Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ನೆರೆಮನೆಯ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ಮನೆಯೊಂದರ ಕಾಂಪೌಂಡ್ ಗೋಡೆ ಮತ್ತು ಗೇಟ್ ಬಿದ್ದ ಪರಿಣಾಮ 5 ವರ್ಷದ ಪುಟಾಣಿ ಮಗು ಮೃತಪಟ್ಟಿದ್ದು ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ದುರ್ದೈವಿ ಮಗುವನ್ನು ಯಾದಗಿರಿ ಮೂಲದ ದಾವಲ್ ಸಾಬ್ ಅವರ ಪುತ್ರ ಅಫೀನ್ (5) ಎಂದು ಗುರುತಿಸಲಾಗಿದೆ.

ವೃತ್ತಿಯಲ್ಲಿ ಕ್ಯಾಬ್ ಚಾಲಕರಾಗಿರುವ ದಾವಲ್ ಸಾಬ್ ಅವರು ಬೆಂಗಳೂರಿನಲ್ಲಿ ಹೊಸ ಕೆಲಸದ ಹುಡುಕಾಟದಲ್ಲಿದ್ದರು. ಅವರ ಪತ್ನಿ ಹಾಗೂ ಮಗು ಅಫೀನ್ ಕೇವಲ ಐದು ದಿನಗಳ ಹಿಂದಷ್ಟೇ ಬಾಗಲೂರು ವ್ಯಾಪ್ತಿಯ ಬಂಡಿಕೊಡಿಗೇಹಳ್ಳಿಯಲ್ಲಿರುವ ತಮ್ಮ ತಂಗಿಯ ಮನೆಗೆ ಬಂದಿದ್ದರು.ಬುಧವಾರ ಸಂಜೆ ಸುಮಾರು 6:30ರ ವೇಳೆಗೆ, ಅಫೀನ್ ಪಕ್ಕದ ಮನೆಯ ಮಕ್ಕಳಾದ ಸಮನ್ವಿ ಹಾಗೂ ಮತ್ತೊಂದು ಮಗುವಿನೊಂದಿಗೆ ಬಿ.ಸಿ. ನರಸಪ್ಪ ಎಂಬುವರ ಮನೆಯ ಕಾಂಪೌಂಡ್ ಗೇಟ್ ಬಳಿ ಆಟವಾಡುತ್ತಿದ್ದನು. ಮಕ್ಕಳು ಆಟದ ಭರದಲ್ಲಿ ಕಬ್ಬಿಣದ ಗೇಟ್ ಹಿಡಿದು ಜೀಕಾಡುತ್ತಿದ್ದಾಗ, ಗೇಟ್‌ನ ಭಾರ ತಾಳಲಾರದೆ ಕಾಂಪೌಂಡ್ ಗೋಡೆಯು ಗೇಟ್ ಸಮೇತ ಒಮ್ಮೆಲೇ ಮಕ್ಕಳ ಮೇಲೆ ಕುಸಿದು ಬಿದ್ದಿದೆ.ಈ ಘಟನೆಯನ್ನು ನೋಡಿ ಸ್ಥಳೀಯರು ತಕ್ಷಣವೇ ಓಡಿ ಬಂದು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಮಕ್ಕಳಿಬ್ಬರನ್ನು ಹೊರತೆಗೆದು ಖಾಸಗಿ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ, ತಲೆ ಹಾಗೂ ಎದೆಯ ಭಾಗಕ್ಕೆ ತೀವ್ರವಾಗಿ ಪೆಟ್ಟಾಗಿದ್ದ ಅಫೀನ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಮತ್ತೊಂದು ಮಗು ಸಮನ್ವಿಗೆ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಬಾಗಲೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಂಪೌಂಡ್ ಗೋಡೆಯ ಅವೈಜ್ಞಾನಿಕ ನಿರ್ಮಾಣದ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

 

TAGGED:Compound wall with gate collapses while children are playing; 5-year-old child dies
Share This Article
Facebook Twitter Copy Link Print
Previous Article ಫಿಫಾ ವಿಶ್ವಕಪ್: ಎಂಬಾಪೆ ದಾಖಲೆಯ ಬೇಟೆ, ಸೆನೆಗಲ್ ವಿರುದ್ಧ ಫ್ರಾನ್ಸ್‌ಗೆ ಭರ್ಜರಿ ಜಯ – Newsics
Next Article ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

Popular Posts

ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಾವಣೆ ವಿವಾದ: ‘ರಾಜಕೀಯ ಉದ್ದೇಶದ ನಡೆ’ ಎಂದ ಟಿಎಂಸಿ

1 Min Read

ವೆಂಕಟೇಶ್-ಕಲ್ಯಾಣ್ ರಾಮ್ ಜೊತೆ ಅನಿಲ್ ರವಿಪುಡಿ ಹೊಸ ಸಿನಿಮಾ ಆರಂಭ; ಕೀರ್ತಿ ಸುರೇಶ್ ಎಂಟ್ರಿ

1 Min Read

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read

ಪಶ್ಚಿಮ ಏಷ್ಯಾ ಯುದ್ಧಕ್ಕೆ ಅಂತ್ಯ? ಟ್ರಂಪ್–ಇರಾನ್ ಅಧ್ಯಕ್ಷರ ಐತಿಹಾಸಿಕ ಒಪ್ಪಂದ

1 Min Read

You Might Also Like

ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ; ಇಂದಿನ ಬೆಲೆ ಎಷ್ಟು?

1 Min Read
ಪ್ರಮುಖ

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read
ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?