Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ
ಕರ್ನಾಟಕಪ್ರಮುಖ

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ, ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳ ಶುಲ್ಕವನ್ನ ಹೆಚ್ಚಳ ಮಾಡದೇ ಯಥಾಸ್ಥಿತಿಯಲ್ಲೇ ಮುಂದುವರೆಸುವ ಮಹತ್ವ ತೀರ್ಮಾನವನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಅವರ ಅಧ್ಯಕ್ಷತೆಯಲ್ಲಿ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿಯವರೊಂದಿಗೆ ಶುಕ್ರವಾರ ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲರು, ಖಾಸಗಿ ಕಾಲೇಜು ಆಡಳಿತ ಮಂಡಳಿಗಳ ಶುಲ್ಕವನ್ನು ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆಯನ್ನು ನಾವು ಒಪ್ಪಿಕೊಂಡಿಲ್ಲ. ಈ ಹಿಂದೆ ಅಂದರೆ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿದ್ದ ಶುಲ್ಕವು ಯಥಾಸ್ಥಿತಿಯಲ್ಲೇ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.

ಪೋಷಕರು ಮತ್ತು ವಿದ್ಯಾರ್ಥಿಗಳು ಶುಲ್ಕ ಹೆಚ್ಚಳವಾಗುತ್ತದೆ ಎಂಬ ಆತಂಕಕ್ಕೆ ಒಳಗಾಗಬಾರದು. ಈಗಾಗಲೇ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗೆ ನಡೆದಿದ್ದ ನೀಟ್‌ ಪ್ರವೇಶ ಪರೀಕ್ಷೆ ರದ್ದಾಗಿ ಮರುಪರೀಕ್ಷೆ ನಡೆಯಬೇಕಿರುವುದರಿಂದ ಒತ್ತಡಕ್ಕೆ ಒಳಗಾಗಿದ್ದಾರೆ. ಇಂತಹ ಸಮಯದಲ್ಲಿ ಶುಲ್ಕ ಹೆಚ್ಚಳ ಮಾಡುವುದು ಸರಿಯಲ್ಲ ಎಂಬ ತೀರ್ಮಾನ ಮಾಡಲಾಗಿದೆ.

ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜು ಮಂಡಳಿಯವರು ಶುಲ್ಕ ಹೆಚ್ಚಳ ಮಾಡುವ ಪ್ರಸ್ತಾವನೆಗೆ ನಾವು ಅವಕಾಶವನ್ನೇ ಕೊಟ್ಟಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ರೀತಿಯ ಊಹಾಪೋಹಕ್ಕೆ ಕಿವಿಗೊಡಬಾರದು ಎಂದು ಸಚಿವ ಶರಣಪ್ರಕಾಶ್‌ ಪಾಟೀಲ್‌ ಮನವಿ ಮಾಡಿದರು.

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

TAGGED:No increase in fees for medical courses: Government takes important decision
Share This Article
Facebook Twitter Copy Link Print
Previous Article NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ
Next Article ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

Popular Posts

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read

ಉಸಿರಾಟದ ಸಮಸ್ಯೆಗೆ ಮೀನು ಪ್ರಸಾದ ಪಡೆಯಲು ಬಂದ 2.7 ಲಕ್ಷ ಜನ!

2 Min Read

ಕೊಲ್ಲೂರು ಮೂಕಾಂಬಿಕಾ ದರ್ಶನಕ್ಕೆ ಬಂದ ತಮಿಳುನಾಡು CM ದಳಪತಿ ವಿಜಯ್ ನೋಡಲು ಜನಸಾಗರ!

1 Min Read

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ

1 Min Read

You Might Also Like

ಕರ್ನಾಟಕದೇಶಪ್ರಮುಖ

NEET UG Re Exam ಜೂನ್ 21 ನೀಟ್ ಯುಜಿ ಮರು ಪರೀಕ್ಷೆ, ವಿದ್ಯಾರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯ

1 Min Read
ಕರ್ನಾಟಕಪ್ರಮುಖ

ಸರ್ಕಾರಿ ಕಾಲೇಜಿನ ಮೇಲ್ಚಾವಣಿ ಕುಸಿದು ಐವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಕಡ್ಡಾಯ ಗ್ರಾಮೀಣ ಸೇವೆಗೆ ಹಾಜರಾಗದ 450ಕ್ಕೂ ಹೆಚ್ಚು ಎಂಬಿಬಿಎಸ್ ವೈದ್ಯರಿಗೆ 15 ಲಕ್ಷ ರೂ. ದಂಡ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?