newsics.com/ನ್ಯೂಸಿಕ್ಸ್
ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಹಾಗೂ ಗಂಟೆಗೆ 30-40 ಕಿ.ಮಿ ವೇಗದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು, ಮಿಂಚು ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಬಾಗಲಕೋಟೆ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಈ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.
ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ