Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

Share
3 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಮೇಜರ್ ಸರ್ಜರಿಗೆ ರಾಜ್ಯ ಸರ್ಕಾರ ಮುಂದಾಗಿದೆ.‌ ನಕಲಿ ಫಲಾನುಭವಿಗಳನ್ನ ಪತ್ತೆ ಹಚ್ಚುವುದಕ್ಕಾಗಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡಲು ಸೂಚಿಸಿದೆ.

ಉಚಿತ ವಿದ್ಯುತ್‌ ಪಡೆಯಲು ಹೊಸದಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯ ಮಾಡಿದೆ. ಗೃಹಜ್ಯೋತಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕಾದ್ರೆ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯ ಎಂದು ಸರ್ಕಾರ ಹೇಳಿದೆ.

ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆ (Free Electricity Scheme) ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಬಹುದೊಡ್ಡ ಸಹಾಯ ಮಾಡಿದೆ. ಪ್ರತಿ ತಿಂಗಳು ಸಾವಿರಾರು ರೂಪಾಯಿ ಕರೆಂಟ್‌ ಬಿಲ್‌ ಕಟ್ಟುತ್ತಿದ್ದ ಜನರಿಗೆ ಇದು ಬಿಗ್‌ ರಿಲೀಫ್‌ ನೀಡಿದೆ. ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಆದರೆ ಇತ್ತೀಚೆಗೆ ಸರ್ಕಾರ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಕೆಲವು ಹೊಸ ನಿಯಮಗಳನ್ನು ಜಾರಿಗೆ ತಂದಿದೆ. ಎಲ್ಲರೂ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಹೊಸ ನಿಯಮಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯವಾಗಿದೆ.

ಕರ್ನಾಟಕ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ Free Electricity Scheme ಅಥವಾ ಗೃಹಜ್ಯೋತಿ ಯೋಜನೆಯೂ ಒಂದಾಗಿದೆ. ಇದರ ಮುಖ್ಯ ಉದ್ದೇಶ ಜನರ ವಿದ್ಯುತ್ ವೆಚ್ಚವನ್ನು ಕಡಿಮೆ ಮಾಡುವುದು. ಈ ಯೋಜನೆಯಡಿ ಮನೆಗಳಿಗೆ ತಿಂಗಳಿಗೆ 200 ಯೂನಿಟ್ ತನಕ ಉಚಿತ ವಿದ್ಯುತ್ ನೀಡಲಾಗುತ್ತದೆ.

ಗೃಹಜ್ಯೋತಿ ಯೋಜನೆಯ ಮೂಲಕ ಸರ್ಕಾರ ನೇರವಾಗಿ ವಿದ್ಯುತ್ ಕಂಪನಿಗಳಿಗೆ ಸಬ್ಸಿಡಿ ನೀಡುತ್ತದೆ. ಆದ್ದರಿಂದ ಅರ್ಹ ಕುಟುಂಬಗಳಿಗೆ ಶೂನ್ಯ ವಿದ್ಯುತ್ ಬಿಲ್ ಬರುತ್ತದೆ. ಇತ್ತೀಚೆಗೆ ಸರ್ಕಾರ ಕೆಲವು ಪ್ರಮುಖ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದಿದೆ.

ಗೃಹಜ್ಯೋತಿ ಯೋಜನೆಯಲ್ಲಿ ಬದಲಾದ ನಿಯಮಗಳು:

1. 200 ಯೂನಿಟ್ ಮೀರಿದರೆ ಸಂಪೂರ್ಣ ಬಿಲ್ ಕಟ್ಟಬೇಕು: ಸರ್ಕಾರ ಜಾರಿಗೆ ತಂದ ಹೊಸ ನಿಯಮದ ಪ್ರಕಾರ, ನೀವು ಒಂದು ತಿಂಗಳಲ್ಲಿ 200 ಯೂನಿಟ್ ಮೀರಿದರೆ ಉಚಿತ ವಿದ್ಯುತ್ ಸಿಗುವುದಿಲ್ಲ. ನೀವು ಸಂಪೂರ್ಣ ಬಿಲ್ ಕಟ್ಟಬೇಕು.

2. ಸರಾಸರಿ ಬಳಕೆಯ ಆಧಾರದಲ್ಲಿ ಅರ್ಹತೆ: ನಿಮ್ಮ ಕಳೆದ 12 ತಿಂಗಳ ಸರಾಸರಿ ವಿದ್ಯುತ್ ಬಳಕೆಯನ್ನು ಆಧರಿಸಿ ಉಚಿತ ಯೂನಿಟ್ ನಿರ್ಧರಿಸಲಾಗುತ್ತದೆ. ಉದಾಹರಣೆ: ಸರಾಸರಿ ಬಳಕೆ = 150 ಯೂನಿಟ್, ಉಚಿತ ವಿದ್ಯುತ್ = ಸುಮಾರು 165 ಯೂನಿಟ್. ಇದಕ್ಕಿಂತ ಹೆಚ್ಚು ಬಳಸಿದರೆ ಹೆಚ್ಚುವರಿ ಯೂನಿಟ್‌ಗೆ ಹಣ ಕಟ್ಟಬೇಕು.

3. ಹೊಸ ಮನೆಗಳಿಗೆ ಕಡಿಮೆ ಯೂನಿಟ್ ಆರಂಭದಲ್ಲಿ ಸಿಗಬಹುದು: ಹೊಸ ಮನೆ ಅಥವಾ ಹೊಸ ಮೀಟರ್ ಇದ್ದರೆ ಮೊದಲಿಗೆ ಸುಮಾರು 53-59 ಯೂನಿಟ್ ಮಾತ್ರ ಉಚಿತವಾಗಿ ಸಿಗಬಹುದು. ನಂತರ 1 ವರ್ಷದ ಸರಾಸರಿ ಬಳಕೆಯ ಆಧಾರದಲ್ಲಿ ಹೆಚ್ಚಿಸಲಾಗುತ್ತದೆ.

4. Aadhaar ಲಿಂಕ್ ಮಾಡುವುದು ಕಡ್ಡಾಯ: ಈ ಯೋಜನೆಯ ಲಾಭ ಪಡೆಯಲು ನಿಮ್ಮ ವಿದ್ಯುತ್ ಖಾತೆಯನ್ನು Aadhaar ಜೊತೆ ಲಿಂಕ್ ಮಾಡಬೇಕು. ಈ ಯೋಜನೆ ಕೇವಲ ಮನೆ ಬಳಕೆಗೆ ಮಾತ್ರ ಅನ್ವಯಿಸುತ್ತದೆ. ಅಂಗಡಿ ಅಥವಾ ವ್ಯವಹಾರಗಳಿಗೆ ಅನ್ವಯಿಸುವುದಿಲ್ಲ.

ಗೃಹಜ್ಯೋತಿ ಯೋಜನೆಯ ಲಾಭ ಪಡೆಯಲು ಇರುವ ಷರತ್ತುಗಳು:

  • ಕರ್ನಾಟಕ ನಿವಾಸಿಯಾಗಿರಬೇಕು
  • ಮನೆ ಬಳಕೆಯ ವಿದ್ಯುತ್ ಮೀಟರ್ ಇರಬೇಕು
  • ಪ್ರತಿ ತಿಂಗಳ ಸರಾಸರಿ ಬಳಕೆ 200 ಯೂನಿಟ್ ಒಳಗೆ ಇರಬೇಕು
  • Aadhaar ಲಿಂಕ್ ಮಾಡಿರಬೇಕು

ಉಚಿತ್‌ ವಿದ್ಯುತ್ ಬಿಲ್‌ಗೆ ಅರ್ಜಿ ಸಲ್ಲಿಸುವ ವಿಧಾನ

  • Seva Sindhu ವೆಬ್‌ಸೈಟ್ ತೆರೆಯಿರಿ
  • Gruha Jyothi Scheme ಆಯ್ಕೆ ಮಾಡಿ
  • Aadhaar ಮತ್ತು Account ID ನಮೂದಿಸಿ
  • ಅರ್ಜಿ ಸಲ್ಲಿಸಿ
  • ನಂತರ ನಿಮ್ಮ ವಿದ್ಯುತ್ ಬಿಲ್ಲಿನಲ್ಲಿ ಲಾಭ ಕಾಣಬಹುದು

Free Electricity Scheme ಕರ್ನಾಟಕ ಸರ್ಕಾರದ ಅತ್ಯಂತ ಉಪಯುಕ್ತ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯ ಮೂಲಕ ಲಕ್ಷಾಂತರ ಕುಟುಂಬಗಳು ವಿದ್ಯುತ್ ಬಿಲ್ ಕಟ್ಟುವ ಆತಂಕದಿಂದ ಮುಕ್ತರಾಗಿದ್ದಾರೆ. ಆದರೆ ಹೊಸ ನಿಯಮಗಳ ಪ್ರಕಾರ 200 ಯೂನಿಟ್ ಮೀರಿದರೆ ಸಂಪೂರ್ಣ ಬಿಲ್ ಕಟ್ಟಬೇಕಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ವಿದ್ಯುತ್ ಬಳಕೆಯನ್ನು ನಿಯಂತ್ರಿಸಬೇಕು. Aadhaar ಲಿಂಕ್ ಮಾಡುವುದು ಮತ್ತು ಸರಿಯಾದ ಮಾಹಿತಿ ನೀಡುವುದು ಅತ್ಯಗತ್ಯವಾಗಿದೆ. ಅಲ್ಲದೇ ನಿಮ್ಮ ಮೀಟರ್‌ನ ವರ್ಷದ ವಿದ್ಯುತ್‌ ಬಳಕೆಯ ಸರಾಸರಿಯನ್ನು ತೆಗೆದು ಈ ವರ್ಷದ ಫ್ರೀ ವಿದ್ಯುತ್‌ ನೀಡಲಾಗುತ್ತದೆ. ಈ ಯೋಜನೆಯ ಲಾಭವನ್ನು ಪಡೆಯಲು ಎಲ್ಲಾ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು.

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

TAGGED:everyone will not get free electricity.The revision of the Grihajyoti has also begun! From now on
Share This Article
Facebook Twitter Copy Link Print
Previous Article Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?