newsics.com / ನ್ಯೂಸಿಕ್ಸ್
ದಾವಣಗೆರೆ: ಜಿಮ್‌ನಲ್ಲಿ ವರ್ಕ್‌ಔಟ್ ಮುಗಿಸಿಕೊಂಡು ಮನೆಗೆ ಬಂದ ಕೂಡಲೇ ಏಕಾಏಕಿ ಕುಸಿದುಬಿದ್ದು ರಾಷ್ಟ್ರಮಟ್ಟದ ಬಾಡಿಬಿಲ್ಡರ್ 26 ವರ್ಷದ ಸುಶೀಲ್ ಕುಮಾರ್ ಮೃತಪಟ್ಟಿದ್ದಾರೆ.
ಕೆಟಿಜೆ ಬಡಾವಣೆ ನಿವಾಸಿಯಾಗಿರುವ ಸುಶೀಲ್ ಕುಮಾರ್ ಹಲವು ರಾಜ್ಯಮಟ್ಟದ, ರಾಷ್ಟ್ರಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದರು.
ಸದ್ಯ ಅಂತರರಾಷ್ಟ್ರೀಯ ಮಟ್ಟದ ಬಾಡಿ ಬಿಲ್ಡಂಗ್ ಸ್ಪರ್ಧೆಗೆ ಸಿದ್ಧರಾಗುತ್ತಿದ್ದರು. ಚಿಕ್ಕ ವಯಸ್ಸಿನಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ್ದ ಯುವಕ ದಿಢೀರ್ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಸಾವಿಗೂ ಮುನ್ನ ಆಗಿದ್ದೇನು?
ಮಂಗಳವಾರ ಸಂಜೆ ಜಿಮ್‌ಗೆ ತೆರಳಿದ್ದ ಸುಶೀಲ್ ಕುಮಾರ್ ಅವರು ರಾತ್ರಿ 8.30 ರ ವೇಳೆಗೆ ಮನೆಗೆ ಹಿಂದಿರುಗಿದ್ದರು. ಮನೆಯಲ್ಲಿ ಊಟ ಮಾಡಿ ಕುಳಿತಿದ್ದಾಗ ಏಕಾಏಕಿ ಕುಸಿದು ನೆಲಕ್ಕೆ ಬಿದ್ದಿದ್ದಾರೆ.
ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ದಾರಿ ಮಧ್ಯೆಯೇ ಹೃದಯಸ್ತಂಭನದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?