Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

Share
2 Min Read
SHARE

newsics.com / ನ್ಯೂಸಿಕ್ಸ್

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.

ಶನಿವಾರ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋಕ್ ಜೈನ್ (6) ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾನೆ.

ಕಳೆದ ಶನಿವಾರ ಮಧ್ಯಾಹ್ನ ವಿದ್ಯಾರ್ಥಿ ತ್ರಿಲೋಕ್ ಜೈನ್, ಶಾಲೆ ಮುಗಿಯುವ ಸಮಯದಲ್ಲಿ ಆವರಣದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದನು. ತಕ್ಷಣವೇ ಶಾಲೆ ಶಿಕ್ಷಕರು ಪುಟ್ಟ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಆದ್ರೆ ದುರಾದೃಷ್ಟವಶಾತ್​​ ತ್ರಿಲೋಕ್ ಜೈನ್​ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಪುತ್ರನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಒಂದನೇ ತರಗತಿಯ ಬಾಲಕನ ಸಾವಿಗೆ ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮುಖ್ಯ ಶಿಕ್ಷಕರು ಕಂಬನಿ ಮಿಡಿದಿದ್ದಾರೆ.

ಇಡೀ ಘಟನೆ ಕ್ಷಣಾರ್ಧದಲ್ಲಿ ನಡೆದಿದ್ದು, ಕುಟುಂಬದವರಿಗೆ ಇದೊಂದು ನಂಬಲಾರದ ದುರಂತವಾಗಿದೆ. ಶುಕ್ರವಾರ ಆಟವಾಡುತ್ತಿದ್ದ ಬಾಲಕ, ರಾತ್ರಿ ಆರೋಗ್ಯವಾಗಿಯೇ ಮಲಗಿ, ಬೆಳಗ್ಗೆ ಎದ್ದು ಶಾಲೆಗೆ ಹೋಗಿರುವಾಗ ಅಂತ್ಯ ಕಂಡಿರುವುದು ಆಘಾತ ಮೂಡಿಸಿದೆ.

ತ್ರಿಲೋಕ್​ಗೆ ಮೊದಲಿನಿಂದಲೂ ಯಾವುದೇ ಹೃದಯ ಸಂಬಂಧಿತ ಸಮಸ್ಯೆಗಳಿರಲಿಲ್ಲ ಎಂಬ ಮಾಹಿತಿ ಹೊರಬಿದ್ದಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಇಂತಹ ಘಟನೆಗಳು ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿಯ ಅಗತ್ಯವಿದೆ ಎಂಬ ಚರ್ಚೆಗೂ ಕಾರಣವಾಗಿವೆ.

=====================

ಏನಿದು ಹೃದಯಾಘಾತ?

ಹೃದಯಕ್ಕೆ ರಕ್ತ ಸಂಚಲನ ಹಠಾತ್ ಆಗಿ ಬ್ಲಾಕ್ ಆಗುತ್ತದೆ. ಇದರ ಪ್ರತಿಫಲವಾಗಿ ಹೃದಯ ಸ್ತಂಭನ ಉಂಟಾಗಿ ಬಳಿಕ ಹೃದಯದಿಂದ ದೇಹಕ್ಕೆ ರಕ್ತ ಸಂಚಾರ ನಿಂತು ಹೋಗುತ್ತದೆ. ಇದನ್ನು ಹೃದಯಾಘಾತ ಎನ್ನುತ್ತಾರೆ.

ಹೃದಯಾಘಾತ ಅಥವಾ ಹೃದಯ ವೈಫಲ್ಯಕ್ಕೆ ಮುಂಚಿನ ಕೆಲವು ಪ್ರಮುಖ ಲಕ್ಷಣಗಳನ್ನು ವಿವರಿಸಿದ್ದಾರೆ.

ಉಸಿರಾಟದ ತೊಂದರೆ: ನಡೆಯುವಾಗ, ಮೆಟ್ಟಿಲು ಹತ್ತುವಾಗ ಅಥವಾ ಮಲಗಿರುವಾಗಲೂ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಳ್ಳುತ್ತದೆ. ಇದು ಹೃದಯದ ಕಾರ್ಯಕ್ಷಮತೆ ಕಡಿಮೆಯಾದ ಸಂಕೇತವಾಗಿದೆ.

ನಿರಂತರ ಆಯಾಸ ಮತ್ತು ದೌರ್ಬಲ್ಯ: ಹೃದಯವು ಸಾಕಷ್ಟು ಆಮ್ಲಜನಕ ಮತ್ತು ಪೋಷಕಾಂಶಗಳನ್ನು ದೇಹಕ್ಕೆ ಒದಗಿಸಲಾಗದಿದ್ದಾಗ, ಸ್ನಾಯುಗಳಿಗೆ ಶಕ್ತಿಯ ಕೊರತೆ ಉಂಟಾಗುತ್ತದೆ, ಇದರಿಂದ ದಿನವಿಡೀ ದಣಿವು ಅನುಭವವಾಗುತ್ತದೆ.

ಕಾಲು, ಕಣಕಾಲು ಮತ್ತು ಹೊಟ್ಟೆಯಲ್ಲಿ ಊತ: ಹೃದಯದ ಕಾರ್ಯಕ್ಷಮತೆ ಕಡಿಮೆಯಾದಾಗ, ದೇಹದಲ್ಲಿ ದ್ರವ ಸಂಗ್ರಹವಾಗಿ, ಕಾಲುಗಳು, ಕಣಕಾಲುಗಳು ಅಥವಾ ಹೊಟ್ಟೆಯಲ್ಲಿ ಊತ ಕಾಣಿಸಿಕೊಳ್ಳುತ್ತದೆ.

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

TAGGED:A first-grade boy died of a heart attack at school!
Share This Article
Facebook Twitter Copy Link Print
Previous Article ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?
Next Article Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

Popular Posts

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?