Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!
ಕರ್ನಾಟಕಕೃಷಿದೇಶಪ್ರಮುಖ

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

Share
2 Min Read
SHARE

newsics.com / ನ್ಯೂಸಿಕ್ಸ್

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ತೀವ್ರ ದುರ್ಬಲಗೊಂಡಿದ್ದು, ಜೂನ್ ಮೊದಲ ಎರಡು ವಾರಗಳಲ್ಲಿ ವಾಡಿಕೆಗಿಂತ ಭಾರಿ ಕಡಿಮೆ ಮಳೆಯಾಗಿದೆ. ಇದರಿಂದಾಗಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿದಿದ್ದು, ತೀವ್ರ ಆತಂಕ ಎದುರಾಗಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸದ್ಯ ಶೇ. 21 ರಷ್ಟು ಮುಂಗಾರು ಮಳೆ ಕೊರತೆಯಾಗಿದ್ದರೆ, ದೇಶಾದ್ಯಂತ ಒಟ್ಟಾರೆ ಶೇ. 64 ರಷ್ಟು ಮಳೆಯ ಅಭಾವ ಸೃಷ್ಟಿಯಾಗಿದೆ. ಜೂನ್ 4 ರಿಂದ 15 ರವರೆಗಿನ ಅವಧಿಯಲ್ಲಿ ದೇಶದಲ್ಲಿ ವಾಡಿಕೆಯಂತೆ 53 ಮಿ.ಮೀ ಮಳೆಯಾಗಬೇಕಿತ್ತು, ಆದರೆ ಕೇವಲ 19 ಮಿ.ಮೀ ನಷ್ಟು ಮಳೆ ಮಾತ್ರ ಸುರಿದಿದೆ ಎಂದು ವರದಿಯಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಕೈಕೊಟ್ಟಿದ್ದು, ಕರಾವಳಿ ಮತ್ತು ಕಾವೇರಿ ಕಣಿವೆಯಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಶೇ. 41 ರಷ್ಟು ಹಾಗೂ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿಗೆ ಕುಡಿಯುವ ನೀರು ಒದಗಿಸುವ ಕಾವೇರಿ ಕಣಿವೆಯ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 36 ರಷ್ಟು ಕಡಿಮೆ ಮಳೆಯಾಗಿದೆ. ಇದೇ ಅವಧಿಯಲ್ಲಿ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಕ್ರಮವಾಗಿ ಶೇ. 2 ಮತ್ತು ಶೇ. 1 ರಷ್ಟು ಮಳೆ ಕೊರತೆ ದಾಖಲಾಗಿದೆ. ಪೂರ್ವ ಮುಂಗಾರು ಹಾಗೂ ದುರ್ಬಲ ಮುಂಗಾರಿನ ಪರಿಣಾಮವಾಗಿ ಕೃಷ್ಣಾ ಮತ್ತು ಕಾವೇರಿ ಕಣಿವೆಯ ಜಲಾಶಯಗಳ ನೀರಿನ ಮಟ್ಟ ತೀವ್ರವಾಗಿ ಕುಸಿದಿದ್ದು, ಸದ್ಯ ಡ್ಯಾಂಗಳಲ್ಲಿ ಕೇವಲ ಶೇ. 23 ರಷ್ಟು ಮಾತ್ರ ನೀರು ಭರ್ತಿಯಾಗಿದೆ.

ಈ ಮಧ್ಯೆ, ಮುಂದಿನ ದಿನ ತಿಂಗಳು ‘ಎಲ್ ನಿನೋ’ ಭೀತಿಯೂ ಎದುರಾಗಿದೆ. ಪೂರ್ವ ಮುಂಗಾರು ಉತ್ತಮವಾಗಿ ಬಾರದ ಕಾರಣ ಭೂಮಿಯಲ್ಲಿ ನೀರು ಸರಿಯಾಗಿ ಇಂಗಿಲ್ಲ. ಇದರ ಬೆನ್ನಲ್ಲೇ ಮುಂದಿನ ತಿಂಗಳು ‘ಎಲ್ ನಿನೋ’ ಪರಿಣಾಮ ರಾಜ್ಯದ ಮುಂಗಾರಿನ ಮೇಲೆ ಬೀರುವ ಸಾಧ್ಯತೆ ದಟ್ಟವಾಗಿದೆ. ಇದರಿಂದ ಮಳೆ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಆತಂಕವಿದ್ದು, ಎಲ್ ನಿನೋ ಪರಿಣಾಮ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

 

TAGGED:there is a 21% deficit in monsoon rains in the state!This time
Share This Article
Facebook Twitter Copy Link Print
Previous Article ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ
Next Article ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

Popular Posts

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?