Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ಯುವತಿಯರು ರಸ್ತೆಗಿಳಿದು ಗದ್ದಲ ಮಾಡಿದ ಘಟನೆ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವನಗರದಲ್ಲಿರುವ ಅಂಜನಾದ್ರಿ ಲೇಡಿಸ್ ಪಿಜಿಯಲ್ಲಿ ನಡೆದಿದೆ.

ಕೆಲ ದಿನಗಳ ಹಿಂದೆ ಪಿಜಿಯಲ್ಲಿ ನೀಡಿದ್ದ ಅನ್ನದಲ್ಲಿ ಹುಳ ಪತ್ತೆಯಾಗಿತ್ತು ಎಂದು ಯುವತಿಯರು ಆರೋಪಿಸಿದ್ದಾರೆ. ಈ ಬಗ್ಗೆ ಪಿಜಿಯವರಿಗೆ ತಿಳಿಸಿದರೆ ನಿರ್ಲಕ್ಷ್ಯ, ‘ಕೊಟ್ಟಿದ್ದು ತಿನ್ನಿ ಇಲ್ಲದಿದ್ರೆ ಜಾಗ ಖಾಲಿ ಮಾಡಿ’ ಎಂಬ ದರ್ಪ. ಕೊಡುವ ಊಟ ಸ್ವಚ್ಛವಾಗಿರಲಿ ಎಂದು ಪದೇಪದೆ ಹೇಳಿದ್ರೂ ಯಾವುದೇ ಬದಲಾವಣೆ ಕಾಣಿಸಿರಲಿಲ್ಲ. ಇದರಿಂದ ರೊಚ್ಚಿಗೆದ್ದ ಪಿಜಿಯಲ್ಲಿದ್ದ ಯುವತಿಯರು ನ್ಯಾಯಕ್ಕಾಗಿ ರಸ್ತೆಗಿಳಿದು ಪಿಜಿ ಮಾಲೀಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

ಪಿಜಿಯಲ್ಲಿ ಕೊಡುವ ಆಹಾರ ಕಳಪೆ ಗುಣಮಟ್ಟದ್ದು ಅಲ್ಲದೇ ಪದೇಪದೆ ಅನ್ನದಲ್ಲಿ ಹುಳು ಕಸ ಕಡ್ಡಿ ಬರುತ್ತಿರುವುದರ ಬಗ್ಗೆ ಪ್ರಶ್ನಿಸಿದ್ದ ಯುವತಿಯರು. ಅಷ್ಟಕ್ಕೆ ಮಾಲೀಕರು ಯುವತಿಯರಿಗೆ ಪಿಜಿ ಖಾಲಿ ಮಾಡುವಂತೆ ಸೂಚನೆ ನೀಡಿದ್ದರು ಎಂದು ಯುವತಿಯರು ಆರೋಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವತಿಯರು ಮಧ್ಯರಾತ್ರಿಯೇ ಪಿಜಿಯಿಂದ ಹೊರಬಂದು ಪ್ರತಿಭಟನೆ ನಡೆಸಿದ್ದಾರೆ.

ಪಿಜಿಯನ್ನು ನೋಡಿಕೊಳ್ಳುತ್ತಿರುವ ಮಹಿಳೆಯ ಮಗ ಅನುಮತಿ ಇಲ್ಲದೆ ಪಿಜಿಗೆ ಪ್ರವೇಶಿಸುತ್ತಿದ್ದಾನೆ ಎಂದು ಯುವತಿಯರು ಗಂಭೀರ ಆರೋಪ ಮಾಡಿದ್ದಾರೆ. ರಾತ್ರಿ ಹೊತ್ತು ಬರ್ತಾನೆ. ಆತನೇ ಟೆರಸ್‌ನ ಲೈಟ್‌ಗಳನ್ನು ಆಫ್ ಮಾಡೋದು ಇಷ್ಟು ಮಾತ್ರವಲ್ಲದೆ, ಕೆಲವೊಮ್ಮೆ ಅನುಮತಿ ಇಲ್ಲದೇ ಕೊಠಡಿ ಪ್ರವೇಶ ಮಾಡುತ್ತಿದ್ದ ಎಂದು ಯುವತಿಯರು ದೂರಿದ್ದಾರೆ. ಇದು ಲೇಡೀಸ್ ಪಿಜಿ, ಒಳಗಡೆ ಪ್ರವೇಶಕ್ಕೆ ಅನುಮತಿ ಇಲ್ಲ, ಈ ರೀತಿ ಬರೋದು ಎಷ್ಟು ಸರಿ ಎಂದು ಯುವತಿಯರು ಪ್ರಶ್ನಿಸಿದ್ದಕ್ಕೆ ಮಾಲೀಕಳ ಮಗ ಯುವತಿಯರಿಗೆ ಅವಾಚ್ಯವಾಗಿ ನಿಂದಿಸಿದ್ದ ಎಂದು ಆರೋಪಿಸಿರುವ ಯುವತಿಯರು, ಈ ಪಿಜಿಯಲ್ಲಿ ಕೊಡುವ ಆಹಾರ ಸ್ವಚ್ಛವಾಗಿಲ್ಲ, ಮಾಲೀಕಳ ಮಗನಿಂದ ನಮಗೆ ಸುರಕ್ಷತೆ ಇಲ್ಲದಂತಾಗಿದೆ ನ್ಯಾಯ ಬೇಕು ಎಂದು ಆಗ್ರಹಿಸಿದ್ದಾರೆ.

ಈ ಘಟನೆ ಬಗ್ಗೆ ಮಾಹಿತಿ ತಿಳಿದ ಕಟ್ಟಡದ ಮಾಲೀಕರು ಸ್ಥಳಕ್ಕೆ ಬಂದು ಏನಾಗಿದೆ ಎಂಬ ವಿಚಾರ ತಿಳಿದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಈ ವೇಳೆ ಪಿಜಿ ನೋಡಿಕೊಳ್ಳುತ್ತಿರುವ ತಾಯಿ ಮಗನ ವಿರುದ್ಧ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳಕ್ಕೆ ಬಸವೇಶ್ವರನಗರ ಪೊಲೀಸರು ದೌಡಾಯಿಸಿ ಎರಡು ಕಡೆಯವರಿಂದ ಸಮಸ್ಯೆ ಆಲಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ.

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

TAGGED:alleging that the food and accommodation arrangements were inadequate.Young women took to the streets overnight to protest against PG owners
Share This Article
Facebook Twitter Copy Link Print
Previous Article ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ
Next Article Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

Popular Posts

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Ceremony bigins ಜೂನ್ 19ರಿಂದ ಶುಭ ಸಮಾರಂಭ ಆರಂಭ: ಸಿಗಲಿವೆ ಉತ್ತಮ ಮುಹೂರ್ತ

1 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಇನ್ಮುಂದೆ ಈ ಮಹಿಳೆಯರಿಗೆ ಸಿಗಲ್ಲ ಗೃಹಲಕ್ಷ್ಮಿ! ಯಾರ‌್ಯಾರಿಗೆ ಹಣ ಸಿಗೋದಿಲ್ಲ?

1 Min Read
ಕರ್ನಾಟಕಪ್ರಮುಖ

ಜಮೀರ್‌ ಅಹ್ಮದ್ ವಿರುದ್ಧ ಸಿಟ್ಟಾದ ಸಿದ್ದರಾಮಯ್ಯ : ಜಮೀರ್‌ ಬೆಂಬಲಿಗರಿಗೆ ಹೇಳಿದ್ದೇನು?:

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಭಾರೀ ಮಳೆ; 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

1 Min Read
ದೇಶಪ್ರಮುಖ

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ: ಮೂವರು ಸಜೀವ ದಹನ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?