newsics.com/ನ್ಯೂಸಿಕ್ಸ್
ಕಲಬುರಗಿ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತರಗತಿ ನಡೆಯುತ್ತಿದ್ದ ವೇಳೆಯಲ್ಲೇ ದಿಢೀರನೆ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಐದು ಜನ ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಯಥಾಪ್ರಕಾರ ಕಾಲೇಜಿನಲ್ಲಿ ಉಪನ್ಯಾಸಕರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿ, ವಿದ್ಯಾರ್ಥಿನಿಯರು ಅತ್ಯಂತ ಏಕಾಗ್ರತೆಯಿಂದ ಪಾಠ ಕೇಳುತ್ತಿದ್ದರು. ಈ ವೇಳೆ ಯಾವುದೇ ಮುನ್ಸೂಚನೆ ಇಲ್ಲದೆ ತರಗತಿಯ ಮೇಲ್ಚಾವಣಿಯ ಸಿಮೆಂಟ್ ಪ್ಲಾಸ್ಟಿಂಗ್ ಹಾಗೂ ಕಾಂಕ್ರೀಟ್ ಬ್ಲಾಕ್‌ಗಳು ವಿದ್ಯಾರ್ಥಿನಿಯರ ಮೇಲೆ ಬಿದ್ದಿವೆ. ಪರಿಣಾಮವಾಗಿ ಇಡೀ ಕೊಠಡಿಯಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಧೂಳಿನ ಮಯವಾಗಿದೆ.
ಸೃಷ್ಟಿ, ಸ್ನೇಹ, ಶೀತಲ್, ಪೂಜಾ ಹಾಗೂ ದಿವ್ಯ ಎಂಬ ಐವರು ವಿದ್ಯಾರ್ಥಿನಿಯರಿಗೆ ಗಂಭೀರವಾದ ಗಾಯಗಳಾಗಿವೆ.
ಸದ್ಯ ಗಾಯಾಳುಗಳಿಗೆ ತೀವ್ರ ನಿಗಾ ಘಟಕದಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಕಾಲೇಜಿನತ್ತ ಧಾವಿಸಿದ ಪೋಷಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಣ ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಟ್ಟಡವು ಪತಿಲಾವಸ್ಥೆಯಲ್ಲಿದ್ದರೂ ಯಾವುದೇ ದುರಸ್ತಿ ಕಾರ್ಯ ಕೈಗೊಳ್ಳದೆ, ವಿದ್ಯಾರ್ಥಿಗಳ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆಡಳಿತ ಮಂಡಳಿಯ ಬೇಜವಾಬ್ದಾರಿತನವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ