Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

Share
2 Min Read
SHARE

newsics.com / ನ್ಯೂಸಿಕ್ಸ್

ಕಿರುತೆರೆ ಮತ್ತು ಬೆಳ್ಳಿಪರದೆಯ ಉದಯೋನ್ಮುಖ ನಟಿ ಸಂಚಿತಾ ಉಗಾಲೆ (30) ಅವರು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

ಕೇವಲ 30 ವರ್ಷದ ಪ್ರಾಯದಲ್ಲೇ ಸಂಚಿತಾ ಅವರು ಕೆಟ್ಟ ನಿರ್ಧಾರ ಕೈಗೊಂಡು ಇಹಲೋಕ ತ್ಯಜಿಸಿದ್ದು, ಅವರ ಕುಟುಂಬಸ್ಥರು, ಆಪ್ತ ಸ್ನೇಹಿತರು ಹಾಗೂ ಅಪಾರ ಅಭಿಮಾನಿ ಬಳಗವನ್ನು ತೀವ್ರ ಶೋಕ ಸಾಗರದಲ್ಲಿ ಮುಳುಗಿಸಿದೆ.

ಇಡೀ ಕಿರುತೆರೆ ಮತ್ತು ಚಲನಚಿತ್ರ ರಂಗ ಈ ಆಘಾತಕಾರಿ ಸುದ್ದಿಯಿಂದ ಸ್ತಬ್ಧಗೊಂಡಿದ್ದು, ಅವರ ಸಾವಿಗೆ ನಿಖರವಾದ ಕಾರಣವೇನೆಂಬ ವಿವರಗಳು ಇನ್ನಷ್ಟೇ ಹೊರಬರಬೇಕಿದೆ.

ಸಂಚಿತಾ ಉಗಾಲೆ ಅವರು ಮನರಂಜನಾ ಲೋಕದ ಹಲವು ಜನಪ್ರಿಯ ಸೀರಿಯಲ್‌ಗಳ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗಿದ್ದರು. ಪ್ರಸಿದ್ಧ ದೈನಂದಿನ ಧಾರಾವಾಹಿಗಳಾದ ‘ಕುಂಕುಮ್ ಭಾಗ್ಯ’ (Kumkum Bhagya) ಮತ್ತು ‘ವಾಗ್ಲೆ ಕಿ ದುನಿಯಾ’ (Wagle Ki Duniya) ಸೀರಿಯಲ್‌ಗಳಲ್ಲಿ ಅದ್ಭುತವಾಗಿ ನಟಿಸಿ ಸೈ ಎನಿಸಿಕೊಂಡಿದ್ದರು. ಕಿರುತೆರೆಯಷ್ಟೇ ಅಲ್ಲದೆ ಬೆಳ್ಳಿಪರದೆಯಲ್ಲೂ ಗುರುತಿಸಿಕೊಂಡಿದ್ದ ಇವರು, ‘ದಿಲ್‌ವಾಲಿ ದುಲ್ಹಾ ಲೇ ಜಾಯೇಗಿ’ (Dilwali Dulha Le Jayegi) ಸಿರೀಸ್‌ನಲ್ಲಿ ‘ಸುಕೂನ್’ ಎಂಬ ನೆನಪಿನಲ್ಲಿ ಉಳಿಯುವ ಪಾತ್ರ ಮಾಡಿದ್ದರು. ಅಷ್ಟೇ ಅಲ್ಲದೆ, ವಿಕ್ಕಿ ಕೌಶಲ್ ನಟನೆಯ ಮುಂಬರುವ ಐತಿಹಾಸಿಕ ಸಿನಿಮಾ ‘ಛಾವಾ’ (Chhaava) ದಲ್ಲಿ ‘ತಾರಾಬಾಯಿ’ ಪಾತ್ರಕ್ಕೂ ಇವರೇ ಜೀವ ತುಂಬಿದ್ದರು.

ಸಂಚಿತಾ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ಸಮಯದ ಮುನ್ನ ಸೋಶಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗಿದ್ದರು. ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಅವರು ಪೆಪ್ಪಿ ಸಾಂಗ್ ಒಂದರ ಜಬರ್ದಸ್ತ್ ಬೀಟ್‌ಗೆ ಸಂತೋಷದಿಂದ ಹೆಜ್ಜೆ ಹಾಕುತ್ತಾ ನಗುತ್ತಿರುವ ರೀಲ್ಸ್ (Reel) ಒಂದನ್ನು ಹಂಚಿಕೊಂಡಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ನಟಿಯ ಮುಖದ ಹಿಂದೆ ಇಷ್ಟೊಂದು ದೊಡ್ಡ ನೋವಿತ್ತೇ ಎಂದು ಅವರ ಕೊನೆಯ ವೀಡಿಯೋ ನೋಡಿ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.

ಸಂಚಿತಾ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ಸಮಯದ ಮುನ್ನ ಸೋಶಿಯಲ್‌ ಮೀಡಿಯಾದಲ್ಲಿ ಸಕ್ರಿಯರಾಗಿದ್ದರು. ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಅವರು ಪೆಪ್ಪಿ ಸಾಂಗ್ ಒಂದರ ಜಬರ್ದಸ್ತ್ ಬೀಟ್‌ಗೆ ಸಂತೋಷದಿಂದ ಹೆಜ್ಜೆ ಹಾಕುತ್ತಾ ನಗುತ್ತಿರುವ ರೀಲ್ಸ್ (Reel) ಒಂದನ್ನು ಹಂಚಿಕೊಂಡಿದ್ದರು. ಸದಾ ಲವಲವಿಕೆಯಿಂದ ಇರುತ್ತಿದ್ದ ನಟಿಯ ಮುಖದ ಹಿಂದೆ ಇಷ್ಟೊಂದು ದೊಡ್ಡ ನೋವಿತ್ತೇ ಎಂದು ಅವರ ಕೊನೆಯ ವೀಡಿಯೋ ನೋಡಿ ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.

ಕಳೆದ 2025 ರ ಮಧ್ಯಭಾಗದಲ್ಲಿ ಆನ್‌ಲೈನ್ ಇನ್‌ಫ್ಲುಯೆನ್ಸರ್ ಮಿಶಾ ಅಗರ್ವಾಲ್ ಅವರ ಆ*ತ್ಮಹ*ತ್ಯೆಯ ಸಂದರ್ಭದಲ್ಲಿ ಸಂಚಿತಾ ಅವರು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದರು. ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಸಂಖ್ಯೆ ಕಡಿಮೆಯಾಗಿ ವೃತ್ತಿಜೀವನ ಹಾಳಾಗಬಹುದು ಎಂಬ ಭೀತಿಯಿಂದ ಮಿಶಾ ಆ*ತ್ಮಹ*ತ್ಯೆ ಮಾಡಿಕೊಂಡಾಗ ಸಂಚಿತಾ ತೀವ್ರವಾಗಿ ನೊಂದಿದ್ದರು. ಈ ಘಟನೆಯನ್ನು ಹೃದಯವಿದ್ರಾವಕ ಎಂದು ಕರೆದಿದ್ದ ಸಂಚಿತಾ, “ಇಂದಿನ ಯುವ ಪೀಳಿಗೆ ಕೇವಲ ವರ್ಚುವಲ್ ಲೈಕ್ಸ್ ಮತ್ತು ಅಪ್ರೂವಲ್‌ಗಳಿಗಾಗಿ ತಮ್ಮ ಅಮೂಲ್ಯವಾದ ಜೀವವನ್ನು ಎಷ್ಟು ಸುಲಭವಾಗಿ ಕಳೆದುಕೊಳ್ಳುತ್ತಿದ್ದಾರೆ ಎಂಬುದನ್ನು ನೋಡಿದರೆ ನನ್ನ ಹೃದಯ ಒಡೆಯುತ್ತದೆ” ಎಂದು ಕಳವಳ ವ್ಯಕ್ತಪಡಿಸಿದ್ದರು.

ಸಂಚಿತಾ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅವರ ಹಳೆಯ ನಟನೆಯ ವೀಡಿಯೋಗಳನ್ನು ಹಂಚಿಕೊಂಡು ಸಂತಾಪ ಸೂಚಿಸಲಾಗುತ್ತಿದೆ. “ಸಂಚಿತಾ ಉಗಾಲೆ ಅವರೇ, ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ. ತುಂಬಾ ಬೇಗ ನಮ್ಮನ್ನು ಅಗಲಿ ಹೋಗಿದ್ದೀರಿ. ‘ದಿಲ್‌ವಾಲಿ ದುಲ್ಹಾ ಲೇ ಜಾಯೇಗಿ’ ಚಿತ್ರದಲ್ಲಿನ ನಿಮ್ಮ ನಟನೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಓಂ ಶಾಂತಿ” ಎಂದು ನೆಟ್ಟಿಗರು ಕಂಬನಿ ಮಿಡಿಯುತ್ತಿದ್ದಾರೆ. ಕಿರುತೆರೆಯ ಹಲವು ಹಿರಿಯ ನಟ-ನಟಿಯರು ಸಂಚಿತಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

TAGGED:Actress Sanchita Ugale lost her life while resisting suicide!
Share This Article
Facebook Twitter Copy Link Print
Previous Article Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?