Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

Share
3 Min Read
SHARE

newsics.com /ನ್ಯೂಸಿಕ್ಸ್

ಬೆಂಗಳೂರು: ರಾಜ್ಯ ಸರಕಾರದ ಪಂಚ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಫಲಾನುಭವಿ ಮನೆಯ ಯಜಮಾನಿ(ಮಹಿಳೆ) ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದ ಮೂರನೇ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಓಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಲ್ಲಿ ಕೆಲವರು ನಿಧನರಾಗಿದ್ದು, ಅವರ ಹೆಸರಲ್ಲಿ ಬೇರೆಯವರು 100 ಕೋಟಿ ರೂಪಾಯಿಗೂ ಹೆಚ್ಚು ಹಣ ಪಡೆದಿರುವುದು ಸರಕಾರದ ಗಮನಕ್ಕೆ ಬಂದಿದೆ. ಹೀಗಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದೆಯೇ ಅಥವಾ ಇಲ್ಲವೇ ಎಂದು ಪರಿಷ್ಕರಣೆ ಮಾಡಲು ರಾಜ್ಯ ಸರಕಾರ ಮುಂದಾಗಿದೆ. ಹೀಗಾಗಿ ಎಲ್ಲ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ನಾವು ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಾರನ್ನೂ ತೆಗೆದುಹಾಕುವ ಉದ್ದೇಶವೂ ರಾಜ್ಯ ಸರಕಾರಕ್ಕಿಲ್ಲ. ಸರಿಯಾದ ಮಾಹಿತಿ ನೀಡುವ ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಬೇಕು ಎಂಬುದು ಸರಕಾರದ ಉದ್ದೇಶ. ಹೀಗಾಗಿ, ಗೃಹಲಕ್ಷ್ಮೀ ಯೋಜನೆಯ ಎಲ್ಲ ಫಲಾನುಭವಿಗಳು ಮತ್ತೆ ಅರ್ಜಿ ಹಾಕಬೇಕಿದೆ ಎಂದು ತಿಳಿಸಿದರು.

ಪ್ರಮುಖವಾಗಿ ಗೃಹಲಕ್ಷ್ಮೀ ಯೋಜನೆ ಲಾಭ ಪಡೆಯುತ್ತಿರುವವರು ಮನೆಯ ನಿಜವಾದ ಯಜಮಾನಿಯೇ ಎಂದು ತಿಳಿದುಕೊಳ್ಳಬೇಕಲ್ಲವೇ? ಒಂದು ಮನೆಗೆ ಒಬ್ಬರು ಮನೆ ಯಜಮಾನಿಯರನ್ನು ಆಯ್ಕೆ ಮಾಡಿಕೊಳ್ಳಬೇಕು. ಒಂದೇ ಮನೆಯಲ್ಲಿ ಇಬ್ಬರು ಮೂವರು ಯಜಮಾನಿಯರಿದ್ದರು ಅದನ್ನು ಪರಿಶೀಲನೆ ಮಾಡುತ್ತೇವೆ. ಜತೆಗೆ, ಮುಂದೆ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳಿಗೆ ನಾವು ಗುರುತಿನ ಚೀಟಿ ನೀಡುತ್ತೇವೆ ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯೂ ಪರಿಶೀಲನೆಗೆ:

‘ಗೃಹಜ್ಯೋತಿ ಯೋಜನೆ’ ಅಡಿಯಲ್ಲಿನ ಫಲಾನುಭವಿಗಳ ಸಂಬಂಧ ಗೊಂದಲವಿದ್ದು, ಒಬ್ಬರ ಹೆಸರಿನಲ್ಲಿ ಐದಾರು ವಿದ್ಯುತ್ ಮೀಟರ್‌ಗಳಿವೆ. ಆ ಮನೆಯಲ್ಲಿ ಅವರೇ ವಾಸವಿದ್ದಾರಾ? ಅಥವಾ ಬೇರೆಯವರು ಇದ್ದಾರೆಯೇ? ಎಂಬುದು ಗೊತ್ತಾಗುತ್ತಿಲ್ಲ. ಈ ಯೋಜನೆ ನಮ್ಮ ರಾಜ್ಯದವರಿಗೆ ಸಿಗುತ್ತಿದೆಯೇ ಅಥವಾ ಬೇರೆ ರಾಜ್ಯದವರಿಗೆ ಸಿಗುತ್ತಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕಿದೆ ಎಂದು ಅವರು ವಿವರಿಸಿದರು.

ನಿಧಿ ಬಳಕೆಗೆ ನೀತಿ ರಚನೆ: ನಾವು ನೂತನ ‘ಸಿಎಸ್‍ಆರ್’ ನೀತಿ ಜಾರಿಗೆ ಮುಂದಾಗಿದ್ದು, ಕಂಪೆನಿಗಳು ತಮ್ಮ ವಾರ್ಷಿಕ ಆದಾಯದ ಶೇ.2ರಷ್ಟು ಹಣವನ್ನು ಸಿಎಸ್‍ಆರ್ ಉದ್ದೇಶಕ್ಕೆ ಬಳಸಿಕೊಳ್ಳಬೇಕು ಎಂಬ ನಿರ್ದೇಶನವಿದೆ. ಈ ನಿಧಿಯನ್ನು ಗ್ರಾಮೀಣ ಭಾಗದ ಶಾಲೆಗಳ ನಿರ್ಮಾಣಕ್ಕೆ ಬಳಸಲು ತೀರ್ಮಾನಿಸಲಾಗಿದೆ.

ಹಳ್ಳಿಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಮೂಲಸೌಕರ್ಯ ಒದಗಿಸಲು ತೀರ್ಮಾನಿಸಲಾಗಿದೆ. ಖಾಸಗಿ ಶಾಲೆಗಳು ಈ ಗ್ರಾಮೀಣ ಭಾಗದ ಶಾಲೆಗಳನ್ನು ದತ್ತು ತೆಗೆದುಕೊಳ್ಳಬೇಕು. ಸರಕಾರಿ ಶಾಲೆಗಳಲ್ಲಿ ನಗರ ಪ್ರದೇಶದಲ್ಲಿ ಸಿಗುವ ಶಿಕ್ಷಣ, ಸಿಗುವಂತೆ ಮಾಡಬೇಕು ಎಂದು ಶಿವಕುಮಾರ್ ಮಾಹಿತಿ ನೀಡಿದರು.

ಉದ್ಯೋಗ:

ದೇಶದಲ್ಲೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಖಾಸಗಿ ಉದ್ಯೋಗ ವಿನಿಮಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಖಾಸಗಿ ವಲಯದಲ್ಲಿ ಉದ್ಯೋಗ ಬಯಸುವವರು ಇಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಉದ್ಯೋಗಿಗಳು ಅಗತ್ಯವಿರುವ ಕಂಪೆನಿಗಳು ತಮಗೆ ಬೇಕಾಗಿರುವ ಉದ್ಯೋಗಿಗಳ ಅರ್ಹತೆ ಮತ್ತು ಸಂಖ್ಯೆಯ ಮಾಹಿತಿ ನೀಡುತ್ತಾರೆ. ಇಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮಾಡಲಾಗುವುದು. ಕಂಪೆನಿಗಳಿಗೆ ಶೇ.100ರಷ್ಟು ಸ್ಥಳೀಯರನ್ನೆ ತೆಗೆದುಕೊಳ್ಳಿ ಎಂದು ಹೇಳಲು ಆಗುವುದಿಲ್ಲ. ಇದಕ್ಕಾಗಿ ನಿರ್ದಿಷ್ಟ ಪ್ರಮಾಣ ನಿಗದಿ ಮಾಡಲಾಗುವುದು. ಸ್ಥಳೀಯ ಯುವಕರಿಗೆ ಉದ್ಯೋಗ ಕಲ್ಪಿಸಲು ಸೇತುವೆ ನಿರ್ಮಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ನನ್ನ ಕನಸಿನ ಕಾರ್ಯಕ್ರಮ ‘ಭಾರತ ಜೋಡೋ ಯುವಕರ ಸಂಘ’ ನಿರ್ಮಿಸಲು ಮುಂದಾಗಿದ್ದೇವೆ. ರಾಜ್ಯದಲ್ಲಿ 6 ಸಾವಿರ ಗ್ರಾಮ ಪಂಚಾಯಿತಿಗಳಿದ್ದು, 4 ಸಾವಿರ ನಗರ ಪ್ರದೇಶದ ವಾರ್ಡ್‍ಗಳಿವೆ. ಈ ಭಾಗದಲ್ಲಿ ಯುವಕರ ಸೌಹಾರ್ದತೆಗೆ ಹಾಗೂ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ.

ಇದು ರಾಜಕೀಯೇತ್ತರ ಸಂಘಗಳಾಗಿದ್ದು, 16 ವರ್ಷಗಳಿಂದ 35 ಅಥವಾ 40 ವರ್ಷಗಳ ವರೆಗಿನವರು ಈ ಸಂಘಗಳ ಸದಸ್ಯರಾಗಬಹುದು. ವಯೋಮಿತಿಯನ್ನು ಶೀಘ್ರವೇ ತೀರ್ಮಾನಿಸಲಾಗುವುದು. ಕ್ರೀಡೆ, ಸಾಂಸ್ಕೃತಿಕ, ನಾಯಕತ್ವ ಪ್ರತಿಭೆ ಹೆಚ್ಚಿಸಲು ಅವಕಾಶ ಕಲ್ಪಿಸಲಾಗುವುದು. ರಾಜಕೀಯ ಹಸ್ತಕ್ಷೇಪವಿಲ್ಲದೇ ಸಂಘಗಳ ರಚನೆಗೆ ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಅವರು ಪ್ರಕಟಿಸಿದರು.

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

 

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

TAGGED:It is mandatory for everyone to re-apply for the Grihalakshmi scheme: CM DK
Share This Article
Facebook Twitter Copy Link Print
Previous Article ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು
Next Article Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?