Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ
ಕರ್ನಾಟಕಪ್ರಮುಖ

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

Share
2 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆಯಲು ಇನ್ಮುಂದೆ ಮತದಾರರ ಗುರುತಿನ ಚೀಟಿ (Voter ID) ಕಡ್ಡಾಯವಾಗಲಿದೆ.

ಹೊರ ರಾಜ್ಯದವರಿಗೆ ಉಚಿತ ಬಸ್ ಪ್ರಯಾಣವಾಗಲಿ ಅಥವಾ ಉಚಿತ ವಿದ್ಯುತ್ ಆಗಲಿ ಸಿಗುವುದಿಲ್ಲ.

ಕೇವಲ ಕರ್ನಾಟಕದಲ್ಲಿ ಮತದಾನದ ಹಕ್ಕು ಹೊಂದಿರುವ ಅರ್ಹ ಫಲಾನುಭವಿಗಳಿಗೆ ಮಾತ್ರ ಈ ಯೋಜನೆಗಳು ಸೀಮಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (ಎಸ್‌ಎಸ್‌ಆರ್) ವೇಳೆ ಒಂದು ವೇಳೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಂಡರೆ, ಅವರಿಗೆ ಗ್ಯಾರಂಟಿ ಯೋಜನೆಗಳ ಲಾಭವೂ ಕೈತಪ್ಪಲಿದೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ಸರ್ಕಾರ ಕರ್ನಾಟಕದ ಜನರಿಗಾಗಿ ಈ ಯೋಜನೆಗಳನ್ನು ನೀಡುತ್ತಿದೆಯೇ ಹೊರತು ಅನ್ಯ ರಾಜ್ಯದವರಿಗಲ್ಲ. ಉಚಿತ ವಿದ್ಯುತ್ ಅನ್ನು ನಮ್ಮ ರಾಜ್ಯದ ಮತದಾರರಿಗೆ ನೀಡಬೇಕೇ ವಿನಃ ಬೇರೆ ರಾಜ್ಯದವರಿಗೆ ಏಕೆ ಕೊಡಬೇಕು?” ಎಂದು ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಸ್ಸುಗಳಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಕೇವಲ ರಾಜ್ಯದ ಮತದಾನದ ಹಕ್ಕು ಇರುವವರಿಗೆ ಮಾತ್ರ ‘ಸ್ಮಾರ್ಟ್ ಕಾರ್ಡ್’ ವಿತರಣೆ ಮಾಡುವ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ವಾರ್ಷಿಕ 72,000 ಕೋಟಿ ರೂ. ಹಾಗೂ ಗೃಹಜ್ಯೋತಿ ಯೋಜನೆಗೆ 26,000 ಕೋಟಿ ರೂ. ವೆಚ್ಚವಾಗುತ್ತಿದೆ. ಆದರೆ ಇತ್ತೀಚೆಗೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳು ದುರ್ಬಳಕೆಯಾಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ.ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೆಲವು ಫಲಾನುಭವಿಗಳು ನಕಲಿ ಫೈನಾನ್ಸ್ ವ್ಯವಹಾರಗಳಿಗೆ ಮತ್ತು ಬೇರೆ ಸ್ಕೀಂಗಳಿಗೆ 30-35% ಭಾರಿ ಬಡ್ಡಿಗೆ ಹಾಕುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಬೆಳಗಾವಿಯಲ್ಲಿ ಇಂತಹ ಪ್ರಕರಣಗಳು ಬೆಳಕಿಗೆ ಬಂದಿದ್ದು, ಗ್ರಾಮ ಪಂಚಾಯಿತಿಯಿಂದ ತಾಲೂಕು ಪಂಚಾಯಿತಿವರೆಗೆ ಇಂತಹ ದಂಧೆಗಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.

ಮೃತರ ಹೆಸರಿನಲ್ಲಿ ಇನ್ನೂ ಗೃಹಲಕ್ಷ್ಮಿ ಹಣ ಪಡೆಯುತ್ತಿರುವುದು ಹಾಗೂ ಗೃಹ ಜ್ಯೋತಿಯಡಿ ವಾಣಿಜ್ಯ ಬಳಕೆಗೆ ವಿದ್ಯುತ್ ಉಪಯೋಗಿಸುತ್ತಿರುವ ಆರೋಪಗಳೂ ಕೇಳಿಬಂದಿವೆ. ಹೀಗಾಗಿ ಅರ್ಹರಿಗಷ್ಟೇ ಯೋಜನೆ ತಲುಪಿಸಲು ಈ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

TAGGED:CM DK says voter ID is mandatory to avail benefits of guarantee schemes
Share This Article
Facebook Twitter Copy Link Print
Previous Article ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?
Next Article ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

Popular Posts

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read
ಕರ್ನಾಟಕಪ್ರಮುಖ

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read
ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?