ ನಿರ್ಮಿಸುತ್ತೇನೆಂದು ಕನಸಿನಲ್ಲೂ ಅಂದುಕೊಂಡಿರಲಿಲ್ಲ : ಎನ್​ಡಿಎ ಸಭೆಯಲ್ಲಿ ಭಾವುಕರಾದ ಪ್ರಧಾನಿ ಮೋದಿ

1 Min Read

ಚೆಕ್ ಬೌನ್ಸ್ ಕೇಸ್ ಆರೋಪಿಯನ್ನು 2 ವರ್ಷ ಜೈಲಿನಲ್ಲಿಡುವಂತಿಲ್ಲ : ಹೈಕೋರ್ಟ್ ಆದೇಶ

1 Min Read

You Might Also Like

ಕರ್ನಾಟಕಪ್ರಮುಖ

Rain Alert ಮುಂದಿನ ಒಂದು ವಾರ ಭಾರಿ ಮಳೆ : ಹಲವು ಜಿಲ್ಲೆಗಳಿಗೆ ಗಾಳಿಯ ಎಚ್ಚರಿಕೆ

1 Min Read
ದೇಶಪ್ರಮುಖ

ದೀದಿ ಕೋಟೆಯಲ್ಲಿ ಬಿರುಕು :ಕಾಂಗ್ರೆಸ್‌ ಜೊತೆ ಟಿಎಂಸಿ ವಿಲೀನ?ದೀದಿಗೆ ಉಪಾಧ್ಯಕ್ಷ ಪಟ್ಟ?

2 Min Read
ದೇಶಪ್ರಮುಖ

ಕೇರಳದಲ್ಲಿ ಶಿಗೆಲ್ಲ ವೈರಸ್ ಗೆ ಹೆಣ್ಣು ಮಗು ಬಲಿ

1 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 11-06-2026, ಗುರುವಾರ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?